![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 2, 2021, 8:28 PM IST
ಬೆಳಗಾವಿ: ನನಗೆ ಸಚಿವ ಸ್ಥಾನ ನೀಡಬೇಕು ಎಂದು ಪಕ್ಷದ ಹೈಕಮಾಂಡ್ ಮುಂದೆ ಯಾವುದೇ ಬೇಡಿಕೆ ಇಟ್ಟಿಲ್ಲ. ಸರಕಾರವೂ ಸಹ ನಮಗೆ ಅಂತಹ ಯಾವುದೇ ಆಫರ್ ನೀಡಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ಈಗ ಕೆಎಂಎಫ್ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ. ಅದನ್ನು ಬಿಟ್ಟು ಬೇರೆ ಯಾವುದೇ ಆಲೋಚನೆ ಮಾಡಿಲ್ಲ. ಸರಕಾರದ ಮುಂದೆ ನನಗೆ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆಯನ್ನೂ ಇಟ್ಟಿಲ್ಲ. ಅದೆಲ್ಲ ಊಹಾಪೋಹ ಎಂದರು.
ರಮೇಶ ಜಾರಕಿಹೊಳಿ ಈಗ ದೆಹಲಿಯಿಂದ ಮರಳಿ ಬೆಂಗಳೂರಿಗೆ ಬಂದಿದ್ದಾರೆ. ಅವರು ಗೋಕಾಕಗೆ ಬಂದ ಮೇಲೆ ನಾವು ಕುಳಿತು ಮುಂದಿನ ಕ್ರಮಗಳ ಬಗ್ಗೆ ಚರ್ಚೆ ಮಾಡಲಿದ್ದೇವೆ. ಚರ್ಚೆಯ ನಂತರ ಎಲ್ಲವನ್ನೂ ಹೇಳುತ್ತೇವೆ. ಈ ವಿಚಾರವಾಗಿ ಉಂಟಾಗಿರುವ ಗೊಂದಲಗಳನ್ನು ನಿವಾರಣೆ ಮಾಡುತ್ತೇವೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.
ರಾಜಕಾರಣದಲ್ಲಿ ಅಸಮಾಧಾನ, ಬೇಜಾರು ಇರುತ್ತದೆ. ಆದರೆ ರಮೇಶ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ನಾನು ಸಚಿವ ಸ್ಥಾನವನ್ನೂ ಕೇಳುವುದಿಲ್ಲ ಎಂದ ಅವರು, ರಮೇಶ ಜಾರಕಿಹೊಳಿ ಅವರೇ ಸಚಿವರಾಗಬೇಕೆಂಬ ಆಸೆ ಇದೆ. ಈ ದಿಕ್ಕಿನಲ್ಲಿ ನಾವು ಪ್ರಯತ್ನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಆದರೆ ಈಗ ರಮೇಶ ಜಾರಕಿಹೊಳಿ ಅವರನ್ನು ಸಚಿವರನ್ನಾಗಿ ಮಾಡಲು ಕೆಲ ಕಾನೂನು ತೊಡಕುಗಳಿವೆ. ಅವುಗಳು ಬಗೆಹರಿದ ಬಳಿಕ ರಮೇಶ ಅವರಿಗೆ ಮತ್ತೆ ಸಚಿವ ಸ್ಥಾನ ಕೊಡಿಸಲು ಪ್ರಯತ್ನಿಸಲಾಗುವುದು ಎಂದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.