ಬೆಳಗಾವಿ:ಜಿಲ್ಲಾಧಿಕಾರಿ ನಿವಾಸಕ್ಕೆ ಭದ್ರತೆಗಿದ್ದ ಪೊಲೀಸ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
Team Udayavani, May 6, 2020, 9:40 AM IST
ಬೆಳಗಾವಿ: ಜಿಲ್ಲಾಧಿಕಾರಿ ನಿವಾಸದಲ್ಲಿ ಭದ್ರತೆಯಲ್ಲಿದ್ದ ನಗರ ಮೀಸಲು ಪಡೆ ಪೊಲೀಸ್ ಪೇದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.
ನಗರ ಮೀಸಲು ಪಡೆಯ ಪೇದೆ ಪ್ರಕಾಶ ಗುರಮಠ (32) ಎಂಬ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತನ ದೇಹದಲ್ಲಿ ಎರಡು ಗುಂಡುಗಳು ಹೊಕ್ಕಿವೆ. ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಕಾರಣ ತಿಳಿದು ಬಂದಿಲ್ಲ. ಮುಂಜಾನೆ ವೇಳೆ ಘಟನೆ ಜಿಲ್ಲಾಧಿಕಾರಿಗಳ ಗಮನಕ್ಕೆ ಬಂದಿದ್ದು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಅವರ ನಿವಾಸಕ್ಕೆ ಭದ್ರತೆಯಲ್ಲಿದ್ದ ಪ್ರಕಾಶ ಗುರಮಠ ಮೂಲತಃ ಎಂ.ಕೆ. ಹುಬ್ಬಳ್ಳಿ ಬಳಿಯ ಅಂಬಡಗಟ್ಟಿ ಗ್ರಾಮದವರು. ಇವರಿಗೆ ಪತ್ನಿ, ಇಬ್ಬರು ಪುತ್ರರು, ತಂದೆ-ತಾಯಿ ಇದ್ದು, ಸಹೋದರ ಇಂಜಿನಿಯರಿಂಗ್ ಓದುತ್ತಿದ್ದಾನೆ. 2012ರಲ್ಲಿ ಬೆಂಗಳೂರಿನಲ್ಲಿ ಭರ್ತಿ ಆಗಿದ್ದರು. . ಕೆಲ ವರ್ಷಗಳ ಹಿಂದೆ ಬೆಳಗಾವಿಗೆ ವರ್ಗಾವಣೆ ಮಾಡಿಕೊಂಡು ಬಂದು ಕರ್ತವ್ಯ ನಿರ್ವಹಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
US Consulate: ಬೆಂಗಳೂರಲ್ಲಿ ಜ.17ಕ್ಕೆ ಅಮೆರಿಕ ದೂತಾವಾಸ ಕಚೇರಿ ಆರಂಭ
Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ?
ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.