ಬೈಲಹೊಂಗಲದಲ್ಲಿ ತಗ್ಗು ದಿನ್ನೆ ರಸ್ತೆಗೆ ಬೇಸತ್ತ ಜನತೆ

Team Udayavani, Mar 23, 2021, 12:23 PM IST

ಬೈಲಹೊಂಗಲದಲ್ಲಿ ತಗ್ಗು ದಿನ್ನೆ ರಸ್ತೆಗೆ ಬೇಸತ್ತ ಜನತೆ

ಬೈಲಹೊಂಗಲ: ಪಟ್ಟಣದ ವಿವಿಧ ಬಡಾವಣೆಗಳಲ್ಲಿ ರಸ್ತೆ ರಿಪೇರಿ ಮಾಡಿದ ಕೆಲವೇ ದಿನಗಳಲ್ಲಿ ತಗ್ಗುದಿನ್ನೆಗಳಿಂದ ಜನತೆ ಬೇಸತ್ತು ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಒಂದು ವರ್ಷಗಳ ಹಿಂದೆ ಲಕ್ಷಾಂತರ ರೂ. ವೆಚ್ಚ ಮಾಡಿ ಕಾಂಕ್ರೀಟ್‌ ರಸ್ತೆ ಕಾಮಗಾರಿಕೈಗೊಳ್ಳಲಾಗಿತ್ತು. ಕಾಮಗಾರಿ ಕೈಗೊಂಡ ಕೆಲವೇ ದಿನಗಳಲ್ಲಿ ಅಲ್ಲಲ್ಲಿ ಬಿರುಕು ಬಿಟ್ಟು ತಗ್ಗು ದಿನ್ನೆಗಳಾಗಿವೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೆ ಗುತ್ತಿಗೆದಾರರ ಇಎಂಡಿ ಹಣದಲ್ಲಿ ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳುವ ಭರವಸೆನೀಡುತ್ತಾರೆ. ಆದರೆ ಗುತ್ತಿಗೆದಾರನ ಮೇಲೆ ಕ್ರಮ ಕೈಗೊಳ್ಳದೆ ಜಾಣ ಕುರುಡು ಪ್ರದರ್ಶಿಸುತ್ತಾರೆ. ಕೇಂದ್ರ ಬಸ್‌ ನಿಲ್ದಾಣದ ಅಕ್ಕಪಕ್ಕದ ರಸ್ತೆಗಳು ಸಿಮೆಂಟ್‌ ಕಾಂಕ್ರೀಟ್‌ ಕಾಮಗಾರಿ ಕೈಗೊಂಡಒಂದೇ ವರ್ಷದಲ್ಲಿ ಕಿತ್ತಿರುವುದಕ್ಕೆ ವಾರ್ಡಿನ ನಾಗರಿಕರು ಕಾಮಗಾರಿ ನಿರ್ವಹಣೆ ಮಾಡಿದಭೂಸೇನಾ ನಿಗಮದ ಅಧಿ ಕಾರಿ, ಗುತ್ತಿಗೆದಾರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಕೋರ್ಟ್‌ ಪಕ್ಕದ ವಿನಾಯಕನಗರ, ಪ್ರಭುನಗರ 2,5,6 ನೇ ಕ್ರಾಸ್‌, ಹರಳಯ್ಯಕಾಲೋನಿ ರಸ್ತೆಯಲ್ಲಿ ತಗ್ಗು ದಿನ್ನೆಗಳಿಂದ ಬೈಕ್‌,ವಾಹನ ಸವಾರರಿಗೆ ತೊಂದರೆಯಾಗಿದೆ. ಈ ರಸ್ತೆಯಲ್ಲಿ ನಿತ್ಯ ಸಾವಿರಾರು ಜನರುಸಂಚರಿಸುತ್ತಾರೆ. ಇಂಥ ಕಳಪೆ ಕಾಮಗಾರಿಯಿಂದ ಜನರು ಬೇಸತ್ತಿದ್ದಾರೆ.

ಹರಳಯ್ಯ ಕಾಲೋನಿಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ತ್ಯಾಜ್ಯವಸ್ತು, ಕಸಕಡ್ಡಿಬೆಳೆದು ನಿಂತು, ನ್ಯಾಯಾಲಯಕ್ಕೆ ಬರುವವವರುಗಬ್ಬು ವಾಸನೆಯಿಂದ ಕಂಗೆಟ್ಟಿದ್ದಾರೆ. ಕಳೆದ ಹಲವುವರ್ಷಗಳಿಂದ ರಸ್ತೆ, ಗಟಾರು ದುರವಸ್ಥೆಯಿಂದಜನತೆಗೆ ಸಮಸ್ಯೆಯಾಗಿ ಪರಿಣಮಿಸಿದೆ. ಪಟ್ಟಣದಮಡಿವಾಳೇಶ್ವರ ದೇವಸ್ಥಾನದ ಹತ್ತಿರದ ರಸ್ತೆ,ಸಮರ್ಪಕವಾದ ಗಟಾರು ಇಲ್ಲದ ಕಾರಣಚರಂಡಿ ನೀರು ಸರಾಗವಾಗಿ ಸಾಗದೇ ರಸ್ತೆಮೇಲೆ ಹರಿದಾಡಿ, ಗಬ್ಬೆದ್ದು ನಾರುತ್ತಿದ್ದು, ರೋಗರುಜಿನಗಳ ತಾಣವಾಗಿದೆ. ಸಂಬಂಧಪಟ್ಟ ಮೇಲಾಧಿಕಾರಿಗಳು ರಸ್ತೆ ಕಾಮಗಾರಿ ಪರೀಶಿಲಿಸಿ ಗುತ್ತಿಗೆದಾರನ ಮೇಲೆ ಕ್ರಮ ಕೈಗೊಳ್ಳಬೇಕೆಂದುಒತ್ತಾಯಿಸಿದ್ದಾರೆ.

ಹರಳಯ್ಯ ಕಾಲೋನಿ ಪಕ್ಕದಲ್ಲಿ ಕೋರ್ಟ್‌, ಪೊಲೀಸ್‌ ಇಲಾಖೆ ಕಚೇರಿಗಳಿದ್ದು, ನಿತ್ಯ ನೂರಾರು ನಾಗರಿಕರು ಬರುತ್ತಾರೆ. ಈ ರಸ್ತೆಉದ್ದಕ್ಕೂ ತಗ್ಗುಗಳಾಗಿವೆ. ಗಟಾರು ಸ್ವತ್ಛತೆ ಕಾಣದೇ ತ್ಯಾಜ್ಯ, ಕಸಕಡ್ಡಿಗಳ ಸಂಗ್ರಹತಾಣವಾಗಿದೆ. ಈ ಕುರಿತು ಅಧಿಕಾರಿಗಳಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ .  -ಶ್ರೀಶೈಲ ಕಟ್ಟಿಮನಿ, ಸ್ಥಳೀಯರು

ಬಸ್‌ ನಿಲ್ದಾಣದ ಅಕ್ಕಪಕ್ಕ ರಸ್ತೆಗಳು ಬೇರೆ ಇಲಾಖೆ ಕಾಮಗಾರಿ ಕೈಗೊಂಡಿದ್ದು,ಅವುಗಳನ್ನು ಪರಿಶೀಲಿಸಿ ಕಳಪೆ ಕಾಮಗಾರಿಎಂದು ಕಂಡು ಬಂದಲ್ಲಿ ಗುತ್ತಿಗೆದಾರನಇಎಂಡಿ ಹಣದಲ್ಲಿ ರಸ್ತೆ ದುರಸ್ತಿಗೆ ಕ್ರಮಕೈಗೊಳ್ಳಲಾಗುತ್ತದೆ. ಹರಳಯ್ಯ ಕಾಲೋನಿ,ಪ್ರಭು ನಗರ, ಮಡಿವಾಳೇಶ್ವರ ನಗರ ರಸ್ತಗೆಳಿಗೆನಗರೋತ್ಥಾನ ಯೋಜನೆಯಡಿ ಕಾಮಗಾರಿಗೆ ಪ್ರಸ್ತಾವಣೆ ಸಲ್ಲಿಸಲಾಗಿದೆ. – ಕೆ.ಐ. ನಾಗನೂರ, ಪುರಸಭೆ ಮುಖ್ಯಾಧಿಕಾರಿ.

ಟಾಪ್ ನ್ಯೂಸ್

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.