ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮೆರವಣಿಗೆಯೊಂದಿಗೆ ಚಾಲನೆ: ಮೆರವಣಿಗೆಗೆ ಕಲಾತಂಡಗಳ ಮೆರಗು
Team Udayavani, Dec 21, 2022, 1:15 PM IST
ಚಿಕ್ಕೋಡಿ: 15 ನೇ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರ ಮೆರವಣಿಗೆಯೊಂದಿಗೆ ಅದ್ದೂರಿಯಾಗಿ ಚಾಲನೆಗೊಂಡಿತ್ತು.
ಚಿಕ್ಕೋಡಿ ನಗರದ ಸಿಎಲ್ ಇ ಸುವರ್ಣ ಮಹೋತ್ಸವ ಕಟ್ಟಡದ ಅವರಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಬುಧವಾರ ಬೆಳಿಗ್ಗೆ ಪುರಸಭೆಯಿಂದ ಮೆರವಣಿಗೆ ಆರಂಭಗೊಂಡಿತ್ತು.
ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿರುವ ಕನ್ನಡದ ಸ್ವಾಮೀಜಿ ಎಂದೇ ಖ್ಯಾತರಾದ ಚಿಂಚಣಿ ಶ್ರೀ ಅಲ್ಲಮಪ್ರಭು ಸ್ವಾಮೀಜಿ ಕುದುರೆ ರಥದಲ್ಲಿ ಅದ್ದೂರಿ ಮೆರವಣಿಗೆ ನಡೆಸಿದರು.
ಜಿಲ್ಲೆಯ ವಿವಿಧ ತಾಲೂಕಿನ ಕಲಾ ತಂಡಗಳು ಮೆರವಣಿಗೆ ಮೆರಗು ನೀಡಿದರು. ಚಿಕ್ಕೋಡಿ ವಿವಿಧ ಶಾಲಾ- ಕಾಲೇಜಿನ ಸುಮಾರು 6 ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಕನ್ನಡದ ಜಯಘೋಷ ಮೊಳಗಿಸಿದರು.
ನಿಡಸೋಸಿ ಶ್ರೀ ಪಂಚಮಶಿವಲಿಂಗೇಶ್ವರ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು.
ಚಿಕ್ಕೋಡಿ ಶ್ರೀ ಸಂಪಾದನ ಸ್ವಾಮೀಜಿ, ಸಹಕಾರ ಮಹಾಮಂಡಳದ ರಾಜ್ಯ ಉಪಾಧ್ಯಕ್ಷ ಜಗದೀಶ ಕವಟಗಿಮಠ, ಸಿಬಿ.ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಕೋರೆ, ಜಿಲ್ಲಾ ಕಸಾಪ ಅಧ್ಯಕ್ಷ ಶ್ರೀಮತಿ ಮಂಗಳಾ ಮೆಟಗುಡ್ಡ, ತಾಲೂಕು ಕಸಾಪ ಅಧ್ಯಕ್ಷ ಡಾ.ಸುರೇಶ ಉಕ್ಕಲಿ, ಪುರಸಭೆ ಅಧ್ಯಕ್ಷ ಪ್ರವೀಣ ಕಾಂಬಳೆ, ಉಪಾಧ್ಯಕ್ಷ ಸಂಜಯ ಕವಟಗಿಮಠ, ಕಸಾಪ ಪದಾಧಿಕಾರಿಗಳಾದ ಚಂದ್ರಶೇಖರ ಅರಭಾವಿ, ವಿರೂಪಾಕ್ಷಿ ಕವಟಗಿ, ಶ್ರೀಪಾದ ಕುಂಬಾರ, ಉಪನ್ಯಾಸಕ ಸಚೀನ ಮೆಕ್ಕಳಕ್ಕಿ, ಸಾಗರ ಬಿಸ್ಕೋಪ, ಡಿ.ಎಸ್.ಕೋಳಿ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.