Belagavi; ಗ್ರಾಮೀಣ ಭಾಗದಲ್ಲಿ ಬಸ್ ಕೊರತೆ ತಗ್ಗಿಸಲು ಕ್ರಮ: ರಾಮಲಿಂಗಾ ರೆಡ್ಡಿ
Team Udayavani, Feb 18, 2024, 4:02 PM IST
ಬೆಳಗಾವಿ: ರಾಜ್ಯದಲ್ಲಿ ಬಸ್ ಗಳ ಖರೀದಿ ಪ್ರಕ್ರಿಯೆ ಆರಂಭವಾಗಿದ್ದು ಗ್ರಾಮೀಣ ಭಾಗದಲ್ಲಿ ಬಸ್ ಕೊರತೆ ತಗ್ಗಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಭಾನುವಾರ ನಡೆದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಬಸ್ಸುಗಳ ಲೋಕಾರ್ಪಣೆ, ಅಪಘಾತರಹಿತ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಹಾಗೂ ಹಾರೂಗೇರಿ ನೂತನ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನೂತನ ಬಸ್ ಗಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದ್ದು, 2 ಸಾವಿರಕ್ಕಿಂತಲೂ ಅಧಿಕ ವಾಹನ ಚಾಲಕರ ಹಾಗೂ ನಿರ್ವಾಹಕರ ಹುದ್ದೆಗಳ ಭರ್ತಿ ಪ್ರಕ್ರಿಯೆ ಕೂಡ ಚಾಲನೆಯಲ್ಲಿದೆ ಎಂದರು.
ಮುಂಬರುವ ದಿನಗಳಲ್ಲಿ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚುವರಿ ಬಸ್ ಸಂಚಾರ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಹೇಳಿದರು.
ಅಪಘಾತಗಳಲ್ಲಿ ಮೃತರಾದ ಬಸ್ ಚಾಲಕರಿಗೆ, ಕಂಡಕ್ಟರ್ ಗಳ ವಾರಸುದಾರರಿಗೆ 50 ಲಕ್ಷ ರೂಪಾಯಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಈ ಪರಿಹಾರ ಧನವನ್ನು 1 ಕೋಟಿಗೆ ಹೆಚ್ಚಿಸುವಂತೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಇದಕ್ಕೂ ಮುನ್ನ ನೂತನವಾಗಿ 50 ಬಸ್ ಗಳನ್ನು ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸಿದ ಸಚಿವರು, ಅಪಘಾತ ರಹಿತ 5 ವರ್ಷಗಳ ವಾಹನ ಚಾಲನೆ ಮಾಡಿದ 38 ಬಸ್ ಚಾಲಕರಿಗೆ ಬೆಳ್ಳಿ ಪದಕ, ಪ್ರಶಸ್ತಿ ಪತ್ರ ನೀಡಿ, ಸನ್ಮಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.