Belagavi: ಬಿಲ್ ಪಾಸು ಮಾಡುತ್ತಿಲ್ಲ ಎಂದು ಆತ್ಮಹತ್ಯೆಗೆ ಯತ್ನಿಸಿದ ಗುತ್ತಿಗೆದಾರ
ಲೋಕೋಪಯೋಗಿ ಇಲಾಖೆ ಕಚೇರಿ ಎದುರೇ ಘಟನೆ...!
Team Udayavani, Oct 11, 2023, 5:01 PM IST
ಬೆಳಗಾವಿ: ರಸ್ತೆ ಕಾಮಗಾರಿ ಮಾಡಿದ್ದರೂ ಅಧಿಕಾರಿಗಳು ಬಿಲ್ ಪಾಸು ಮಾಡುತ್ತಿಲ್ಲ ಎಂದು ಆರೋಪಿಸಿ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಗೆ ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ಬುಧವಾರ ನಡೆದಿದೆ.
ಮನನ ನಾಗಪ್ಪ ಭಂಗಿ ಎಂಬ ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನಿಸಿದವರು. ತಾವು ಮಾಡಿರುವ ರಸ್ತೆ ಕಾಮಗಾರಿಯ ಬಿಲ್ ಪಾಸು ಮಾಡುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆರೋಪ ಮಾಡಿದ ನಾಗಪ್ಪ ಅವರು ಬುಧವಾರ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜನಿಯರ್ ಎಸ್ ಎಸ್ ಸೊಬರದ ಅವರ ಕಚೇರಿ ಎದುರು ವಿಷದ ಬಾಟಲಿ ಹಿಡಿದು ಆತ್ಮಹತ್ಯೆಗೆ ಪ್ರಯತ್ನ ಮಾಡಿದರು.ತತ್ ಕ್ಷಣವೇ ಸ್ಥಳದಲ್ಲಿ ಇದ್ದ ಜನರು ನಾಗಪ್ಪ ಅವರಿಂದ ಬಾಟಲಿ ಕಸಿದಿಕೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಿದರು.
ನಾಗಪ್ಪ ಈಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದ ವರ್ಷ ನಾಗಪ್ಪ ಭಂಗಿ ಅವರು ಹಲಗಾ ಮತ್ತು ತಿಗಡಿ ಗ್ರಾಮದವರೆಗಿನ ರಸ್ತೆ ನಿರ್ಮಾಣ ಗುತ್ತಿಗೆ ಪಡೆದಿದ್ದು 6.50 ಲಕ್ಷ ರೂ ಕಾಮಗಾರಿ ಪೂರ್ಣಗೊಳಿಸಿದ್ದರು. ಆದರೆ ಕಾಮಗಾರಿಯ ಬಿಲ್ ಪಾಸು ಮಾಡದೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ. ಇದರಿಂದ ಬಹಳ ತೊಂದರೆಯಾಗಿದೆ ಎಂದು ನಾಗಪ್ಪ ದೂರಿದ್ದರು.
ಸಚಿವ ಸತೀಶ್ ಜಾರಕಿಹೊಳಿ ಅವರ ತವರು ಜಿಲ್ಲೆ(ಜಿಲ್ಲಾ ಉಸ್ತುವಾರಿ) ಹಾಗೂ ಲೋಕೋಪಯೋಗಿ ಇಲಾಖೆಯ ಮುಂದೆಯೇ ಈ ಘಟನೆ ನಡೆದಿರುವುದು ಅಚ್ಚರಿ ಮೂಡಿಸಿದ್ದು, ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ಗುರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.