ರಾಜನಾಥ ಸಿಂಗ್-ಮಂಗಲಾ ಭೇಟಿ
Team Udayavani, Jul 18, 2021, 10:22 PM IST
ಬೆಳಗಾವಿ: ಸಂಸದೆ ಮಂಗಲಾ ಸುರೇಶ ಅಂಗಡಿ ಅವರು ಶನಿವಾರ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚಿಸಿದರು.
ಇದೇ ಸಂದರ್ಭದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಳಗಾವಿ ನಗರದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಕೆಲವು ರಸ್ತೆಗಳು, ರಕ್ಷಣಾ ಹಾಗೂ ಕಂಟೋನ್ಮೆಂಟ್ ವ್ಯಾಪ್ತಿಯಲ್ಲಿ ಬರುತ್ತಿದ್ದು, ಈ ರಸ್ತೆಗಳ ಅಗಲೀಕರಣ ಹಾಗೂ ಸುಧಾರಣೆಗೆ ಕಾಮಗಾರಿ ಕೈಗೊಳ್ಳಲು ಅನುಮತಿ ನೀಡುವಂತೆ ಮನವಿ ಮಾಡಿದರು.
ರಸ್ತೆ ಅಗಲೀಕರಣಕ್ಕೆ ಬೇಕಾಗುವ ಜಾಗೆಯ ಬದಲಾಗಿ ಸಮಾನಾಂತರ ಮೌಲ್ಯದ ಜಾಗ ಸಹ ನೀಡುವ ಕುರಿತು ಪ್ರಸ್ತಾವನೆಯನ್ನು ಈಗಾಗಲೇ ಕರ್ನಾಟಕ ಸರಕಾರದಿಂದ ರಕ್ಷಣಾ ಇಲಾಖೆಗೆ ಕಳುಹಿಸಲಾಗಿದ್ದು, ಈ ಪ್ರಸ್ತಾವನೆಗೆ ಶೀಘ್ರ ಅನುಮೋದನೆ ನೀಡಿದಲ್ಲಿ ಹಲವು ತಿಂಗಳಿಂದ ನನೆಗುದಿಗೆ ಬಿದ್ದ ಪ್ರಸ್ತಾಪಿತ ಯೋಜನೆಯಡಿಯ ರಸ್ತೆ ಕಾಮಗಾರಿಗಳನ್ನು ಕೈಗೊಂಡು ಸುಗಮ ವಾಹನ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಕೂಡಲೇ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.