Belagavi: ಪ್ರವಾಹಕ್ಕೆ 44 ಸೇತುವೆ ಮುಳುಗಡೆ; ಬೆಳಗಾವಿ-ಮಿರಜ ನಡುವೆ ವಿಶೇಷ ರೈಲು
Team Udayavani, Jul 30, 2024, 9:38 PM IST
ಬೆಳಗಾವಿ: ಕೃಷ್ಣಾ ನದಿಯಿಂದ 3 ಲಕ್ಷ ಕ್ಯೂಸೆಕ್ ನೀರು ಮತ್ತು ಘಟಪ್ರಭಾ ನದಿಯಿಂದ 73 ಸಾವಿರ ಕ್ಯೂಸೆಕ್‌ಗಿಂತ ಹೆಚ್ಚು ನೀರನ್ನು ಹರಿಬಿಡುತ್ತಿರುವ ಪರಿಣಾಮವಾಗಿ ಜಿಲ್ಲೆಯ ಕೃಷ್ಣಾ ಹಾಗೂ ಘಟಪ್ರಭಾ ನದಿಯ ವ್ಯಾಪ್ತಿಯಲ್ಲಿ 44ಕ್ಕೂ ಹೆಚ್ಚು ಸೇತುವೆಗಳು ಜಲಾವೃತಗೊಂಡು ರಸ್ತೆ ಸಾರಿಗೆ ಸಂಪರ್ಕ ಕಡಿತಗೊಂಡಿದೆ.
ಇದರಿಂದ ಸಾರ್ವಜನಿಕರಿಗೆ ಬಹಳ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬೆಳಗಾವಿಯಿಂದ ಮಿರಜವರಗೆ ಪ್ಯಾಸೆಂಜರ್ ವಿಶೇಷ ರೈಲು ಪ್ರಾರಂಭಿಸಲಾಗುತ್ತಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಈ ಬಗ್ಗೆ ನೈರುತ್ಯ ರೈಲ್ವೆ ಮಹಾಪ್ರಬಂಧಕರಿಗೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಅಗಸ್ಟ್ 1 ರಿಂದ 4 ದಿನಗಳವರೆಗೆ ಪ್ಯಾಸೆಂಜರ್ ವಿಶೇಷ ರೈಲು ಬಿಡಲು ಆದೇಶಿಸಿದ್ದಾರೆ ಎಂದು ಈರಣ್ಣ ಕಡಾಡಿ ಹೇಳಿದ್ದಾರೆ.
ಬೆಳಗಾವಿ-ಮಿರಜ ರೈಲು ಅ-01 (07301) ಮುಂಜಾನೆ 6 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಮು. 9ಕ್ಕೆ ಮಿರಜ ನಿಲ್ದಾಣ ತಲುಪಲಿದೆ.
ಮಿರಜ-ಬೆಳಗಾವಿ ರೈಲು ಸಂಖ್ಯೆ (07302) ಮುಂಜಾನೆ 9.50 ಕ್ಕೆ ಮಿರಜನಿಂದ ಹೊರಟು ಮಧ್ಯಾಹ್ನ 12.50 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ.
ಬೆಳಗಾವಿ-ಮಿರಜ ರೈಲು (07303) ಮಧ್ಯಾಹ್ನ 01.30 ಗಂಟೆಗೆ ಬೆಳಗಾವಿ ನಿಲ್ದಾಣದಿಂದ ಹೊರಟು ಸಂಜೆ 04.30ಕ್ಕೆ ಮಿರಜ ತಲುಪಲಿದೆ.
ಮಿರಜ-ಬೆಳಗಾವಿ ರೈಲು ಸಂಖ್ಯೆ (07304) ಸಂಜೆ 05.35 ಕ್ಕೆ ಮಿರಜನಿಂದ ಹೊರಟು ರಾತ್ರಿ 08.35 ಕ್ಕೆ ಬೆಳಗಾವಿ ನಿಲ್ದಾಣ ತಲುಪಲಿದೆ ಎಂದು ಕಡಾಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.