ಪ್ರತಿ ಹೆಣ್ಣಿನ ಹೋರಾಟದ ಹಿಂದಿದೆ ಈ ನೆಲದ ಸ್ವಾಭಿಮಾನ: ಪ್ರೊ. ತ್ಯಾಗರಾಜ
ಕನ್ನಡ ನಾಡು ಕ್ಷಾತ್ರತೇಜದ ದೊಡ್ಡ ಪರಂಪರೆಯೇ ಹೊಂದಿದೆ.
Team Udayavani, Oct 28, 2024, 9:48 AM IST
ಉದಯವಾಣಿ ಸಮಾಚಾರ
ಬೆಳಗಾವಿ: ಹೋರಾಟ ಎಂಬುದು ಬಾಹ್ಯಿಕ ಸ್ಫೂರ್ತಿಯಿಂದ ಬಂದಾಗ ಅದು ಆ ಕ್ಷಣದ ಹೋರಾಟವಾಗುತ್ತದೆ. ಅದೇ ಅಂತರಾಳದಿಂದ ಬಂದಾಗ ಸಮಸ್ತ ಪರಿಸರವನ್ನೇ ಬಡಿದೆಬ್ಬಿಸುತ್ತದೆ. ಇದಕ್ಕೆ ರಾಣಿ ಚನ್ನಮ್ಮನ ಹೋರಾಟವೇ ಸಾಕ್ಷಿ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಸಿ ಎಂ ತ್ಯಾಗರಾಜ ಅಭಿಪ್ರಾಯಪಟ್ಟರು.
ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಣಿ ಚನ್ನಮ್ಮ ಅಧ್ಯಯನ ಪೀಠ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಹಯೋಗದಲ್ಲಿ ರಾಣಿ ಚನ್ನಮ್ಮನ ಐತಿಹಾಸಿಕ ವಿಜಯದ 200ನೇ ವರ್ಷಾಚರಣೆ ಸಂಭ್ರಮದ ಕುರಿತು ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪುರುಷನ ಬಹುತೇಕ ಹೋರಾಟವು ಅಧಿಕಾರದ ಪ್ರತೀಕವಾದರೆ, ಅದೇ ಪ್ರತಿ ಹೆಣ್ಣಿನ ಹೋರಾಟದ ಹಿಂದೆ ಈ ನೆಲದ ಸಂಸ್ಕೃತಿ,
ಸ್ವಾಭಿಮಾನ ಅಡಗಿರುತ್ತದೆ ಎಂದರು.
ಈ ನೆಲದ ಸಂಸ್ಕೃತಿಯ ಅಳಿವು ಉಳಿವಿನ ಪ್ರಶ್ನೆ ಬಂದಾಗ ಪ್ರತಿ ಹೆಣ್ಣು ಶತ್ರುಗಳ ವಿರುದ್ಧ ರಣಾಂಗಣದಲ್ಲಿ ಹೋರಾಡಿರುವುದು ನಾಡಿನ ಚರಿತ್ರೆಯುದ್ದಕ್ಕೂ ದಾಖಲಾಗಿದೆ. ಕನ್ನಡ ನಾಡು ಕ್ಷಾತ್ರತೇಜದ ದೊಡ್ಡ ಪರಂಪರೆಯೇ ಹೊಂದಿದೆ.
ಚನ್ನಮ್ಮನ ಕ್ಷಾತ್ರತೇಜದ ಪರಂಪರೆಯಿಂದಾಗಿ ಬ್ರಿಟಿಷರ ವಿರುದ್ಧ ಹೋರಾಡುತ್ತಿದ್ದವರಿಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಹೆಚ್ಚು ಸ್ಫೂರ್ತಿ ನೀಡಿತು ಎಂದು ಹೇಳಿದರು. ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಮಹಾಂತೇಶ ಕಂಬಾರ ಮಾತನಾಡಿ, ರಾಣಿ ಚನ್ನಮ್ಮ ಈ ನಾಡಿನ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಕ್ರಾಂತಿಯ ಕಹಳೆ ಮೊಳಗಿಸಿದಳು. ಅವಳ ಸಾಹಸ ಮತ್ತು ಹೋರಾಟಗಳು ಸಮಾಜಕ್ಕೆ ಸ್ಫೂರ್ತಿ ಎಂದರು.
ವಿವಿಯ ವಿದ್ಯಾವಿಧೇಯಕ ಪರಿಷತ್ತಿನ ಸದಸ್ಯರಾದ ಡಾ| ನಿರ್ಮಲಾ ಬಟ್ಟಲ ಅವರು ಕಿತ್ತೂರು ಚನ್ನಮ್ಮನ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕುಲಸಚಿವ ಸಂತೋಷ ಕಾಮಗೌಡ, ಹಣಕಾಸು ಅಧಿಕಾರಿ ಎಂ. ಎ. ಸಪ್ನಾ, ಅಧ್ಯಯನ ಪೀಠದ ನಿರ್ದೇಶಕಿ ಪ್ರೊ. ನಾಗರತ್ನ ಪರಾಂಡೆ, ಪ್ರಾಚಾರ್ಯ ಎಂ ಜಿ ಹೆಗಡೆ, ಹಿರಿಯ ಸಾಹಿತಿಯರು ಪಾಟೀಲ ಉಪಸ್ಥಿತರಿದ್ದರು.
ಪ್ರಿಯಾಂಕಾ ತಿಲಗಾರ ಪ್ರಾರ್ಥಿಸಿದರು. ಶಾಂಭವಿ ಥೋರ್ಲಿ ನಿರೂಪಿಸಿದರು, ಗಾಯತ್ರಿ ಹಲಗಿ ಸ್ವಾಗತಿಸಿದರು. ಡಾ. ಪ್ರೀತಿ ಪದಪ್ಪಗೋಳ ಪರಿಚಯಿಸಿದರು. ಅಧ್ಯಯನ ಪೀಠದ ಸಂಯೋಜಕ ಡಾ| ಮಹೇಶ ಗಾಜಪ್ಪನರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.