Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್ನಲ್ಲಿ ಜಲವೈಭವ
Team Udayavani, May 14, 2024, 4:31 PM IST
ಬೆಳಗಾವಿ: ಬಿರು ಬೇಸಿಗೆಯಲ್ಲೂ ಸುಪ್ರಸಿದ್ಧ ಗೋಕಾಕ್ ಫಾಲ್ಸ್ನಲ್ಲಿ ಜಲವೈಭವ ಸೃಷ್ಟಿಯಾಗಿದೆ. ಮಳೆಗಾಲದಲ್ಲಿ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುವ ಫಾಲ್ಸ್ ಈಗ ಬೇಸಿಗೆಯಲ್ಲೂ ಧುಮ್ಮಿಕ್ಕುತ್ತಿದೆ.
ಘಟಪ್ರಭಾ ಜಲಾಶಯದಿಂದ ನೀರು ಬಿಡುಗಡೆ ಮಾಡಿದ ಪರಿಣಾಮ ಗೋಕಾಕ್ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ.
ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂನಲ್ಲಿರುವ ಘಟಪ್ರಭಾ ಜಲಾಶಯದಿಂದ ನದಿಪಾತ್ರದ ಜನರಿಗೆ ಕುಡಿಯುವ ನೀರಿಗೆ ಅನುಕೂಲ ಕಲ್ಪಿಸಲು ನೀರು ಬಿಡುಗಡೆ ಮಾಡಲಾಗಿದೆ.
ಕಳೆದ ಮೂರು ದಿನಗಳಿಂದ ಹಂತಹಂತವಾಗಿ ಒಂದೂವರೆ ಟಿಎಂಸಿ ನೀರು ಬಿಡುಗಡೆಯಾಗಿದೆ. ದೊಡ್ಡ ಪ್ರಮಾಣದಲ್ಲಿ ನಿತ್ಯ ನೀರು ಬಿಡುಗಡೆಯಾಗುತ್ತಿರುವ ಕಾರಣಕ್ಕೆ ಗೋಕಾಕ್ ಫಾಲ್ಸ್ ಜನರನ್ನು ಸೆಳೆಯುತ್ತಿದೆ. 180 ಅಡಿ ನೀರು ಧುಮ್ಮುಕ್ಕುವ ಈ ಜಲಪಾತ ನೋಡುವುದೇ ಪ್ರವಾಸಿಗರಿಗೆ ಹಬ್ಬವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.