Belagavi: ನಂದಿಹಳ್ಳಿ ಕನ್ನಡ ಶಾಲೆಯಲ್ಲಿ ತಾರತಮ್ಯ

Team Udayavani, Jan 2, 2024, 3:20 PM IST

Belagavi: ನಂದಿಹಳ್ಳಿ ಕನ್ನಡ ಶಾಲೆಯಲ್ಲಿ ತಾರತಮ್ಯ

ಬೆಳಗಾವಿ: ಗಡಿ ಭಾಗದ ಬೆಳಗಾವಿ ತಾಲೂಕಿನ ನಂದಿಹಳ್ಳಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಕನ್ನಡ ಮಾಧ್ಯಮದ ಮಕ್ಕಳಿಗೆ ಶಾಲಾ ಕೊಠಡಿ ಹೊರಗಡೆ ಕೂರಿಸಿ ಪಾಠ ಹೇಳುವ ಮೂಲಕ ತಾರತಮ್ಯ ಮಾಡಲಾಗುತ್ತಿದೆ ಎಂದು ಕನ್ನಡ ಸಂಘಟನೆಯವರು ಆರೋಪಿಸಿದ್ದಾರೆ.

ನಂದಿಹಳ್ಳಿ ಗ್ರಾಮದಲ್ಲಿರುವ ಕನ್ನಡ ಸರ್ಕಾರಿ ಶಾಲೆಯ ಮಕ್ಕಳಿಗೆ ತಾರತಮ್ಯ ಮಾಡಲಾಗುತ್ತಿದೆ. ಒಂದೂವರೆ ವರ್ಷದಿಂದ
ಈ ತಾರತಮ್ಯ ನಡೆದಿದೆ. ಮರಾಠಿ ಮಾಧ್ಯಮದ ಮಕ್ಕಳಿಗೆ ಕೊಠಡಿಯೊಳಗೆ ಪಾಠ ಹೇಳುತ್ತಿದ್ದರೆ, ಕನ್ನಡ ಮಾಧ್ಯಮದ ಮಕ್ಕಳಿಗೆ ಕೊಠಡಿ ಹೊರ ಭಾಗದಲ್ಲಿ ಕೂರಿಸಿ ಪಾಠ ಹೇಳಲಾಗುತ್ತಿದೆ. ಇದರಿಂದ ಆಕ್ರೋಶಗೊಂಡ ಕರುನಾಡ ಸೇನೆ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದಲ್ಲಿರುವ ಈ ಶಾಲೆಯಲ್ಲಿ ಕನ್ನಡ ಹಾಗೂ ಮರಾಠಿ ಮಾಧ್ಯಮ ಮಕ್ಕಳು ಕಲಿಯುತ್ತಿದ್ದು, 1ರಿಂದ 7ನೇ ತರಗತಿಯಲ್ಲಿ
ಕನ್ನಡ ಮಾಧ್ಯಮದ 83 ಮಕ್ಕಳು ಇದ್ದಾರೆ. ಆದರೆ ಕೇವಲ 2 ಕೊಠಡಿಗಳು ಇರುವುದರಿಂದ ಮಕ್ಕಳಿಗೆ ಸೂಕ್ತ ಜಾಗ ಇಲ್ಲದೇ ಹೊರ ಭಾಗದಲ್ಲಿ ಅನಿವಾರ್ಯವಾಗಿ ಪಾಠ ಕಲಿಯಬೇಕಾಗಿದೆ. ಕನ್ನಡ ಶಾಲೆಗಳಿಗೆ ಈ ರೀತಿ ತಾರತಮ್ಯ ಮಾಡುತ್ತಿರುವ ಶಿಕ್ಷಣ ಇಲಾಖೆ ವಿರುದ್ಧ ಕಿಡಿಕಾರಿದರು.

ಮರಾಠಿ ಮಾಧ್ಯಮದ ಮಕ್ಕಳಿಗೆ ಸುಸಜ್ಜಿತ ಕಟ್ಟಡದಲ್ಲಿ ಪಾಠ, ಕನ್ನಡ ಮಾಧ್ಯಮದ ಮಕ್ಕಳಿಗೆ ಶಾಲಾ ಕಟ್ಟಡದ ಕಟ್ಟೆ ಮೇಲೆ ಪಾಠ ಮಾಡಲಾಗುತ್ತಿದೆ. ಒಂದೇ ಕೊಠಡಿಯಲ್ಲಿ ಐದು ತರಗತಿಗಳನ್ನು ನಡೆಸುತ್ತಿದ್ದರೆ, ಇನ್ನೊಂದು ಕೊಠಡಿಯಲ್ಲಿ ಕಚೇರಿ ಮತ್ತೂಂದು ತರಗತಿ ನಡೆಸಲಾಗುತ್ತಿದೆ. ಜತೆಗೆ ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲ. ಮರಾಠಿ ಭಾಷಿಕ ಮಕ್ಕಳು ಮಾತ್ರ ಸುಸಜ್ಜಿತ ಕಟ್ಟಡದಲ್ಲಿ ಪಾಠ ಕೇಳುತ್ತಿದ್ದಾರೆ ಎಂದು ಆರೋಪಿಸಿದರು.

ಆಕ್ರೋಶಗೊಂಡ ಕನ್ನಡ ಸಂಘಟನೆಗಳ ಹೋರಾಟಗಾರರು ಶಾಲೆಗೆ ನುಗ್ಗಿ ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡರು. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಕನ್ನಡ ಹೋರಾಟಗಾರ ಮನವೊಲಿಸಿ ವಾಪಾಸ್‌ ಕಳುಹಿಸಿದರು.

ನಮ್ಮ ಕನ್ನಡ ಶಾಲೆಯಲ್ಲಿ 83 ಮಕ್ಕಳು ಕಲಿಯುತ್ತಿದ್ದು ಎರಡು ಕೊಠಡಿಗಳಿವೆ. 1ರಿಂದ 3ನೇ ತರಗತಿವರೆಗೆ ನಲಿ ಕಲಿ ತರಗತಿ
ನಡೆಯುತ್ತದೆ. ಮರಾಠಿ ಶಾಲೆಯವರೇ ನಮಗೆ ಒಂದು ಕೊಠಡಿ ನೀಡಿದ್ದು, ಅದರಲ್ಲಿ ಪಾಠ ಮಾಡಲಾಗುತ್ತಿದೆ. ಇನ್ನೂ ಮೂರು ಕೊಠಡಿಗಳ ಅಗತ್ಯವಿದೆ. ಈ ಬಗ್ಗೆ ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿದೆ ಎಂದು ಈ ಬಗ್ಗೆ ಶಾಲಾ ಮುಖ್ಯ ಶಿಕ್ಷಕಿ ಪ್ರತಿಕ್ರಿಯಿಸಿದರು.

ನಂದಿಹಳ್ಳಿ ಗ್ರಾಮದಲ್ಲಿ ಮನೆ ಮನೆಗೆ ಹೋಗಿ ಜನರ ಹೆಸರು ಹಿಡಿದು ನಾನು ಕರೆಯುತ್ತೇನೆ. ಕನ್ನಡ ಮಕ್ಕಳಿಗೆ ತಾರತಮ್ಯ ಆಗುತ್ತಿರುವ ಬಗ್ಗೆ ಒಮ್ಮೆಯೂ ಜನ ನನಗೆ ಹೇಳಿಲ್ಲ. ನನ್ನ ಕ್ಷೇತ್ರದ ಮರಾಠಿ ಶಾಲೆಗಳಲ್ಲಿ ಮರಾಠಿ ಕಲೆಯುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗಿದೆ. ಪಾಲಕರು ಕನ್ನಡ ಮಾಧ್ಯಮಗಳಿಗೆ ಮಕ್ಕಳನ್ನು ಕಳುಹಿಸುತ್ತಿದ್ದಾರೆ.
*ಲಕ್ಷ್ಮೀ ಹೆಬ್ಬಾಳಕರ, ಸಚಿವ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.