ನೀತಿ ಸಂಹಿತೆ ಉಲ್ಲಂಘನೆ ಆರೋಪ: ಬಸವರಾಜ ಹೊರಟ್ಟಿಗೆ ನೋಟಿಸ್
Team Udayavani, Jun 12, 2022, 12:44 AM IST
ಬೆಳಗಾವಿ: ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಬೆಂಬಲಿಗರು “ಬಸವರಾಜ ಪಥ ಮತ್ತು ಸಂಘರ್ಷ; ಹೋರಾಟ-ಸಾಧನೆ’ ಪುಸ್ತಕಗಳ ಮುಖ ಪುಟದ ಮೇಲೆ ರಾಷ್ಟ್ರೀಯ, ರಾಜ್ಯ ಲಾಂಛನ ಮತ್ತು ವಿಧಾನ ಪರಿಷತ್ ಸಭಾಪತಿ ಪೀಠ ಮುದ್ರಿಸಿ ಸ್ವಂತ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ದೂರು ದಾಖಲಾಗಿದೆ ಎಂದು ಚುನಾ ವಣಾಧಿಕಾರಿ ಆಮ್ಲನ್ ಆದಿತ್ಯ ಬಿಸ್ವಾಸ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಷತ್ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಪಶ್ಚಿಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವರಿಗೆ ನೋಟಿಸ್ ನೀಡಲಾಗಿದೆ. ಇದಲ್ಲದೆ ಬಸವರಾಜ ಪಥ ಪುಸ್ತಕವನ್ನು ಪ್ರಕಟಿಸಿರುವ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘಕ್ಕೆ ನೋಟಿಸ್ ನೀಡಲಾಗಿದ್ದು, ಈ ಕುರಿತು ಮುಖ್ಯ ಚುನಾವಣಾಧಿಕಾರಿಗೆ ಪ್ರಥಮ ವರದಿ ಸಲ್ಲಿಸಲಾಗಿದೆ ಎಂದರು.
ಜತೆಗೆ, ವಾಯವ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಭಾಷ ರಂಗಪ್ಪ ಕೊಟೆಕಲ್ ಅವರಿಗೆ ದೂರವಾಣಿ ಮೂಲಕ ಜೀವ ಬೆದರಿಕೆ ಕರೆ ಬಂದಿದ್ದು ಇದರ ದೂರು ಸ್ವೀಕರಿಸಲಾಗಿದೆ ಎಂದು ಹೇಳಿದರು.
ನನಗೆ ಯಾವುದೇ ನೋಟಿಸ್ ಬಂದಿಲ್ಲ: ಹೊರಟ್ಟಿ
ಧಾರವಾಡ: ಸಾಂವಿಧಾನಿಕ ಪೀಠದ ಚಿತ್ರವನ್ನು ದುರ್ಬಳಕೆ ಮಾಡಿದ್ದಾರೆ ಎಂಬುದಾಗಿ ಕೆಲವರು ನನ್ನ ಮೇಲೆ ಆರೋಪ ಮಾಡುತ್ತಿದ್ದು, ಆದರೆ ಈ ಬಗ್ಗೆ ನನಗೆ ಚುನಾವಣ ಆಯೋಗದಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದು ಬಿಜೆಪಿ ಅಭ್ಯರ್ಥಿ, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.