ಮಹಿಳಾ ಸಬಲತೆಯಿಂದ ಪ್ರಜಾಪ್ರಭುತ್ವಕ್ಕೆ ಬಲ: ಸೋಮಶೇಖರ 


Team Udayavani, Nov 30, 2018, 5:22 PM IST

30-november-21.gif

ಬೆಳಗಾವಿ: ತಾರತಮ್ಯದ ಸಮಾಜದಲ್ಲಿ ಸತ್ಯ ಹೇಳುವ ಕಷ್ಟ ಮಹಿಳೆಯರನ್ನು ಅಗೋಚರವಾಗಿ ಕಾಡುವ ಮತ್ತು ಕಾಣುವ ಸ್ಥಿತಿ ಭಾರತದಲ್ಲಿ ನಿರ್ಮಾಣವಾಗಿದೆ. ಅಂತಹ ಸಂದರ್ಭದಲ್ಲಿ ಮಹಿಳಾ ಸಂಘಟನೆಗಳು ತೀವ್ರವಾಗಿ ದನಿಯೆತ್ತಿವೆ ಎಂದು ಮೈಸೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ| ಜೆ. ಸೋಮಶೇಖರ ಅಭಿಪ್ರಾಯ ವ್ಯಕ್ತಪಡಿಸಿದರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಭವನದಲ್ಲಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ವತಿಯಿಂದ ರಾಜಕೀಯ ಪಾಲ್ಗೊಳ್ಳುವಿಕೆ, ಸಜ್ಜು ಗೊಳಿಸುವುದು ಮತ್ತು ಸಂಘಟನೆಯಿಂದ ಮಹಿಳೆಯರ ಸಬಲೀಕರಣ ಎಂಬ ವಿಷಯದ ಕುರಿತು ಆಯೋಜಿಸಿದ್ದ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ ನುಡಿದಂತೆ ರಾಷ್ಟ್ರದ ಪ್ರಗತಿ ಮಹಿಳೆಯರ ಪ್ರಗತಿ ಮೇಲೆ ನಿಂತಿದೆ. ರಾಜಕಾರಣದಲ್ಲಿ ಮತಗಳು ಅತಿಮುಖ್ಯ. ಹಾಗಾಗಿ ಮಹಿಳೆ ತನ್ನ ರಾಜಕೀಯ ಸಂಘಟನೆ, ಭಾಗವಹಿಸುವಿಕೆ ಹಾಗೂ ಅರಿವನ್ನು ವಿಸ್ತರಿಸಿಕೊಂಡರೆ ಪ್ರಜಾಪ್ರಭುತ್ವಕ್ಕೆ ಹೆಚ್ಚು ಬಲ ಬರುತ್ತದೆ ಎಂದರು.

ದೇಶದಲ್ಲಿ ಮಹಿಳಾ ಸಬಲೀಕರಣಕ್ಕೆ ಮುಕ್ತ ಅವಕಾಶ ನೀಡಲಾಗಿದೆ. ದೇಶದಲ್ಲಿ ಅತೀ ಹೆಚ್ಚು ಅವಧಿಯ  ಆಡಳಿತ ನೀಡಿದ ಹೆಮ್ಮೆ ಇಂದಿರಾಗಾಂಧಿ ಅವರಿಗೆ ಸಲ್ಲುತ್ತದೆ. ಮಾಯಾವತಿ ಸ್ವತಂತ್ರ ಪಕ್ಷ ಕಟ್ಟಿದರು. ಸಾವಿತ್ರಿಬಾಯಿ ಫುಲೆ ದೇಶದ ಪ್ರಥಮ ಶಿಕ್ಷಕಿ ಎನ್ನುವುದು ಅಷ್ಟೆ ಸತ್ಯ. ಇದರೊಂದಿಗೆ ಈಗಿನ ದಿನಗಳಲ್ಲಿ ಮಹಿಳೆಯು ಸಾಕಷ್ಟು ಸವಾಲುಗಳನ್ನು ಎದುರಿಸಬೇಕಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ| ರಂಗರಾಜ ವನದುರ್ಗ ಮಾತನಾಡಿ, ಮಹಿಳೆಯರಿಗೆ ಯಾವ ರೀತಿ ಹಾಗೂ ಯಾವ ಕ್ಷೇತ್ರದಲ್ಲಿ ಸಬಲೀಕರಣ ಅಗತ್ಯ ಎನ್ನುವ ಆಯಾಮ ಸ್ಪಷ್ಟವಾಗಬೇಕಾಗಿದೆ. ಇಂದಿನ ದಿನಗಳಲ್ಲಿ ಮಹಿಳೆಯರ ಸಬಲೀಕರಣ ಅಗತ್ಯವಾಗಿದೆ. ರಾಜಕಾರಣದಲ್ಲಿ ಬಡ, ಗ್ರಾಮೀಣ ಮಹಿಳೆಯರಿಗೆ ಅವಕಾಶ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದ ದಿಕ್ಸೂಚಿ ಭಾಷಣ ಮಾಡಿದ ಕೊಲ್ಹಾಪುರ ಶಿವಾಜಿ ವಿಶ್ವವಿದ್ಯಾಲಯದ ಪ್ರೊ| ಭಾರತಿ ಪಾಟೀಲ ಪ್ರಸ್ತುತ 21ನೇ ಶತಮಾನದಲ್ಲಿ ಮಹಿಳೆಯು ಎಲ್ಲಾ ಕ್ಷೇತ್ರಗಳಲ್ಲೂ ಭಾಗವಹಿಸಿ ರಾಜಕೀಯ ಹಾಗೂ ಆರ್ಥಿಕ ಸಬಲತೆ ಸಾಧಿಸುತ್ತಿದ್ದಾಳೆ. ಆದ್ದರಿಂದ ಮಹಿಳಾ ಪ್ರಾತಿನಿಧ್ಯವಿಲ್ಲದ ಕ್ಷೇತ್ರವನ್ನು ಊಹಿಸಲು ಸಾಧ್ಯವಿಲ್ಲ ಎಂದರು.

ಬೆಂಗಳೂರು ವಿವಿಯ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ| ವೀಣಾದೇವಿ, ತುಮಕೂರ ವಿವಿಯ ಪ್ರೊ| ಬಸವರಾಜು ಜಿ, ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ| ರಾಮಚಂದ್ರಪ್ಪ ಜಿ.ಟಿ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಕಲ್ಯಾಣ ವಿಭಾಗದ ಅಧಿಕಾರಿ ಪ್ರೊ| ಕೆ. ಬಿ. ಚಂದ್ರಿಕಾ, ಡಾ| ಪ್ರಕಾಶ ಕಟ್ಟಿಮನಿ, ಡಾ| ಹನುಮಂತಪ್ಪ. ಡಿ.ಜಿ. ಉಪಸ್ಥಿತರಿದ್ದರು. ಪ್ರೊ| ಕಮಲಾಕ್ಷಿ ತಡಸದ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಚಾರ ಸಂಕಿರಣದ ಸಂಘಟನಾ ಕಾರ್ಯದರ್ಶಿ ಡಾ| ರಮೇಶ ಸ್ವಾಗತಿಸಿದರು. ರವಿಕುಮಾರ ಬಿ.ಕೆ. ವಂದಿಸಿದರು. ವಿನಯಾ ಮತ್ತು ನಿಂಗಪ್ಪಾ ನಿರೂಪಿಸಿದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.