ವೈದ್ಯಕೀಯ ತ್ಯಾಜ್ಯ ವಿಲೇವಾರಿಗೆ ಬಾರ್ ಕೋಡಿಂಗ್
•ಜಾರಿಗೆ 15 ದಿನ ಕಾಲಾಕಾವಕಾಶ•ವಾರ್ಡ್‌ವಾರು ಮೈಕ್ರೋ ಯೋಜನೆ ರೂಪಿಸಲು ಸಲಹೆ
Team Udayavani, Sep 4, 2019, 9:56 AM IST
ಬೆಳಗಾವಿ: ವೈದ್ಯಕೀಯ ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ಮಾಡುವ ನಿಟ್ಟಿನಲ್ಲಿ ಬಾರ್ ಕೋಡಿಂಗ್ ವ್ಯವಸ್ಥೆ ಅಳವಡಿಸಿಕೊಳ್ಳಲು 15 ದಿನಗಳ ಅವಕಾಶ ನೀಡಲಾಗಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ರಾಜ್ಯ ಸಮಿತಿಯ ಅಧ್ಯಕ್ಷ ನ್ಯಾಯಮೂರ್ತಿ ಸುಭಾಷ್ ಅಡಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಸ್ಥಳೀಯ ಸಂಸ್ಥೆಗಳ ಒಪ್ಪಿಗೆಯ ಮೇರೆಗೆ ಕ್ಲಿನಿಕ್‌ಗಳಿಗೆ ಅನುಮತಿ ನೀಡಬೇಕು ಮತ್ತು ವೈದ್ಯಕೀಯ ತ್ಯಾಜ್ಯ ವಿಲೇವಾರಿಗೆ ಸೂಕ್ತ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ ಎಂದರು.
ಕಸ ವಿಲೇವಾರಿ ಖರ್ಚು ಕಡಿಮೆ ಮಾಡಲು ವಾರ್ಡ್‌ವಾರು ಮೈಕ್ರೋ ಯೋಜನೆ ರೂಪಿಸಬೇಕು. ಇದಕ್ಕೆ ಬೇಕಾದ ಸ್ಥಳ ಗುರುತಿಸಿ ಸ್ಥಳೀಯವಾಗಿಯೇ ಹಸಿ ಕಸ ಸಂಗ್ರಹಿಸಿ ನಂತರ ಅಲ್ಲಿಯೇ ಕಾಂಪೋಸ್ಟ್ ಮಾಡಬೇಕು. ಇದೇ ರೀತಿ ವಿಶ್ವವಿದ್ಯಾಲಯ, ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ದೊಡ್ಡ ಪ್ರಮಾಣದ ಕಸವನ್ನು ಆಯಾ ಸಂಸ್ಥೆಗಳ ಆವರಣದಲ್ಲಿಯೇ ವಿಲೇವಾರಿ ಮಾಡಲು ಅನುಕೂಲವಾಗುವಂತೆ ಅಲ್ಲಿಯೇ ಘಟಕಗಳನ್ನು ಸ್ಥಾಪಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
2016 ಘನತ್ಯಾಜ್ಯ ವಿಲೇವಾರಿ ನಿಯಮಾವಳಿ ಅನ್ವಯ ಪ್ರತಿ ಸ್ಥಳೀಯ ಸಂಸ್ಥೆಯು ಎರಡು ವರ್ಷಗಳಲ್ಲಿ ತ್ಯಾಜ್ಯ ವಿಲೇವಾರಿ ನಿರ್ವಹಣೆ ವ್ಯವಸ್ಥೆ ಮಾಡಬೇಕಿತ್ತು. ಇದಾದ ಬಳಿಕ ಆರು ತಿಂಗಳು ಅವಧಿ ವಿಸ್ತರಣೆ ಮಾಡಲಾಗಿತ್ತು. ಅದರ ಸಮಯವಕಾಶವೂ ಮೀರಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದಿಂದಾಗಿ ಭಾರೀ ಪ್ರಮಾಣದ ಹಾನಿ ಉಂಟಾಗಿರುವುದರಿಂದ ಸ್ವಲ್ಪ ಕಾಲಾವಕಾಶ ನೀಡಿ ಅಂತಿಮ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.
ಇ -ತ್ಯಾಜ್ಯ ವಿಲೇವಾರಿಗೆ ಸಹ ಪ್ರತ್ಯೇಕವಾಗಿ ಒಂದು ಘಟಕ ಸ್ಥಾಪಿಸಿ ನಿಯಮಾವಳಿ ಪ್ರಕಾರ ವಿಲೇವಾರಿಗೆ ನಿರ್ದೇಶನ ನೀಡಲಾಗಿದೆ. ಇ ತ್ಯಾಜ್ಯ ವಿಲೇವಾರಿ ಆಯಾ ಕಂಪನಿಗಳ ಹೊಣೆಗಾರಿಕೆಯಾಗಿದ್ದು ಒಂದು ವೇಳೆ ಮಹಾನಗರ ಪಾಲಿಕೆ ವಿಲೇವಾರಿ ಮಾಡುವುದಾದರೆ ಸಂಬಂಧಪಟ್ಟ ಕಂಪನಿಗಳು ಹಣ ಪಾವತಿಸಬೇಕಾಗುತ್ತದೆ ಎಂದರು.
ಬೆಳಗಾವಿ ನಗರದಲ್ಲಿ ಕಸ ವಿಲೇವಾರಿ ಹಾಗೂ ಅದರ ನಿರ್ವಹಣೆಯ ಬಗ್ಗೆ ಇನ್ನೂ ಜನ ಜಾಗೃತಿ ಸರಿಯಾಗಿ ಆಗಿಲ್ಲ. ಇನ್ನೂ ವ್ಯಾಪಕ ಪ್ರಮಾಣದಲ್ಲಿ ಇದರ ತಿಳಿವಳಿಕೆ ಮೂಡಿಸಬೇಕಿದೆ. ಬೆಳಗಾವಿ ಸ್ಮಾರ್ಟ್ ಸಿಟಿ ಆಗಬೇಕಾದರೆ ಎಲ್ಲ ಬಗೆಯ ತ್ಯಾಜ್ಯ ವಿಲೇವಾರಿ ವ್ಯವಸ್ಥೆಯನ್ನು ಮೇಲ್ದರ್ಜೆಗೆ ಏರಿಸಲೇಬೇಕಿದೆ. ಹಸಿ, ಒಣ ಕಸ ಹಾಗೂ ಅಪಾಯಕಾರಿ ಕಸ ಸಮಗ್ರ ನಿರ್ವಣೆಗೆ ಒಂದು ಕಮಾಂಡ್ ಸೆಂಟರ್ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಲಾಗಿದೆ. ಇಲ್ಲದಿದ್ದರೆ ಸ್ಮಾರ್ಟ್‌ಸಿಟಿ ಯೋಜನೆಯಿಂದ ಇದು ಹೊರಗಡೆ ಉಳಿಯಬಹುದು ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ, ವಿಜಯಕುಮಾರ್ ಹೊನಕೇರಿ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ನ್ಯಾಯಮೂರ್ತಿ ಸುಭಾಷ್ ಅಡಿ ಅವರು ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಪರಿಸರ ಅಭಿಯಂತರ ಸಭೆ ನಡೆಸಿ ಜಿಲ್ಲೆಯಲ್ಲಿ ತ್ಯಾಜ್ಯ ವಿಲೇವಾರಿಯ ಪ್ರಗತಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.