Belagavi: ಗಡಿಯಲ್ಲಿ ಕನ್ನಡ ಭಾಷೆ ಗಟ್ಟಿಗೊಳಿಸಬೇಕಿದೆ-ಶ್ರೀ


Team Udayavani, Oct 31, 2023, 5:41 PM IST

Belagavi: ಗಡಿಯಲ್ಲಿ ಕನ್ನಡ ಭಾಷೆ ಗಟ್ಟಿಗೊಳಿಸಬೇಕಿದೆ-ಶ್ರೀ

ಬೆಳಗಾವಿ: ಬೆಳಗಾವಿಯಂತಹ ಗಡಿ ಜಿಲ್ಲೆಯಲ್ಲಿ ಕನ್ನಡ ಭಾಷೆ ಗಟ್ಟಿಗೊಳಿಸಬೇಕಾದ ಅವಶ್ಯಕತೆ ಇದೆ. ಇಲ್ಲಿ ಕನ್ನಡ ಭಾಷೆ ಗಟ್ಟಿಗೊಳಿಸಿದರೆ ಅನ್ಯಭಾಷೆಗಳು ಪ್ರವೇಶಿಸುವುದಿಲ್ಲ. ಇದರ ಬಗ್ಗೆ ಯಾವುದೇ ತರಹದ ನಿರ್ಲಕ್ಷ ಸಲ್ಲದು. ಕನ್ನಡ ಕಾರ್ಯಕ್ರಮಗಳಲ್ಲಿ ಹೆಚ್ಚಿನ  ಸಂಖ್ಯೆಯಲ್ಲಿ ಜನರು ಭಾಗವಹಿಸುವ ಮೂಲಕ ನಮ್ಮ ಶಕ್ತಿ ಪ್ರದರ್ಶಿಸಬೇಕು ಎಂದು ಗದಗ ಡಂಬಳದ ಎಡೆಯೂರು ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ಡಾ. ಸಿದ್ದರಾಮ ಸ್ವಾಮಿಗಳು ಹೇಳಿದರು.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಕಲ್ಯಾಣರಾವ ಮುಚಳಂಬಿಯವರ ದ್ವಿತೀಯ ಪುಣ್ಯಸ್ಮರಣೆ ನಿಮಿತ್ತ ಜರುಗಿದ ಕಲ್ಯಾಣ ಶ್ರೀ ಪ್ರಶಸ್ತಿ ಪ್ರದಾನ ಹಾಗೂ ಕವನ ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಕಲ್ಯಾಣರಾವ ಮುಚಳಂಬಿಯವರು ನಿಧನರಾಗಿ ಎರಡು ವರ್ಷಗಳು ಗತಿಸಿದರೂ ಅವರ ನೆನಪುಗಳು ನಮ್ಮಲ್ಲಿ ಇನ್ನೂ ಹಚ್ಚ ಹಸಿರಾಗಿ ಇರಲು ಅವರ ಒಳ್ಳೆಯ ಗುಣಗಳೇ ಕಾರಣ. ಸ್ನೇಹ  ಜೀವಿಯಾಗಿದ್ದ ಅವರು ಹೋರಾಟದ ಮನೋಭಾವ ಬೆಳೆಸಿಕೊಂಡಿದ್ದರು ಎಂದರು.

ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಎಲ್ಲ ಸಲಹೆ ಸೂಚನೆಗಳನ್ನು ಆಲಿಸಿ ತಮಗೆ ಯಾವುದು ಸರಿ ಅನ್ನಿಸುತ್ತದೆಯೋ ಅದನ್ನೆ ಮಾಡುವ ವ್ಯಕ್ತಿ ಕಲ್ಯಾಣರಾವ್‌ ಮುಚಳಂಬಿಯವರು ಆಗಿದ್ದರು ಎಂದು ಸ್ಮರಿಸಿದರು.

ಹಿರಿಯ ಪತ್ರಕರ್ತ ಎಮ್‌.ಬಿ.ಗೌಡ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಎಲ್‌.ಎಸ್‌. ಶಾಸ್ತ್ರಿ, ಸಾಹಿತಿ ಮಂಗಳಾ ಮೆಟಗುಡ್ಡ ಮತ್ತು ರೈತ ಹೋರಾಟಗಾರ್ತಿ ಪಾರ್ವತಿ ಕಳಸಣ್ಣವರ ಅವರಿಗೆ ಕಲ್ಯಾಣಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದಲ್ಲದೆ ಕವನ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ವೀರಶೈವ ಮಹಾಸಭೆ ಜಿಲ್ಲಾ ಅಧ್ಯಕ್ಷ ರತ್ನಪ್ರಭಾ ಬೆಲ್ಲದ, ಮಲ್ಲಿಕಾರ್ಜುನ ವಾಲಿ, ಜಲತ್ಕುಮಾರ ಪುಣಜಗೌಡಾ, ಸ.ರಾ.ಸುಳಕುಡೆ, ಮುರಗೇಶ ಶಿವಪೂಜಿ, ವಿಜಯಕುಮಾರ ಪಾಟೀಲ, ಬಸವರಾಜ ಗಾರ್ಗಿ, ಬಸವರಾಜ ಸುಣಗಾರ, ವೀರಭದ್ರಪ್ಪಾ ಅಂಗಡಿ, ಕೆ.ಎಸ್‌.ನಾಗರಾಜ, ಮುನ್ನಾ
ಬಾಗವಾನ, ಮಹಾಂತೇಶ ಕುರಬೇಟ, ಗಂಗಾಧರ ಗುಜನಟ್ಟಿ ಉಪಸ್ಥಿತರಿದ್ದರು. ವಿಜಯಕುಮಾರ ಮುಚಳಂಬಿ ಸ್ವಾಗತಿಸಿದರು. ಆಶಾ ಯಮಕನಮರ್ಡಿ ಪಾರ್ಥಿಸಿದರು. ರಾಜಶ್ರೀ ಹಿರೇಮಠ ನಿರೂಪಿಸಿದರು. ಎಮ್‌.ವೈ. ಮೆಣಸಿನಕಾಯಿ ವಂದಿಸಿದರು.

ಟಾಪ್ ನ್ಯೂಸ್

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: Child trafficking network found; child rescued

Belagavi: ಮಕ್ಕಳ ಮಾರಾಟ ಜಾಲ ಪತ್ತೆ; ಮಗುವಿನ ರಕ್ಷಣೆ

School bag

ಜ.21 ರಂದು ಬೆಳಗಾವಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Belagavi: ಪ್ರಭಾಕರ ಕೋರೆಯವರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆ ಶಿವಕುಮಾರ್‌ ಸ್ಪಷ್ಟನೆ

Belagavi: ಪ್ರಭಾಕರ ಕೋರೆಯವರನ್ನು ಕಾಂಗ್ರೆಸ್ ಗೆ ಕರೆದಿಲ್ಲ: ಡಿಕೆ ಶಿವಕುಮಾರ್‌ ಸ್ಪಷ್ಟನೆ

Tourism: 800 ಅಡಿ ಎತ್ತರದ ಬೆಟ್ಟದಲ್ಲಿ ಭವ್ಯ ಇತಿಹಾಸ ಸಾರುವ ಗಜೇಂದ್ರಗಡ ಕೋಟೆ

Tourism: 800 ಅಡಿ ಎತ್ತರದ ಬೆಟ್ಟದಲ್ಲಿ ಭವ್ಯ ಇತಿಹಾಸ ಸಾರುವ ಗಜೇಂದ್ರಗಡ ಕೋಟೆ

ಬೆಳಗಾವಿಯ ಹಿಡಕಲ್‌ನಲ್ಲಿ ರಾಜ್ಯದ ಮೊದಲ ಡೋಮ್‌ ಮಾದರಿ ಪಕ್ಷಿಧಾಮ

Tourism: ಬೆಳಗಾವಿಯ ಹಿಡಕಲ್‌ನಲ್ಲಿ ರಾಜ್ಯದ ಮೊದಲ ಡೋಮ್‌ ಮಾದರಿ ಪಕ್ಷಿಧಾಮ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

14

Sullia: ಚರಂಡಿಯಲ್ಲಿ ಸಿಲುಕಿದ ಶಾಲಾ ವಾಹನ

byndoor

Shirva: ಕಾರು ಢಿಕ್ಕಿ; ದ್ವಿಚಕ್ರ ಸವಾರನಿಗೆ ಗಾಯ

car-parkala

Kaup: ಉದ್ಯಾವರ; ಮಹಿಳೆಗೆ ಬೈಕ್‌ ಢಿಕ್ಕಿ

2

Udupi: ವೇಶ್ಯಾವಾಟಿಕೆ; ಓರ್ವನ ಬಂಧನ

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.