ಕೇಂದ್ರದ ಮಾಜಿ ಸಚಿವ, ರೈತ ಹೋರಾಟಗಾರ ಬಾಬಾಗೌಡ ಪಾಟೀಲ ವಿಧಿವಶ
Team Udayavani, May 21, 2021, 9:37 AM IST
ಬೆಳಗಾವಿ: ಕೇಂದ್ರದ ಮಾಜಿ ಸಚಿವ, ರೈತ ಹೋರಾಟಗಾರ ಬಾಬಾಗೌಡ ಪಾಟೀಲ ಅವರು ಅನಾರೋಗ್ಯದಿಂದ ಶುಕ್ರವಾರ (ಮೇ.21) ಬೆಳಗಿನ ಜಾವ ವಿಧಿವಶರಾದರು.
ಕೆಲ ದಿನಗಳಿಂದ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಬಾಗೌಡ ಪಾಟೀಲರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. 1945 ಜನವರಿ 6ರಂದು ಜನಿಸಿದ್ದ ಅವರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.
1998ರಲ್ಲಿ ಬೆಳಗಾವಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ರೈತ ಚಳವಳಿ ಮೂಲಕವೇ ತಮ್ಮನ್ನು ಗುರುತಿಸಿಕೊಂಡಿದ್ದರು. ಅಪ್ಪಟ ರೈತ ಹೋರಾಟಗಾರರಾಗಿದ್ದ ಬಾಬಾಗೌಡರು ಅಟಲ್ ಬಿಹಾರಿ ವಾಜಪೇಯಿ ಸಂಪುಟದಲ್ಲಿ ಸಚಿವರಾಗಿದ್ದರು. ಬಿಜೆಪಿ, ಜನತಾದಳ (ಎಸ್), ಸಮಾಜವಾದಿ ಪಕ್ಷ ಸೇರಿದಂತೆ ಅನೇಕ ಪಕ್ಷ ಗಳಿಗೆ ಆಗಾಗ ಪಕ್ಷಾಂತರಗೊಳ್ಳುತ್ತಿದ್ದರು. ಎಲ್ಲಪಕ್ಷಗಳಿಂದಲೂ ಚುನಾವಣೆಗೆ ಸ್ಪರ್ಧಿಸಿದ್ದರು. ಬೆಳಗಾವಿ ಹಾಗೂ ಧಾರವಾಡ ಭಾಗದಲ್ಲಿ ಅನೇಕ ರೈತ ಹೋರಾಟಗಳಲ್ಲಿ ಪಾಲ್ಗೊಳ್ಳುತ್ತಿದ್ದರು.
ಇದನ್ನೂ ಓದಿ: ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನ ಪತನ: ಪೈಲಟ್ ಸಾವು
ಬೆಳಗಾವಿ ಲೋಕಸಭಾ ಉಪಚುನಾವಣೆ ವೇಳೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ತಮ್ಮ ಮನೆಗೆ ಕರೆಸಿಕೊಂಡು ಮಾತುಕತೆ ನಡೆಸಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಬೆಂಬಲ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.