ಚುನಾವಣಾ ಶಾಖೆಯ ಶಿರಸ್ತೇದಾರರಾಗಿದ್ದ ನಾಗನೂರಿ ಕೋವಿಡ್ ಗೆ ಬಲಿ
Team Udayavani, May 15, 2021, 12:07 PM IST
ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆ ವೇಳೆ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯ ಶಿರಸ್ತೇದಾರರಾಗಿದ್ದ ವಿಜಯಶ್ರೀ ನಾಗನೂರಿ ಅವರು ಕೋವಿಡ್ ಸೋಂಕಿನಿಂದ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಲೋಕಸಭೆ ಉಪಚುನಾವಣೆ ವೇಳೆ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ವಿಜಯಶ್ರೀ ನಾಗನೂರಿ ಅವರಿಗೆ ಕೆಲ ದಿನಗಳ ಹಿಂದೆ ಸೋಂಕು ದೃಢಪಟ್ಟಿತ್ತು.
ನಗರದ ಯಮನಾಪುರ ನಿವಾಸಿ ಆಗಿದ್ದ ನಾಗನೂರಿ ಅವರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ವಿಭಾಗದಲ್ಲಿ ಶಿರಸ್ತೇದಾರ ಆಗಿದ್ದರು. ಚುನಾವಣೆ ಫಲಿತಾಂಶ ಬಂದ ಬಳಿಕ ಮೇ 3ರಂದು ವಿಜಯಶ್ರೀ ನಾಗನೂರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು.
ಇವರ ಕುಟುಂಬದ ಎಲ್ಲರಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಚುನಾವಣಾ ಫಲಿತಾಂಶ ಬಳಿಕ ಸೋಂಕು ದೃಢಪಟ್ಟ ಬಳಿಕ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ತೆಕ್ಕಟ್ಟೆ : ಕೋವಿಡ್ ಗೆದ್ದ ಒಂದೇ ಮನೆಯ 19 ಮಂದಿ
ಸಚಿವ ಕಾರಜೋಳ ಸಂತಾಪ: ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ನಾಗನೂರಿ ಅವರ ನಿಧಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರೂ ಸಂತಾಪ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯಲ್ಲಿ ಹಲವಾರು ವರ್ಷಗಳಿಂದ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀಮತಿ ನಾಗನೂರಿ ಅವರ ನಿಧನದಿಂದ ಆಘಾತ ಉಂಟಾಗಿದೆ. ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.