ನಂದಿನಿ-ಅಮುಲ್ ವಿಲೀನ ಇಲ್ಲ: Balachandra Jarkiholi
ಅಂಥ ಪ್ರಸ್ತಾವ ಬಂದರೆ ನಾನೇ ತಿರಸ್ಕರಿಸುತ್ತೇನೆ ; ಗೊಂದಲ ಸೃಷ್ಟಿಸುವ ಕುತಂತ್ರ ರಾಜಕೀಯ
Team Udayavani, Apr 12, 2023, 6:49 AM IST
ಬೆಳಗಾವಿ: ರಾಜ್ಯದಲ್ಲಿ ಸಾಕಷ್ಟು ಚರ್ಚೆ ಹಾಗೂ ವಿವಾದಕ್ಕೆ ಗ್ರಾಸವಾಗಿರುವ ಕೆಎಂಎಫ್ ಮತ್ತು ಅಮುಲ್ ವಿಲೀನದ ಮಾತೇ ಇಲ್ಲ. ಚುನಾವಣೆ ಸಮಯದಲ್ಲಿ ಅನಗತ್ಯವಾಗಿ ಇದರಲ್ಲಿ ರಾಜಕೀಯ ಮಾಡಬೇಡಿ. ರೈತರಲ್ಲಿ ಗೊಂದಲ ಮೂಡಿಸಬೇಡಿ ಎಂದು ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಸರಕಾರ ಮತ್ತು ಕೆಎಂಎಫ್ ಮುಂದೆ ಯಾವುದೇ ವಿಲೀನದ ಪ್ರಸ್ತಾವವೇ ಇಲ್ಲ. ಅಂಥ ಪ್ರಸ್ತಾವ ಬಂದದ್ದೇ ಆದರೆ ಮೊದಲು ನಾನೇ ತಿರಸ್ಕಾರ ಮಾಡುತ್ತೇನೆ. ಈ ವಿಲೀನ ಎಂಬ ವಿವಾದದ ಹಿಂದೆ ರಾಜಕೀಯ ಷಡ್ಯಂತ್ರ ಇದೆ. ಕೆಎಂಎಫ್ ವ್ಯಾಪ್ತಿಯಲ್ಲಿ ರಾಜ್ಯದಲ್ಲಿ ಸುಮಾರು 40ರಿಂದ 50 ಲಕ್ಷ ಮತದಾರರಿದ್ದಾರೆ. ಚುನಾವಣೆ ಸಮಯದಲ್ಲಿ ಅವರನ್ನು ಗುರಿಯಾಗಿಟ್ಟುಕೊಂಡು ಬಿಜೆಪಿಗೆ ಕೆಟ್ಟ ಹೆಸರು ತರಬೇಕು ಎಂಬ ಉದ್ದೇಶದಿಂದ ಕೆಲವರು ಈ ರೀತಿಯ ಕುತಂತ್ರ ನಡೆಸಿದ್ದಾರೆ. ಇದಕ್ಕೆ ರಾಜ್ಯದ ಜನರು ಕಿವಿಗೊಡಬಾರದು ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಸ್ಪಷ್ಟಪಡಿಸಿದರು.
ಕೆಎಂಎಫ್‌ನಲ್ಲಿ ಯಾವುದೇ ಸಮಸ್ಯೆ ಇಲ್ಲ. ನಂದಿನಿ ಹಾಲಿಗೆ ಅತೀ ಹೆಚ್ಚಿನ ಬೇಡಿಕೆ ಇದೆ. ಎ. 1ರಿಂದ ಇವತ್ತಿನವರೆಗೆ ಹಾಲು ಶೇಖರಣೆಯಲ್ಲಿ ಎರಡು ಲಕ್ಷ ಲೀಟರ್ ಏರಿಕೆಯಾಗಿದೆ ಎಂದರು.
ರಾಜ್ಯದಲ್ಲಿ ಅಮುಲ್ ಬಂದು ಎಷ್ಟೋ ವರ್ಷಗಳಾಗಿದ್ದರೂ ಇನ್ನೂ ತನ್ನ ಮಾರುಕಟ್ಟೆ ವಿಸ್ತರಿಸಿಕೊಳ್ಳಲು ಆಗುತ್ತಿಲ್ಲ. ಇದಕ್ಕೆ ನಮ್ಮ ರೈತರು, ಗ್ರಾಹಕರು ಕೆಎಂಎಫ್‌ನ ಮೇಲೆ ಇಟ್ಟಿರುವ ವಿಶ್ವಾಸ ಹಾಗೂ ನಂಬಿಕೆಗಳೇ ಕಾರಣ. ಹೀಗಿರುವಾಗ ಇದರಲ್ಲಿ ರಾಜಕೀಯ ಮಾಡದೆ ನಂದಿನಿಯನ್ನು ಇನ್ನಷ್ಟು ಬೆಳೆಸಲು ಸಹಕಾರ ನೀಡಬೇಕು ಎಂದರು.
ನಾವು ಅಧಿಕಾರಕ್ಕೆ ಬಂದ ಅನಂತರ ಅನುಕಂಪದ ಆಧಾರದ ಮೇಲೆ ಉದ್ಯೋಗಾವಕಾಶಗಳನ್ನು ಕಲ್ಪಿಸಲಾಗಿದೆ. ಈ ಹಿಂದೆ ಯಾರೂ ಮಾಡದ ನೌಕರರ ನಿವೃತ್ತಿ ವೇತನವನ್ನು ಜಾರಿಗೆ ತರಲಾಗಿದೆ. ಪ್ರತೀ ವರ್ಷ ಇಂಧನ ಇಲಾಖೆಗೆ ವಿದ್ಯುತ್ ಬಿಲ್‌ಗಾಗಿಯೇ 120 ಕೋಟಿ ರೂ. ಸಂದಾಯ ಮಾಡಲಾಗುತ್ತಿದೆ. ಸೋಲಾರ ಪ್ಲಾಂಟ್ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ. ಇದು ಜಾರಿಯಾದರೆ ವಾರ್ಷಿಕವಾಗಿ 40 ಕೋಟಿ ರೂ.ಗಳ ಉಳಿತಾಯವಾಗಲಿದೆ ಎಂದರು.
ವಾರ್ಷಿಕ 22 ಸಾವಿರ ಕೋಟಿ ರೂ. ವಹಿವಾಟು
ಕೇಂದ್ರ ಸಚಿವ ಅಮಿತ್ ಶಾ ಅವರು ಕೆಎಂಎಫ್ ಬಲವರ್ಧನೆಗಾಗಿ ಅಮುಲ್ ಮಾದರಿಯಂತೆ ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಿಸಲು ಸಲಹೆ ನೀಡಿದ್ದಾರೆ. ಆದರೆ ಇದನ್ನೇ ಕೆಲವರು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಖಂಡನೀಯ. ಕೆಎಂಎಫ್ ವಾರ್ಷಿಕವಾಗಿ 22,000 ಕೋಟಿ ರೂ.ಗಳ ವಹಿವಾಟು ನಡೆಸಿದ್ದು, ಇದರಿಂದ ಕೆಎಂಎಫ್ ಮತ್ತು 15 ಜಿಲ್ಲಾ ಹಾಲು ಒಕ್ಕೂಟಗಳು ಸೇರಿ ವಾರ್ಷಿಕವಾಗಿ ಅಂದಾಜು 200 ಕೋಟಿ ರೂ.ಗಳ ಲಾಭ ನಿರೀಕ್ಷೆ ಮಾಡಲಾಗಿದೆ. ಇಂಥ ಪರಿಸ್ಥಿತಿಯಲ್ಲಿ ರೈತರಿಗೆ ನೆರವಾಗಬೇಕು. ಅದನ್ನು ಬಿಟ್ಟು ನಂದಿನಿ-ಅಮುಲ್ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಬಾರದು ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.