ಸುವರ್ಣ ಸೌಧದೆದುರು ರೈತರ ಆಕ್ರೋಶ
ಎಪಿಎಂಸಿ,ಜಾನುವಾರು ಹತ್ಯೆ ನಿಷೇಧ ಕಾಯ್ದೆ ವಾಪಸ್‌ಗೆ ಆಗ್ರಹ
Team Udayavani, Dec 14, 2021, 5:30 AM IST

ಬೆಳಗಾವಿ: ಭೂ ಸುಧಾರಣ ಕಾಯ್ದೆ, ಎಪಿಎಂಸಿ ಹಾಗೂ ಜಾನುವಾರು ಹತ್ಯೆ ನಿಷೇಧ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ರೈತರು ಪ್ರತಿಭಟನೆ ನಡೆಸಿದರು.
ಇಲ್ಲಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ ಆರಂಭಗೊಂಡಿರುವ ವಿಧಾನ ಮಂಡಲ ಅ ಧಿವೇಶನ ಹಿನ್ನೆಲೆಯಲ್ಲಿ ಕೊಂಡಸಕೊಪ್ಪ ಗ್ರಾಮದ ಬಳಿ ರೈತರು ಪ್ರತಿಭಟನೆ ನಡೆಸಿ ಕಾಯ್ದೆಗಳನ್ನು ಹಿಂಪಡೆಯುವಂತೆ ಪಟ್ಟು ಹಿಡಿದರು.
ಮಧ್ಯಾಹ್ನ 2:30ರೊಳಗೆ ಮುಖ್ಯಮಂತ್ರಿಗಳು ಸ್ಥಳಕ್ಕೆ ಬರಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ ಗಡುವು ನೀಡಿದರು. ಸರಕಾರ ಸ್ಪಂದಿಸದಿದ್ದರೆ ಬೇಲಿ ಹಾರಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವಂತೆ ರೈತರನ್ನು ಪ್ರಚೋದಿಸಿದರು.
ಪ್ರತಿಭಟನ ನಿರತ ಸ್ಥಳಕ್ಕೆ ಆಗಮಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು, ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು. ಪ್ರಮುಖವಾದ ಬೇಡಿಕೆ ಬಗ್ಗೆ ಸ್ಪಂದಿಸುವಂತೆ ಮನವರಿಕೆ ಮಾಡಿ ಕೊಡಲಾಗುವುದು ಎಂದು ಭರವಸೆ ನೀಡಿದರು.
ಇದನ್ನೂ ಓದಿ:ತಿರುಪತಿಯಿಂದ ತಿರುಮಲಕ್ಕೆ ಮತ್ತೊಂದು ರಸ್ತೆ
ಸ್ಥಳಕ್ಕೆ ಆಗಮಿಸಿದ ಸಚಿವ ಬೈರತಿ ಬಸವರಾಜ ಮಾತನಾಡಿ, ಅ ಧಿವೇಶನ ಮೊದಲ ದಿನ ಸಂತಾಪ ಸೂಚಿಸುವುದರಲ್ಲಿಯೇ ಕಳೆದಿದೆ. ತುರ್ತು ಕಾರ್ಯಕ್ರಮ ಬಂದಿರುವುದರಿಂದ ಮುಖ್ಯಮಂತ್ರಿಗಳು ವಾರಾಣಸಿಗೆ ತೆರಳಿದ್ದಾರೆ. ಡಿ.14ರಂದು ವಾಪಸ್ ಬಂದ ಬಳಿಕ ಈ ಬಗ್ಗೆ ಚರ್ಚಿಸಲಾಗುವುದು. ನಮ್ಮ ಸರಕಾರ ರೈತರ ಪರವಾಗಿದೆ. ರೈತರ ಬೇಡಿಕೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು ಎಂದರು.
ವಾರದೊಳಗೆ ಬೇಡಿಕೆ ಈಡೇರಿಸದಿದ್ದರೆ ಡಿ.20ರಂದು ಬಾರುಕೋಲು ಚಳವಳಿ ನಡೆಸಲು ನಿರ್ಧರಿಸಿ ರೈತರು ಪ್ರತಿಭಟನೆಯನ್ನು ಹಿಂಪಡೆದುಕೊಂಡರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ

Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.