ರೈತರ ಅಭಿವೃದ್ಧಿಗೆ ಕೆಎಂಎಫ್ ನಿಂದ ಹಲವು ಯೋಜನೆಗಳು ಜಾರಿ : ಬಾಲಚಂದ್ರ ಜಾರಕಿಹೊಳಿ
Team Udayavani, May 12, 2022, 9:20 PM IST
ಮೂಡಲಗಿ : ದೇಶದಲ್ಲಿಯೇ ಸಹಕಾರಿ ವಲಯದಲ್ಲಿ ಎರಡನೇ ಸ್ಥಾನದಲ್ಲಿರುವ ಕೆಎಂಎಫ್ ರೈತರ ಆರ್ಥಿಕ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ಸಮುದಾಯಕ್ಕೆ ಸಲಹೆ ಮಾಡಿದರು.
ಮೂಡಲಗಿ ಪಟ್ಟಣದಲ್ಲಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಸಹಯೋಗದಲ್ಲಿ ಜರುಗಿದ ವಿವಿಧ ಯೋಜನೆಗಳ 19.50 ರೂ. ಮೊತ್ತದ ಚೆಕ್ಕುಗಳನ್ನು ವಿತರಿಸಿ ಮಾತನಾಡಿದ ಅವರು, ಕೆಎಂಎಫ್ ಸಂಸ್ಥೆಯನ್ನು ಇನ್ನಷ್ಟು ಎತ್ತರಕ್ಕೆ ಬೆಳೆಸುವ ಮಹತ್ವಾಕಾಂಕ್ಷೆಯನ್ನು ಇಟ್ಟುಕೊಂಡಿದ್ದು, ಇದಕ್ಕೆ ರೈತ ಸಮುದಾಯದ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.
ಶಿಂಧಿಕುರಬೇಟ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡಕ್ಕೆ 5 ಲಕ್ಷ, ಖಾನಾಪುರ, ಮುನ್ಯಾಳ, ಹುಣಶ್ಯಾಳ ಪಿವೈ (ಬಸವ ನಗರ) ಸಹಕಾರಿ ಸಂಘಗಳ ಕಟ್ಟಡಕ್ಕೆ ತಲಾ 2.50 ಲಕ್ಷ ರೂ, ಶಿವಾಪೂರ(ಹ) ಸಂಘದ ಕಟ್ಟಡಕ್ಕೆ 2 ಲಕ್ಷ ರೂ ಸೇರಿದಂತೆ 14.50 ಲಕ್ಷ ರೂಪಾಯಿ ಚೆಕ್ಕಗಳನ್ನು ವಿತರಿಸಿದರು.
ರಾಸುಗಳನ್ನು ಕಳೆದುಕೊಂಡ ಆರು ಜನ ರೈತರಿಗೆ ತಲಾ 50 ಸಾ.ರೂ ಗಳಂತೆ ಒಟ್ಟು 3 ಲಕ್ಷ ರೂಗಳ ರಾಸು ವಿಮೆ ಚೆಕ್ಕುಗಳನ್ನು ವಿತರಿಸಿದರು. ಜೊತೆಗೆ ಕಲ್ಯಾಣ ಸಂಘದ 2 ಲಕ್ಷ ಸೇರಿ ಒಟ್ಟು 19.50 ಲಕ್ಷ ರೂ ಗಳ ಚೆಕ್ಕುಗಳನ್ನು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವಿತರಿಸಿದರು.
ಇದನ್ನೂ ಓದಿ : ಮುದ್ದೇಬಿಹಾಳ : ಕಾರು ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
ಈ ಸಂದರ್ಭದಲ್ಲಿ ಜಿಲ್ಲಾ ಹಾಲು ಒಕ್ಕೂಟದ ನಿರ್ದೆಶಕ ಮಲ್ಲು ಪಾಟೀಲ್, ಹಲವು ಮುಖಂಡರು, ಮೂಡಲಗಿ ಉಪ ಕೇಂದ್ರ ಅಧಿಕಾರಿ ರವಿ ತಳವಾರ, ವಿಸ್ತರಣಾಧಿಕಾರಿ ವಿಠ್ಠಲ ಲೋಕುರಿ, ಸಚಿನ್ ಪಡದಲ್ಲಿ, ಪಶು ಆಸ್ಪತ್ರೆಯ ವೈದ್ಯಾಧಿಕಾರಿಗಳು, ಹಾಲು ಉತ್ಪಾದಕ ಸಹಕಾರಿ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.