Belagavi: ಕರಾಳ ದಿನ ಆಚರಿಸುವ ಎಂಇಎಸ್ ಯೋಜನೆಗೆ ಅಡ್ಡಿಯಾದ ಬೆಳಗಾವಿ ಜಿಲ್ಲಾಧಿಕಾರಿ
Team Udayavani, Oct 15, 2024, 5:04 PM IST
ಬೆಳಗಾವಿ: ನವೆಂಬರ್ 1 ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನ ಆಚರಿಸಲು ಅನುಮತಿ ನೀಡುವಂತೆ ಆಗ್ರಹಿಸಿ ಮನವಿ ಸಲ್ಲಿಸಲು ಬಂದಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡರಿಗೆ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅನುಮತಿ ನೀಡುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿ ವಾಪಾಸ್ ಕಳುಹಿಸಿದ್ದಾರೆ.
ನವೆಂಬರ್ 1 ರಂದು ಕರಾಳ ದಿನ ಆಚರಿಸಲು ಅನುಮತಿ ನೀಡುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಎಂಇಎಸ್ ಮುಖಂಡರು ಮನವಿ ಸಲ್ಲಿಸಿದರು. ಆದರೆ ಯಾವುದೇ ಕಾರಣಕ್ಕೂ ಈ ಬಾರಿ ಕರಾಳ ದಿನಾಚರಣೆಗೆ ಅನುಮತಿಯಿಲ್ಲ ಎಂದು ಹೇಳಿ ಕಳುಹಿಸಿದ್ದಾರೆ.
ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡ, ಮಾಜಿ ಶಾಸಕ ಮನೋಹರ ಕಿಣೇಕರ ನೇತೃತ್ವದಲ್ಲಿ ಮಂಗಳವಾರ ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅವರನ್ನು ಭೇಟಿ ಮಾಡಿ ಕರಾಳ ದಿನದ ಮಾಹಿತಿ ನೀಡಿ ಅನುಮತಿಗಾಗಿ ಮನವಿ ಸಲ್ಲಿಸಿತು. ಈ ವೇಳೆ ಜಿಲ್ಲಾಧಿಕಾರಿಗಳು ಮತ್ತು ಎಂ.ಇ.ಎಸ್ ಪದಾಧಿಕಾರಿಗಳ ಮಧ್ಯೆ ಚರ್ಚೆ ನಡೆಯಿತು. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ರಾಜ್ಯೋತ್ಸವ ಆಚರಣೆಗೆ ತೊಂದರೆಯಾಗದಂತೆ ಕರಾಳ ದಿನವನ್ನು ಆಚರಿಸಲು ಅನುಮತಿ ನೀಡಬೇಕೆಂದು ಒತ್ತಾಯಿಸಲಾಯಿತು. ಆದರೆ ಇದಕ್ಕೆ ಒಪ್ಪದ ಜಿಲ್ಲಾಧಿಕಾರಿಗಳು ವಾಪಸ್ ಕಳುಹಿಸಿದ್ದು, ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ಹೋಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ
Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ
Bidar: ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ: ಐವರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ
Udupi: ಎಂಜಿಎಂ ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.