Bailhongal: ಮಹಿಳೆಯರು ಸಂಘಟಿತರಾಗಲಿ: ಸುತ್ತೂರು ಶ್ರೀ

Team Udayavani, Nov 3, 2023, 2:21 PM IST

Bailhongal: ಮಹಿಳೆಯರು ಸಂಘಟಿತರಾಗಲಿ: ಸುತ್ತೂರು ಶ್ರೀ

ಬೈಲಹೊಂಗಲ: ಮಹಿಳೆಯರು ಸಾಮಾಜಿಕವಾಗಿ ಸಂಘಟಿತರಾಗಿ ಜಾತಿ, ಮತ, ಪಂಥ, ಬೇಧ, ಭಾವ ಎನ್ನದೇ ಧರ್ಮವನ್ನು ಕಟ್ಟುವುದು ಅತ್ಯವಶ್ಯವಾಗಿದೆ ಎಂದು ಸುತ್ತೂರು ಜಗದ್ಗುರು ಶ್ರೀ ವೀರಸಂಹಾಸನ ಮಹಾನಸಂಸ್ಥಾನ ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ಪಟ್ಟಣದ ಶಿವಬಸವ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತ, ಕದಳಿ ಮಹಿಳಾ ವೇದಿಕೆಯ ಜಿಲ್ಲಾ ಘಟಕದಿಂದ ನಡೆದ ಜಿಲ್ಲಾ ಮಟ್ಟದ ದ್ವಿತೀಯ ಕದಳಿ ಮಹಿಳಾ ಸಮ್ಮೇಳನದ ಸಾನ್ನಿಧ್ಯ ವಹಿಸಿ ಮಾತನಾಡಿ, 12 ನೇ ಶತಮಾನದ ಬಸವಾದಿ ಶರಣರ ಆಶಯದಂತೆ 21 ನೇ ಶತಮಾನದಲ್ಲಿ ಮಹಿಳೆಯರು ಸಂಘಟಿತರಾಗಿ ಶರಣೆ ಅಕ್ಕಮಹಾದೇವಿ ಅವರ ನಡೆ-ನುಡಿಗಳನ್ನು ಸಮಾಜಕ್ಕೆ ತಲುಪಿಸುತ್ತಿರುವುದು ಬಹುದೊಡ್ಡ ಸಾಧನೆಯಾಗಿದೆ. ಶರಣೆ ಪ್ರೇಮಾ ಅಂಗಡಿ ಅವರು 100 ದಿನಗಳ ಕಾಲ ಅಧಿಕ ಮಾಸದಲ್ಲಿ ವಿನೂತನ ವಚನೋತ್ಸವ ಕಾರ್ಯಕ್ರಮ ಹಮ್ಮಿಕೊಂಡು ಮನೆ, ಮನೆಗೆ ವಚನ ಸಾಹಿತ್ಯ ಮುಟ್ಟಿಸಿದ ಕಾರ್ಯ ಅಮೋಘವಾಗಿದೆ ಎಂದರು.

ಗದಗ-ಡಂಬಳ ಎಡೆಯೂರು ಜಗದ್ಗುರು ಶ್ರೀ ತೋಂಟದಾರ್ಯ ಸಂಸ್ಥಾನಮಠದ ಡಾ.ತೋಂಟದ ಸಿದ್ಧರಾಮ ಸ್ವಾಮಿಗಳು ಮಾತನಾಡಿ, ಎಲ್ಲ ಸಮಸ್ಯೆಗಳಿಗೂ ವಚನ ಸಾಹಿತ್ಯ ಪರಿಹಾರವಾಗಿದ್ದು, ಮಹಿಳೆಯರು ಪ್ರಯತ್ನ ಮಾಡಿದರೆ ಸಮಾಜದಲ್ಲಿ
ಏನೇಲ್ಲಾ ಸಾ ಧಿಸಬಹುದಾಗಿದೆ ಎಂಬುದಕ್ಕೆ ಮಹಿಳಾ ಕದಳಿ ವೇದಿಕೆಯ ಕಾರ್ಯಕ್ರಮ ಉದಾರಣೆಯಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಸಚಿವೆ, ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ, ಕಿತ್ತೂರು ಕರ್ನಾಟಕ ಭಾಗದಲ್ಲಿ ಕದಳಿ ವೇದಿಕೆ ಮಹಿಳೆಯರು ಸಂಘಟಿತರಾಗಲು ಉತ್ತಮ ವೇದಿಕೆಯಾಗಿದೆ. ಹಿಂದಿನ ಸರಕಾರದ ಅವಧಿ ಯಲ್ಲಿ ನಾನು ಮಹಿಳಾ ಮತ್ತು ಮಕ್ಕಳ ಸಚಿವೆಯಾಗಲು ಕದಳಿ ವೇದಿಕೆ ಪ್ರೇರಣೆ ನೀಡಿರುವುದು ಎಂದೂ ಮರೆಯಲಾಗದ ಕ್ಷಣವಾಗಿದೆ ಎಂದರು.

ಶಾಸಕ ಮಹಾಂತೇಶ ಕೌಜಲಗಿ, ಕದಳಿ ಮಹಿಳಾ ಘಟಕ ರಾಜ್ಯಾಧ್ಯಾಕ್ಷೆ ಸುಶೀಲಾ ಸೋಮೇಶೇಖರ ಮಾತನಾಡಿ, ಸಮಾಜಕ್ಕೆ ಪ್ರೇರಣೆ ನೀಡುವಂತಹ ಮಹಿಳಾ ಸಮಾವೇಶಗಳು ಕಾಲ ಕಾಲಕ್ಕೂ ನಡೆಯಬೇಕು. ಇಂಥಹ ಕಾರ್ಯಗಳಿಗೆ ಸದಾ ಸಹಕಾರ ನೀಡುವದಾಗಿ ಭರವಸೆ ನೀಡಿದರು.

ಸಮ್ಮೇಳನ ಸರ್ವಾಧ್ಯಕ್ಷೆ, ವಿಶ್ರಾಂತ ಪ್ರಾಧ್ಯಾಪಕಿ ಡಾ.ಗುರುದೇವಿ ಹುಲ್ಲೇಪ್ಪನವರಮಠ ಮಾತನಾಡಿ, ಸಮಾಜದಲ್ಲಿ ಸಮಾನತೆ ತರಲು ಆಧ್ಯಾತ್ಮಿಕ, ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡು ಮುಂಚೂಣಿಗೆ ಬರಬೇಕೆಂದು ಕರೆ ನೀಡಿದರು. ವಚನಗಾರ್ತಿ ಅಕ್ಕಮಹಾದೇವಿ ಜಯಂತಿ ಸರಕಾರ ಆಚರಿಸಬೇಕೆಂದು ಒತ್ತಾಯಿಸಿದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ರಾಜ್ಯಾಧ್ಯಕ್ಷ ಅಪ್ಪಾರಾವ್‌ ಅಕ್ಕೋಣಿ ಅಧ್ಯಕ್ಷತೆ ವಹಿಸಿದ್ದರು. ಮುರ ಗೋಡದ ನೀಲಕಂಠ ಸ್ವಾಮೀಜಿ ಸಮ್ಮುಖ ವಹಿಸಿದ್ದರು.

ಇದೇ ವೇಳೆ ಅಖಿಲ ಭಾರತ ಶರಣ ಸಾಹಿತ್ಯ ಧ್ವಜವನ್ನು ಕದಳಿ ಮಹಿಳಾ ವೇದಿಕೆ ಜಿಲ್ಲಾಧ್ಯಕ್ಷೆ ಪ್ರೇಮಾ ಅಂಗಡಿ ಅವರಿಗೆ ಮಾಜಿ ಸಚಿವೆ, ಶಾಸಕಿ ಶಶಿಕಲಾ ಜೊಲ್ಲೆ ಅವರು ಹಸ್ತಾಂತರಿಸಿದರು. ರಾಷ್ಟ್ರೀಯ ಬಸವದಳದ ತಾಲೂಕಾ ಘಟಕ ಅಧ್ಯಕ್ಷೆ ವಿಜಯಲಕ್ಷ್ಮಿ ತೋಟಗಿ ಇವರಿಗೆ ಕದಳಿ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದೇ ವೇಳೆ ನಾನಾ ಕ್ಷೇತ್ರಗಳ ಸಾಧಕರನ್ನು ಸತ್ಕರಿಸಲಾಯಿತು. ಮಕ್ಕಳಿಂದ ವಚನೋತ್ಸವ ಕಾರ್ಯಕ್ರಮ ಜರುಗಿತು. ಮಕ್ಕಳು ಶರಣರ ವೇಷ-ಭೂಷಣ ತೊಟ್ಟು ಕಣ್ಮನ ಸೆಳೆದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಅಶೋಕ ಮಳಗಲಿ ಸ್ವಾಗತಿಸಿದರು. ಗೌರಮ್ಮಾ ಕರ್ಕಿ, ವಿದ್ಯಾ ನೀಲಪ್ಪನ್ನವರ ನಿರೂಪಿಸಿದರು. ತಾಲೂಕಾಧ್ಯಕ್ಷೆ ಮೀನಾಕ್ಷಿ ಕುಡಸೋಮಣ್ಣವರ ವಂದಿಸಿದರು.

ಧ್ವಜಾರೋಹಣ: ಚಿತ್ರನಟ ಶಿವರಂಜನ ಬೋಳಣ್ಣವರ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಸೋಮೇಶ್ವರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಬಸವರಾಜ ಬಾಳೇಕುಂದರಗಿ ಅಧ್ಯಕ್ಷತೆವಹಿಸಿದ್ದರು. ಶಸಾಪ ತಾಲೂಕು ಉಪಾಧ್ಯಕ್ಷ ಶ್ರೀಶೈಲ ಶರಣಪ್ಪನವರ ಕಸಾಪ ಧ್ವಜಾರೋಹಣ ನೆರವೇರಿಸಿದರು.

ಸಮ್ಮೇಳನಾಧ್ಯಕ್ಷರ ಮೆರವಣಿಗೆ
ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಐಕ್ಯಸ್ಥಳದಲ್ಲಿ ಸಮ್ಮೇಳನಾಧ್ಯಕ್ಷರ ಹಾಗೂ ಕದಳಿ ಶ್ರೀ ಪ್ರಶಸ್ತಿ ಪುರಸ್ಕೃತರ ಭವ್ಯ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕೆಪಿಸಿಸಿ ಕಾರ್ಯಕಾರಣಿ ಸದಸ್ಯ ರೋಹಿಣಿ ಪಾಟೀಲ ಅವರು ಅಕ್ಕಮಹಾದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಕಸಾಪ ಜಿಲ್ಲಾಧ್ಯಕ್ಷೆ ಮಂಗಳಾ ಮೆಟಗುಡ್ಡ ಮೆರವಣಿಗೆಗೆ ಚಾಲನೆ ನೀಡಿದರು. ಸರ್ವಾಧ್ಯಕ್ಷರಾದ ಬೆಳಗಾವಿಯ ವಿಶ್ರಾಂತ ಇಂಗ್ಲಿಷ್‌ ಪ್ರಾಧ್ಯಾಪಕಿ ಡಾ.ಗುರುದೇವಿ ಹುಲ್ಲೇಪ್ಪನವರಮಠ, ಕದಳಿ ಶ್ರೀ ಪ್ರಶಸ್ತಿ ಪರಸ್ಕೃತೆ ವಿಜಯಲಕ್ಷ್ಮೀ ತೋಟಗಿ ಅವರನ್ನು ಸಾರೋಟಿನಲ್ಲಿ ಮೆರವಣಿಗೆ ಮಾಡಲಾಯಿತು. ಬೆಳಗಾವಿ-ನಾಗನೂರ ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ, ಕಜಾಪ ತಾಲೂಕಾಧ್ಯಕ್ಷ ಚಂದ್ರಶೇಖರ ಕೊಪ್ಪದ, ಜಾಗತಿಕ ಲಿಂಗಾಯತ ಮಹಾಸಭಾ ತಾಲೂಕಾಧ್ಯಕ್ಷ ಮಹೇಶ ಕೋಟಗಿ, ಸ್ವಾವಲಂಭಿ ಪೌಂಡೇಶನ್‌ ಅಧ್ಯಕ್ಷ ಸಂತೋಷ ಕೊಳವಿ, ಸಮಾಜ ಸೇವಕ ಮಹಾಂತೇಶ ಅಕ್ಕಿ, ಚಿಕ್ಕೊಪ್ಪ ಬಸವಾನುಭವ ಮಂಟಪದ ಚೆನ್ನಪ್ಪ ನರಸಣ್ಣವರ, ಪಾರ್ವತಿ ಕುಲಕರ್ಣಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.