ಪ್ರವಾಹ ಎದುರಿಸಲು ಸನ್ನದರಾಗಿರಿ: ಡಿಸಿ
ಕೃಷ್ಣಾ ತೀರದ ಗ್ರಾಮಗಳಿಗೆ ಡಿಸಿ ಭೇಟಿ
Team Udayavani, May 24, 2022, 11:49 AM IST
ಬೆಳಗಾವಿ: ಮಳೆಗಾಲದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸೋಮವಾರ ಕೃಷ್ಣಾ ನದಿ ತೀರದಲ್ಲಿರುವ, ಈ ಹಿಂದೆ ಪ್ರವಾಹದಿಂದ ಬಾಧಿತಗೊಂಡಿದ್ದ ಚಿಕ್ಕೋಡಿ ಹಾಗೂ ಕಾಗವಾಡ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹ ನಿರ್ವಹಣೆ ಕುರಿತು ಪರಿಶೀಲಿಸಿದರು.
ಚಿಕ್ಕೋಡಿ ತಾಲೂಕಿನ ಮಾಂಜರಿ ಸೇತುವೆಗೆ ಭೇಟಿ ನೀಡಿದ ಅವರು, ಇತ್ತೀಚಿನ ಮಳೆಯಿಂದ ಕೃಷ್ಣಾ ನದಿಯಲ್ಲಿ ಉಂಟಾಗಿರುವ ನೀರಿನ ಹರಿವು ಹೆಚ್ಚಳವನ್ನು ವೀಕ್ಷಿಸಿದರು. ನಂತರ ಯಡೂರ, ಇಂಗಳಿ, ಕಾಗವಾಡ ತಾಲೂಕಿನ ಮಂಗಾವತಿ ಹಾಗೂ ಜುಗುಳ ಗ್ರಾಮಗಳಿಗೆ ಭೇಟಿ ನೀಡಿ 2019 ಹಾಗೂ 2021 ರ ಪ್ರವಾಹ ಸಂದರ್ಭದಲ್ಲಿ ಮುಳುಗಡೆಯಾಗಿದ್ದರ ಕುರಿತು ಗ್ರಾಮಸ್ಥರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಮುನ್ನೆಚ್ಚರಿಕೆ ಕ್ರಮ: ಮಳೆಗಾಲ ಆರಂಭವಾಗುತ್ತಿದ್ದು, ಮುಂಬರುವ ದಿನಗಳಲ್ಲಿ ನೆರೆಯ ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಹಾಗೂ ಮಳೆಯ ಪ್ರಮಾಣದ ಮೇಲೆ ನಿರಂತರವಾಗಿ ನಿಗಾ ವಹಿಸಬೇಕು. ಪ್ರವಾಹ ಉಂಟಾದ ಸಂದರ್ಭದಲ್ಲಿ ಜನರು ಹಾಗೂ ಜಾನುವಾರುಗಳ ಜೀವ ರಕ್ಷಣೆಗೆ ಆದ್ಯತೆ ನೀಡಬೇಕು. ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈಗಾಗಲೇ ಈ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಭೆಗಳನ್ನು ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಗಿದೆ. ಅದರಂತೆ ಕಾಳಜಿ ಕೇಂದ್ರಗಳನ್ನು ಗುರುತಿಸಬೇಕು. ಜನರ ರಕ್ಷಣೆಗಾಗಿ ಅಗತ್ಯವಿರುವ ಬೋಟ್ ಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಹೇಳಿದರು.
ಚಿಕ್ಕೋಡಿಯಲ್ಲಿ ಸಾಕಷ್ಟು ಸಂಖ್ಯೆಯ ಬೋಟ್ ಗಳಿವೆ. ಆದಾಗ್ಯೂ ಹೆಚ್ಚುವರಿ ಬೋಟ್ ಗಳನ್ನು ವ್ಯವಸ್ಥೆ ಮಾಡಿಕೊಳ್ಳಬೇಕು. ಹಳೆ ಬೋಟ್ ಗಳ ದುರಸ್ತಿ ಮಾಡಿಸಿಟ್ಟುಕೊಳ್ಳಬೇಕು ಎಂದು ಸ್ಥಳೀಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ಗ್ರಾಮಸ್ಥರ ಜೊತೆಗೆ ಚರ್ಚೆ ನಡೆಸಿದ ಜಿಲ್ಲಾಧಿಕಾರಿಗಳು ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಎಲ್ಲ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ. ನದಿ ತೀರದ ಗ್ರಾಮಸ್ಥರು ಅಧಿಕಾರಿಗಳು ಕಾಲ ಕಾಲಕ್ಕೆ ನೀಡುವ ಸೂಚನೆಗಳನ್ನು ಪಾಲಿಸುವ ಮೂಲಕ ಯಾವುದೇ ರೀತಿಯ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.
ಪ್ರವಾಹದಿಂದ ಪೀಡಿತಗೊಳ್ಳುವ ನದಿತೀರದ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಮಳೆಯ ಪ್ರಮಾಣ, ನದಿ ಹರಿವು ಹಾಗೂ ಜಲಾಶಯಗಳಿಂದ ನೀರು ಬಿಡುಗಡೆ ಕುರಿತು ಮಹಾರಾಷ್ಟ್ರದ ಜತೆ ಸಮನ್ವಯ ಸಾಧಿಸಲು ಅನುಕೂಲವಾಗುವಂತೆ ಪೂರ್ವಭಾವಿಯಾಗಿ ಜಿಲ್ಲೆಯ ನೀರಾವರಿ ಇಲಾಖೆ ಅಧಿಕಾರಿಗಳ ಸಭೆ ನಡೆಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಚಿಕ್ಕೋಡಿ ಉಪ ವಿಭಾಗಾಧಿಕಾರಿ ಸಂತೋಷ ಕಾಮಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Belagavi: ಎಸ್‌ಡಿಎ ರುದ್ರಣ್ಣ ಮೊಬೈಲ್ ಪತ್ತೆ: ಪೊಲೀಸರಿಂದ ತನಿಖೆ ಚುರುಕು
Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.