ಮಾಧ್ಯಮದಲ್ಲಿ ಮಾತ್ರ ನಾಯಕತ್ವ ಬದಲಾವಣೆ ಸುದ್ದಿ: ನಿರಾಣಿ
Team Udayavani, Jun 10, 2021, 9:23 PM IST
ಬೆಳಗಾವಿ: ಮಾಧ್ಯಮಗಳಲ್ಲಿ ಮಾತ್ರ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುದ್ದಿ ಬರುತ್ತಿದೆ. ರಾಷ್ಟೀಯ ನಾಯಕರ ಮುಂದೆ ನಾಯಕತ್ವ ಬದಲಾವಣೆ ವಿಷಯ ಇಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ ನಿರಾಣಿ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲವೇ ಇಲ್ಲ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ನಾಯಕರಾದ ಪ್ರಹ್ಲಾದ ಜೋಶಿ, ಸಿಟಿ ರವಿ ಅವರೂ ನಾಯಕತ್ವ ಬದಲಾವಣೆ ಇಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ. ಎಂದು ಹೇಳಿದರು.
ಮುರಗೇಶ ನಿರಾಣಿ ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮ ರಾಷ್ಟೀಯ ನಾಯಕರು ಅನುಭವಿಗಳಿದ್ದಾರೆ. ಈ ಬಗ್ಗೆ ಅವರು ನಿರ್ಧರಿಸುತ್ತಾರೆ. ನನಗೆ ಮುಖ್ಯಮಂತ್ರಿ ಹುದ್ದೆ ನೀಡಿದಾಗಲೇ ಅದರ ಬಗ್ಗೆ ಮಾತನಾಡುತ್ತೇನೆ. ನೂರಕ್ಕೆ ನೂರರಷ್ಟು ಯಡಿಯೂರಪ್ಪನವರೇ ಇನ್ನೂ ಎರಡು ವರ್ಷ ಮುಖ್ಯಮಂತ್ರಿ ಆಗಿ ಮುಂದುವರಯಲಿದ್ದಾರೆ. ಮುಂದಿನ ಚುನಾವಣೆಯೂ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆಯಲಿದೆ ಎಂದರು.
ಜೂ. 15ಕ್ಕೆ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂಬ ಯತ್ನಾಳ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಆ ವಿಷಯ ನನಗೆ ಗೊತ್ತಿಲ್ಲ, ಅವರನ್ನೇ ಕೇಳಿ ಎಂದು ಸಚಿವ ನಿರಾಣಿ ಹೇಳಿದರು.
ಇದನ್ನೂ ಓದಿ:ತಾಯಿ-ಮಕ್ಕಳ ಆಸ್ಪತ್ರೆ ಹಡಿಲು ಬೀಳದಂತೆ ಕ್ರಮವಹಿಸಲಿ : ಪ್ರಮೋದ್ ಆಗ್ರಹ
ಬಾಗಲಕೋಟೆಯ 2054 ಮಕ್ಕಳಿಗೆ ಪಾಸಿಟಿವ್: ನಿರಾಣಿ
ಬಾಗಲಕೋಟೆ ಜಿಲ್ಲೆಯ 18 ವರ್ಷದೊಳಗಿನ 2054 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆದರೆ ನಮ್ಮ ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಶುಣ್ಯ ಇದೆ. ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿರುವ ಕಾರಣ ಸಾವು ಸಂಭವಿಸಿಲ್ಲ. ಸೋಂಕಿಗೆ ತುತ್ತಾದ ಎಲ್ಲ ಮಕ್ಕಳೂ ಚೇತರಿಸಿಕೊಂಡಿದ್ದಾರೆ. ಗ್ರಾಮೀಣ ಭಾಗದಲ್ಲಿ ವ್ಯಾಕ್ಸಿನೇಷನ್ ಹೆಚ್ಚಿಸಲು ಜಾಗೃತಿ ಮೂಡಿಸಲಾಗುತ್ತಿದೆ. ವೈದ್ಯರ ನಡೆ ಹಳ್ಳಿ ಕಡೆ ಅಭಿಯಾನವನ್ನು ಸರ್ಕಾರ ಆರಂಭಿಸಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಮುರಗೇಶ ನಿರಾಣಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.