ಬೆಳಗಾವಿ ಜಿಲ್ಲೆಯಲ್ಲಿ ನಿಲ್ಲದ ಮಳೆ : ಸವದತ್ತಿ; 140 ಕ್ಕೂ ಹೆಚ್ಚು ಮನೆಗೆ ಹಾನಿ
Team Udayavani, Oct 15, 2020, 2:53 PM IST
ಸವದತ್ತಿ: ನಿರಂತರ ಸುರಿಯುತ್ತಿರುವ ಮಳೆಯಿಂದ ಆಣೆ ಅಗಸಿ, ಕುಂಬಾರ ಓಣಿ, ಬಸ್ ನಿಲ್ದಾಣ, ಬಜಾರ ಮಾರ್ಗ, ಬೆಣ್ಣಿಕಟ್ಟಿ
ಕೆಲ ಮನೆಗಳಲ್ಲಿ ನೀರು ತುಂಬಿ ಹಾಗೂ ಇತರೆ ಪ್ರದೇಶಗಳಲ್ಲಿ ನೀರು ನಿಂತು ಜನರು ತೊಂದರೆ ಅನುಭವಿಸುವಂತಾಯಿತು.
ಬುಧವಾರ ಸಂತೆ ದಿನದಂದು ಸಹಿತ ಮುಂಜಾನೆಯಿಂದ ಸುರಿದ ಮಳೆಯಿಂದ ವ್ಯಾಪಾರ ವಹಿವಾಟವು ಅಸ್ತವ್ಯಸ್ತಗೊಂಡಿತ್ತು.
ಮಳೆಯಿಂದಾಗಿ ಸ್ಥಳೀಯ ಪುರಸಭೆ ವ್ಯಾಪ್ತಿಯಲ್ಲಿ ಆಗಸ್ಟ್‌ದಿಂದ ಇಲ್ಲಿಯವರೆಗೆ ಒಟ್ಟು 190 ಮನೆಗಳು ಬಿದ್ದ ಬಗ್ಗೆ ಅರ್ಜಿ ಸಲ್ಲಿಕೆಯಾಗಿವೆ. ನಿನ್ನೆ ಸುರಿದ ಮಳೆಗೆ ಪಟ್ಟಣದಲ್ಲಿ 30ಕ್ಕೂ ಹೆಚ್ಚು ಮನೆಗಳು ಬಿದ್ದಿವೆ ಎಂದು ಸಮೀಕ್ಷೆಯಲ್ಲಿ ಅಂದಾಜಿಸಲಾಗಿದೆ. ಮಳೆಯಿಂದ ಮನೆ ಕಳೆದುಕೊಂಡ ಜನ ಬಾಡಿಗೆ ಮನೆ ಹುಡುಕಾಡುತ್ತಿದ್ದಾರೆ. ತಾಲೂಕಿನಾದ್ಯಂತ 140
ಕ್ಕೂ ಹೆಚ್ಚು ಮನೆಗಳು ಬಿದ್ದಿವೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಧರಣಿ ನಿರತ ಉಪನ್ಯಾಸಕರಿಗೆ ಕಾಲೇಜು ಆರಂಭವಾದ ತಕ್ಷಣ ನೇಮಕಾತಿ ಆದೇಶ: ಅಶ್ವತ್ಥನಾರಾಯಣ
ತಾಲೂಕಿನ ಉಗರಗೋಳ ಗ್ರಾಮದ ಹರ್ಲಾಪುರ ರಸ್ತೆಯಲ್ಲಿರುವ ಟ್ರಾನ್ಸ್‌ಫಾರಮ್ ಕಂಬವು ಗಾಳಿ-ಮಳೆಗೆ ರಸ್ತೆಯಡಿಗೆ ಬಾಗಿದ್ದು ಓಡಾಡುವ ಜನತೆಯಲ್ಲಿ ಆತಂಕ ಸೃಷ್ಟಿಸಿದೆ. ತಾಲೂಕಿನಾದ್ಯಂತ ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆಗಳಿಂದ ಜಂಟಿ ಬೆಳೆ ಹಾನಿ ಸಮೀಕ್ಷೆ ನಡೆಸಲಾಗಿದೆ. ಹೆಸರು, ಹತ್ತಿ, ಗೋವಿನಜೋಳ, ಸಜ್ಜೆ, ಉದ್ದು, ಸೊಯಾ, ಸೂರ್ಯಕಾಂತಿ ಸೇರಿದಂತೆ ಕಬ್ಬು ಬೆಳೆ ಸಹಿತ ಒಟ್ಟು 72406 ಹೆಕ್ಟೇರ್ ಭೂಮಿ ಬಿತ್ತನೆಯಾಗಿದೆ. ಅತಿವೃಷ್ಟಿಯಿಂದ ಇಲ್ಲಿಯವರೆಗೆ 45 ಸಾವಿರ ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಬೆಳೆ ಹಾನಿಯಾಗಿದೆ. ಹೆಸರು, ಹತ್ತಿ, ಗೋವಿನಜೋಳ ಅತೀ ಹೆಚ್ಚು ಪ್ರಮಾಣದಲ್ಲಿ ಹಾನಿಯಾಗಿದೆ. ಜೂನ್ 1 ರಿಂದ ಇಲ್ಲಿಯವರೆಗೆ 495 ಮಿಮೀ ಮಳೆ ಸುರಿಯಬೇಕಿತ್ತು. ಶೇ. 38 ಮಳೆ ಹೆಚ್ಚಾಗಿ 682 ಮಿಮೀ ಮಳೆ ಸುರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.