Belagavi: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆಗೈದ ಕೀಚಕರು! ತಡವಾಗಿ ಬೆಳಕಿಗೆ ಬಂದ ಘಟನೆ

ಚನ್ನಮ್ಮನ ನಾಡಿನಲ್ಲೊಂದು ಹೀನ ಕೃತ್ಯ

Team Udayavani, Jan 3, 2024, 10:55 AM IST

Belagavi: ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆಗೈದ ಕೀಚಕರು! ತಡವಾಗಿ ಬೆಳಕಿಗೆ ಬಂದ ಘಟನೆ

ಬೆಳಗಾವಿ: ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ಎಳೆದಾಡಿ ಅಮಾನವೀಯ ಕೃತ್ಯ ಎಸಗಿದ ಘಟನೆ ವೀರ ಚೆನ್ನಮ್ಮನ ನಾಡಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ನವೆಂಬರ್ 21ರಂದು ಅಮಾನವೀಯ ಕೃತ್ಯ ನಡೆದಿದ್ದು ಈ ಕುರಿತು ಮಹಿಳೆ ಠಾಣೆಯಲ್ಲಿ ದೂರು ನೀಡಿದರು ಸ್ಪಂದಿಸದ ಪೊಲೀಸರು ಇದೀಗ ಘಟನೆ ನಡೆದಿರುವ ಕುರಿತು ಮಹಿಳಾ ಆಯೋಗಕ್ಕೆ ದೂರು ನೀಡಿದ ಬಳಿಕ ವಿಚಾರ ಬೆಳಕಿಗೆ ಬಂದಿದೆ.

ಮಹಿಳಾ ಆಯೋಗದ ನಿರ್ದೇಶನ ಮೇರೆಗೆ ಡಿ. 30ಕ್ಕೆ ಬೈಲಹೊಂಗಲ ಠಾಣೆಯಲ್ಲಿ 6 ಮಹಿಳೆಯರೂ ಸೇರಿದಂತೆ ಒಟ್ಟು 20 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಘಟನೆ ವಿವರ:
ಸಂತ್ರಸ್ತೆಯ ಜಮೀನಿಗೆ ಹೊಂದಿಕೊಂಡೇ ಕೆಲ ಆರೋಪಿಗಳು ಪೈಪ್‌ಲೈನ್ ಅಳವಡಿಕೆ ಮಾಡಿದ್ದರು ಇದರಿಂದ ಸಂತ್ರಸ್ತ ಮಹಿಳೆಯ ಜಮೀನಿಗೆ ನೀರು ನುಗ್ಗಿ ಬೆಳೆಗಳು ಹಾನಿಯಾಗಿವೆ. ಈ ಕುರಿತು ಮಹಿಳೆ ಲೋಕೋಪಯೋಗಿ ಇಲಾಖೆಗೆ ದೂರು ನೀಡಿದ್ದರು ಅದರಂತೆ ಸ್ಥಳಕ್ಕೆ ಬಂದ ಅಧಿಕಾರಿಗಳು ಪೈಪ್‌ಲೈನ್ ತೆರವುಗೊಳಿಸಿದ್ದರು.

ಇದೆ ವಿಚಾರಕ್ಕೆ ಸಂಬಂಧಿಸಿ ನವೆಂಬರ್ 21 ರಂದು ‌ಸಂತ್ರಸ್ತೆ ಹಾಗೂ ಆರೋಪಿಗಳ ಮಧ್ಯೆ ಗಲಾಟೆ ನಡೆದಿತ್ತು ಗಲಾಟೆ ವಿಕೋಪಕ್ಕೆ ತಿರುಗಿ ಮಹಿಳೆ ತೊಟ್ಟಿದ್ದ ಬಟ್ಟೆ ಎಳೆದಾಡಿ ಬೆತ್ತಲೆಗೊಳಿಸಿ ಹಲ್ಲೆನಡೆಸಿದ್ದಾರೆ ಅಲ್ಲದೆ ಪ್ರಾಣ ಬೆದರಿಕೆಯನ್ನೂ ಹಾಕಿದ್ದಾರೆ.

ಘಟನೆ ಕುರಿತು ಸಂತ್ರಸ್ತ ಮಹಿಳೆ ಠಾಣೆಗೆ ದೂರು ನೀಡಲೆಂದು ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಅಲ್ಲಿಗೆ ಬಂದ ಆರೋಪಿಗಳು ಮಹಿಳೆಯನ್ನು ಅಲ್ಲಿಂದ ಕರೆದುಕೊಂಡು ಹೋಗಿ ಗ್ರಾಮ ಪಂಚಾಯತ್ ನಲ್ಲಿ ಕೂಡಿ ಹಾಕಿ ಮತ್ತೆ ಬಟ್ಟೆಗಳನ್ನು ಎಳೆದಾಡಿ ಬೆತ್ತಲೆಗೊಳಿಸಿ ಕೈಯಲ್ಲಿದ್ದ ಪರ್ಸ್ ಕಸಿದು ಅದರಲ್ಲಿದ್ದ ಮೊಬೈಲ್ ಹಣ ಕಸಿದು ಬಲವಂತವಾಗಿ ಕಾಗದ ಪತ್ರಕ್ಕೆ ಸಹಿ ಹಾಕಿಸಿ ಸಂಜೆ ವೇಳೆಗೆ ಬಿಟ್ಟಿದ್ದಾರೆ.

ಇದಾದ ಮಾರನೇ ದಿನ ಸಂತ್ರಸ್ತ ಮಹಿಳೆ ಬೈಲಹೊಂಗಲ ಠಾಣೆಗೆ ಹೋಗಿ ದೂರು ನೀಡಿದರೂ ಪೊಲೀಸರು ಸ್ಪಂದಿಸಲಿಲ್ಲ. ಇದರಿಂದ ಬೇಸರಗೊಂಡ ಮಹಿಳೆ ಮಹಿಳಾ ಆಯೋಗದ ಮೊರೆ ಹೋಗಿದ್ದು ಇದೀಗ ಅವರ ಹೇಳಿಕೆಯ ಆಧಾರದ ಮೇಲೆ ಡಿಸೆಂಬರ್ 30ರಂದು ಬೈಲಹೊಂಗಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ತಿಗಡಿ ಗ್ರಾಮದ ಕಲ್ಲಪ್ಪ ಡೊಂಕನ್ನವರ ಅಡಿವೆಪ್ಪ ದಳವಾಯಿ, ಕಲ್ಪನಾ ಡೊಂಕನ್ನವರ, ಸಾಧಿಕ ಬಾಳೇಶಿ, ಇಸ್ಮಾಯಿಲ್ ಬಾಳೇಶಿ, ಶಿವಬಸಪ್ಪ ಕರಡಿಗುದ್ದಿ ಸೇರಿ 20 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದೀಗ ಈ ಪ್ರಕರಣ ಬೆಳಗಾವಿ ‌ಜಿಲ್ಲಾ ಮಹಿಳಾ ಠಾಣೆಗೆ ‌ವರ್ಗಾವಣೆಗೊಂಡಿದ್ದು ಇದುವರೆಗೂ ಯಾರ ಬಂಧನ ಆಗಿಲ್ಲ.

ಇದನ್ನೂ ಓದಿ: ಚಿತ್ರಕಲಾ ಪರಿಷತ್‌ನಲ್ಲಿ ಜ.7ರಂದು ಚಿತ್ರಸಂತೆ; 1,500 ಕಲಾವಿದರ ಕಲಾಕೃತಿ ಪ್ರದರ್ಶನ

ಟಾಪ್ ನ್ಯೂಸ್

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

PCB

PCB; ಚಾಂಪಿಯನ್ಸ್‌ ಟ್ರೋಫಿಗೆ ಅಧಿಕಾರಿಯ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.