Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…
Team Udayavani, Sep 4, 2024, 7:38 PM IST
ಬೆಳಗಾವಿ: ಸಾಲಬಾಧೆಯಿಂದ ಬೇಸತ್ತು ನೇಕಾರನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಸುಳೇಭಾವಿ ಗ್ರಾಮದ ವಾಡೇ ಗಲ್ಲಿಯ ಪರುಶರಾಮ ಕಲ್ಲಪ್ಪ ವಾಗೂಕರ(47) ಎಂಬ ನೇಕಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪರುಶರಾಮ ನೇಕಾರಿಕೆ ಉದ್ಯೋಗಕ್ಕಾಗಿ ಸಾಲ ಮಾಡಿದ್ದರು. ಉದ್ಯೋಗ ಸರಿಯಾಗಿ ನಡೆಯದೇ ನಷ್ಟ ಅನುಭವಿಸಿದ್ದರು. ಸಾಲಬಾಧೆಯಿಂದ ಬೇಸತ್ತಿದ್ದರು. ಪರಶುರಾಮ ಅವರ ಪತ್ನಿ ಹಾಗೂ ಮಗಳು ಬೆಳಗಾವಿಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.