Belagavi; ಕ್ಷೀರಭಾಗ್ಯ ಹಾಲಿಗೆ ಬಿದ್ದ ಹಲ್ಲಿ; ಅಸ್ವಸ್ಥ ವಿದ್ಯಾರ್ಥಿಗಳು ಆಸ್ಪತ್ರಗೆ ದಾಖಲು
Team Udayavani, Jan 11, 2024, 2:03 PM IST
ಬೆಳಗಾವಿ: ಸರಕಾರಿ ಶಾಲೆಗೆ ಮಕ್ಕಳಿಗೆ ತರಲಾದ ಕ್ಷೀರಭಾಗ್ಯ ಯೋಜನೆಯ ಹಾಲಿನಲ್ಲಿ ಹಲ್ಲಿ ಬಿದ್ದ ಪರಿಣಾಮ ಶಾಲಾ ಬಾಲಕರು ಅಸ್ವಸ್ಥರಾದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಉ. ಖಾನಾಪುರ ಗ್ರಾಮದಲ್ಲಿ ನಡೆದಿದೆ. ಬಾಲಕರನ್ನು ಸಂಕೇಶ್ವರದ ಸರಕಾರಿ ಸೇರಿ ಕೆಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರದ ಸರಕಾರಿ ಶಾಲೆಯೊಂದರಲ್ಲಿ ಮಕ್ಕಳಿಗೆ ಕ್ಷೀರ ಭಾಗ್ಯ ಯೋಜನೆಯ ಹಾಲು ನೀಡಲಾಗಿತ್ತು. ಆದರೆ ಹಾಲಿನಲ್ಲಿ ಹಲ್ಲಿ ಬಿದ್ದಿರುವ ವಿಷಯವು ಮಕ್ಕಳು ಹಾಲು ಕುಡಿದ ಬಳಿಕ ಬಹಿರಂಗವಾಗಿತ್ತು.
ಬಳಿಕ ಎರಡು ಅಂಬ್ಯುಲನ್ಸ್ ಹಾಗೂ ಕೆಲವು ಖಾಸಗಿ ವಾಹನಗಳ ಮೂಲಕ ಸಂಕೇಶ್ವರದ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಾಲ್ವರು ಮಕ್ಕಳನ್ನು ಹುಕ್ಕೇರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಇದನ್ನೂ ಓದಿ:Puttige Paryaya: ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಜನ್ಮಭೂಮಿಯ ಗೌರವಾಭಿನಂದನೆ
ಘಟನೆಯ ಸುದ್ದಿ ತಿಳಿದ ಬಳಿಕ ಮಕ್ಕಳ ಪಾಲಕರು ಗಾಬರಿಗೊಂಡು ಸಂಕೇಶ್ವರ ಸರಕಾರಿ ಆಸ್ಪತ್ರೆಗೆ ಧಾವಿಸಿ ಮಕ್ಕಳ ಮುಖ ನೋಡಲು ಪರದಾಡುತ್ತಿದ್ದಾರೆ. ಸುದ್ದಿ ತಿಳಿದ ಹುಕ್ಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.