ರಾಯಣ್ಣ ಶೌರ್ಯ ಮಕ್ಕಳಿಗೆ ತಿಳಿಸಿ

Team Udayavani, Jan 28, 2019, 9:40 AM IST

28-january-17.jpg

ಬೈಲಹೊಂಗಲ: ಭಾರತದ ಗೌರವವನ್ನು ಎತ್ತಿ ಹಿಡಿದು ಸ್ವಾತಂತ್ರ್ಯದ ಕಿಡಿ ಹೊತ್ತಿಸಿದ ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ಶೌರ್ಯ, ಸಾಹಸ, ದೇಶಪ್ರೇಮ ಬಗ್ಗೆ ಮಕ್ಕಳಿಗೆ ತಿಳಿಸಿಕೊಡುವ ಜವಾಬ್ದಾರಿ ಪ್ರತಿಯೊಬ್ಬ ಶಿಕ್ಷಕ, ಪಾಲಕರ ಮೇಲಿದೆ ಎಂದು ಸಂಸದ ಸುರೇಶ ಅಂಗಡಿ ಹೇಳಿದರು.

ಪಟ್ಟಣದ ಮುರಗೋಡ ರಸ್ತೆಯಲ್ಲಿ ಕಿತ್ತೂರು ಚನ್ನಮ್ಮ ಅಭಿವೃದ್ಧಿ ಪ್ರಾಧಿಕಾರ, ಪುರಸಭೆ ವತಿಯಿಂದ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ನೂತನ ಪ್ರತಿಮೆ, ಪ್ಲಾಟ್ ಫಾರ್ಮ್, ಐಕ್ಯ ಸ್ಥಳದಲ್ಲಿರುವ ದ್ವಿಮುಖ ರಸ್ತೆಯ ವಿದ್ಯುತ್‌ ಎಲ್‌ಇಡಿ ಬಲ್ಬ್ ಉದ್ಘಾಟಿಸಿ ಮಾತನಾಡಿದ ಅವರು, ಇನ್ನೂ ಮುಂದೆ ಬೆಳಗಾವಿಯಿಂದ ದೇಶ, ವಿದೇಶಗಳಿಗೆ ವಿಮಾನ ಹಾರಾಟ ಆರಂಭಗೊಳ್ಳಲಿದೆ. ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚನ್ನಮ್ಮನ ಹೆಸರಿಡಲು ರಾಜ್ಯ ಸರ್ಕಾರದಿಂದ ಅನುಮೋದನೆ ಕಳುಹಿಸಲಾಗಿದೆ. ಕೇಂದ್ರ ಸರ್ಕಾರದಲ್ಲಿ ಅದರ ಜವಾಬ್ದಾರಿ ವಹಿಸಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚನ್ನಮ್ಮನ ಹೆಸರಿಡಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದರು.

ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ಚನ್ನಮ್ಮನ ಐಕ್ಯಸ್ಥಳ ಅಭಿವೃದ್ಧಿಗೆ ಸುಮಾರು 3 ಕೋಟಿ ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿಪಡಿಸಲಾಗುವುದಲ್ಲದೇ ಪ್ರತಿಮೆಗೆ ಲೋಟಸ್‌ ಮಾದರಿಯಲ್ಲಿ ಸುಮಾರು 75 ಲಕ್ಷ ರೂ.ವೆಚ್ಚದಲ್ಲಿ ಗ್ಲಾಸ್‌ ಹೌಸ್‌ ನಿರ್ಮಿಸಲಾಗುವುದು ಎಂದರು.

ಎಸಿ ಶಿವಾನಂದ ಭಜಂತ್ರಿ, ಚಿತ್ರನಟ ಶಿವರಂಜನ ಬೋಳನ್ನವರ, ಉದ್ಯಮಿ ವಿಜಯ ಮೆಟಗುಡ್ಡ, ಕಲಾವಿದ ಸಿ.ಕೆ. ಮೆಕ್ಕೆದ, ಕಸಾಪ ಮಾಜಿ ತಾಲೂಕಾಧ್ಯಕ್ಷ ಈಶ್ವರ ಹೋಟಿ, ಎಪಿಎಂಸಿ ಸದಸ್ಯ ಎಫ್‌.ಎಸ್‌.ಸಿದ್ದನಗೌಡರ ಮಾತನಾಡಿದರು.

ಭಗಳಂಬಾದೇವಿ ಆರಾಧಕ ಈರಯ್ಯಸ್ವಾಮಿ ಹಿರೇಮಠ, ಮಹಾಂತಯ್ಯಶಾಸ್ತ್ರಿ ಆರಾದ್ರಿಮಠ ಸಾನ್ನಿಧ್ಯ ವಹಿಸಿದ್ದರು. ತಹಶೀಲ್ದಾರ್‌ ಡಾ.ಡಿ.ಎಚ್.ಹೂಗಾರ, ಮುಖ್ಯಾಧಿಕಾರಿ ಶಿವಪ್ಪ ಅಂಬಿಗೇರ, ಅಭಿಯಂತರಾದ ಎಸ್‌.ಬಿ.ಪಾಟೀಲ, ಎಸ್‌.ಕೆ.ಮುಗಸಜ್ಜಿ, ಸಮಾಜ ಕಲ್ಯಾಣ ಅಧಿಕಾರಿ ಉಮೇಶ ಉಣ್ಣಿ, ತಾಪಂ ಸದಸ್ಯೆ ಶೈಲಾ ಸಿದ್ರಾಮನಿ, ತಾಪಂ ಇಒ ಸಮೀರ್‌ ಮುಲ್ಲಾ, ಸಿಪಿಐ ಮಂಜುನಾಥ ಕುಸುಗಲ್ಲ, ಪಿಎಸ್‌ಐ ಎಂ.ಎಸ್‌.ಹೂಗಾರ, ಗುರುಪುತ್ರಪ್ಪ ಹೊಸಮನಿ, ಪಾರಿಶಪ್ಪ ಭಾವಿ, ಸ್ವಾತಂತ್ರ್ಯ ಹೋರಾಟಗಾರ ಮುರುಳೀಧರ ಮಾಳ್ಳೋದೆ, ಕುಮಾರ ದೇಶನೂರ, ಗುರುಪಾದ ಕಳ್ಳಿ, ಸುರೇಶ ಮಾಟೋಳಿ, ಬಸವರಾಜ ನೀಲಗಾರ, ಬಸವರಾಜ ಜನ್ಮಟ್ಟಿ ಇತರರು ಹಾಜರಿದ್ದರು.

ಟಾಪ್ ನ್ಯೂಸ್

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.