![1-sidda](https://www.udayavani.com/wp-content/uploads/2025/02/1-sidda-1-415x226.jpg)
![1-sidda](https://www.udayavani.com/wp-content/uploads/2025/02/1-sidda-1-415x226.jpg)
Team Udayavani, Jan 29, 2025, 4:45 PM IST
ಬೆಳಗಾವಿ: ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಇಂದು ಮುಂಜಾನೆ ನಡೆದ ಕಾಲ್ತುಳಿತದಲ್ಲಿ ಬೆಳಗಾವಿಯ ತಾಯಿ ಮಗಳು ಸೇರಿ ಮೂವರು ದುರ್ಮರಣ ಹೊಂದಿದ್ದಾರೆ.
ಮೃತರನ್ನು ಬೆಳಗಾವಿಯ ವಡಗಾವಿ ನಿವಾಸಿ ಜ್ಯೋತಿ ಹತ್ತರವಾಠ (50), ಮೇಘಾ ಹತ್ತರವಾಠ ಹಾಗೂ ಬಿಜೆಪಿ ಮುಖಂಡ ಅರುಣ ಕೋಪರ್ಡೆ ಎಂದು ಗುರುತಿಸಲಾಗಿದೆ.
ಈ ಕುರಿತು ಜ್ಯೋತಿ ಅವರ ಸಹೋದರ ಗುರುರಾಜ್ ಹುದ್ಧಾರ ಹಾಗೂ ಅರುಣ ಕೋಪರ್ಡೆ ಅವರ ಪತ್ನಿ ಕಾಂಚನ ಕೋಪರ್ಡೆ ಮಾಹಿತಿ ನೀಡಿದ್ದಾರೆ.
ಮೂರು ದಿನಗಳ ಹಿಂದೆ ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ 13 ಜನರ ತಂಡದಲ್ಲಿ ಜ್ಯೋತಿ ಹಾಗೂ ಮೇಘಾ ಹತ್ತರವಾಠ, ಅರುಣ ಕೋಪರ್ಡೆ ಪ್ರಯಾಗ್ ರಾಜ್ ಗೆ ಪ್ರಯಾಣ ಬೆಳೆಸಿದ್ದರು ಆದರೆ ಇಂದು ಬೆಳಿಗ್ಗೆ ಜ್ಯೋತಿ ಹಾಗೂ ಮೇಘಾ ಕುಟುಂಬದ ಸದಸ್ಯರಿಗೆ ಫೋನ್ ಸಂಪರ್ಕಕ್ಕೆ ಸಿಕ್ಕಿರಲಿಲ್ಲ, ಫೋನ್ ರಿಂಗ್ ಆದರೂ ರಿಸೀವ್ ಮಾಡುತ್ತಿರಲಿಲ್ಲ ಇದರಿಂದ ಕುಟುಂಬ ಆತಂಕಕ್ಕೆ ಒಳಗಾಗಿತ್ತು ಇದಾದ ಬಳಿಕ ಅವರು ಕಾಲ್ತುಳಿತಕ್ಕೆ ಸಿಲುಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಘಟನೆಯಲ್ಲಿ ಶೆಟ್ಟಿ ಗಲ್ಲಿ ದಂಪತಿ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಕುಟುಂಬ ಸದಸ್ಯರು ಹೇಳಿದ್ದು ಮಾಹಿತಿ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Video: ಕುಂಭಮೇಳದಲ್ಲಿ ಆಶೀರ್ವಾದ ಪಡೆಯಲು ಹೋದ ವ್ಯಕ್ತಿಗೆ ಸಾಧು ಆಶೀರ್ವದಿಸಿದ್ದು ಹೀಗೆ
Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ
11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ
Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ
Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್ ಸಿಂಗ್
Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ
Anandapura:ಮನೆಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ; ಶಾಸಕ ಗೋಪಾಲಕೃಷ್ಣ ಬೇಳೂರು ಸ್ಥಳಕ್ಕೆ ಭೇಟಿ
Dubai Garden Glow: ಅದ್ಭುತ ಮ್ಯಾಜಿಕ್ ಪಾರ್ಕ್ “ಗ್ಲೋ ಗಾರ್ಡನ್ ದುಬಾೖ’
ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು
Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು
You seem to have an Ad Blocker on.
To continue reading, please turn it off or whitelist Udayavani.