Belagavi: ರಾಯಲ್ ಚಾಲೆಂಜರ್ಸ್ ತಂಡ ಕ್ರಿಕೆಟ್ ಚಾಂಪಿಯನ್
Team Udayavani, Nov 7, 2023, 5:43 PM IST
ಮೂಡಲಗಿ: ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ್ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಸಹಯೋಗದಲ್ಲಿ ಸ್ಥಳೀಯ ಎಸ್‌ಎಸ್‌ಆರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ 5 ದಿನಗಳ ಮೂಡಲಗಿ ಪ್ರಿಮಿಯರ್ ಲೀಗ್ -2023 ಕ್ರಿಕೆಟ್ ಟೂರ್ನಿಯಲ್ಲಿ ಪಟ್ಟಣದ ರಾಯಲ್ ಚಾಲೆಜರ್ ತಂಡವು ಪ್ರಥಮ ಸ್ಥಾನ ಪಡೆದು ರೂ. 50,001 ನಗದು ಬಹುಮಾನ ಮತ್ತು ಪಾರಿತೋಷಕವನ್ನು ತನ್ನದಾಗಿಸಿಕೊಂಡಿತು.
ದ್ವಿತೀಯ ಸ್ಥಾನವನ್ನು ಮೂಡಲಗಿಯ ಬುಲ್ಡೋಜರ್ ತಂಡ ಪಡೆದು ರೂ. 30,001 ಮತ್ತು ಪಾರಿತೋಷಕ ಪಡೆದುಕೊಂಡರೆ,
ಮೂಡಲಗಿ ಸ್ಟ್ರೈಕರ್ಸ ತಂಡವು ತƒತೀಯ ಸ್ಥಾನವನ್ನು ಪಡೆದುಕೊಂಡು ರೂ. 20,001 ಮತ್ತು ಪಾರಿತೋಷಕ ಪಡೆದುಕೊಂಡಿತು. ಪಂದ್ಯ ಪುರುಷೋತ್ತಮ ಮತ್ತು ಅತಿ ಹೆಚ್ಚು ವಿಕೆಟ್ ಪಡೆದ ಹಣಮಂತ ಗಣಿ ಒಂದು ಬೆ„ಸಿಕಲ್ ಮತ್ತು ಎಲ್‌ಇಡಿ ಟಿವಿ ಪಡೆದುಕೊಂಡರು. ಬೆಸ್ಟ್ ಬ್ಯಾಟ್ಸ್‌ಮನ್ ಪ್ರಶಸ್ತಿಯನ್ನು ಪಡೆದ ಜುನೇದ್ ಅವರಿಗೆ ಎಲ್ ಇಡಿ ಟಿವಿ ಬಹುಮಾನವಾಗಿ ನೀಡಲಾಯಿತು.
ಅತಿಥಿಗಳಾಗಿ ಆಗಮಿಸಿದ್ದ ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಬಸವೇಶ್ವರ ಅರ್ಬನ್
ಸಹಕಾರಿ ಉಪಾಧ್ಯಕ್ಷ ಗಿರೀಶ ಢವಳೇಶ್ವರ, ವಿರೇಶ ಢವಳೇಶ್ವರ, ಪುರಸಭೆ ಸದಸ್ಯ ರವೀಂದ್ರ ಸಣ್ಣಕ್ಕಿ, ಮೂಡಲಗಿ ಶಿಕ್ಷಣ ಸಂಸ್ಥೆ ನಿರ್ದೇಶಕ ಸಂದೀಪ ಸೋನವಾಲಕರ, ಎನ್.ಟಿ. ಪಿರೋಜಿ, ಪ್ರೊ.ಎಸ್.ಬಿ. ಖೋತ, ಪ್ರಶಾಂತ ನಿಡಗುಂದಿ, ಸಂಜಯ ಮೋಕಾಶಿ, ಹಣಮಂತ ಬಸಳಿಗುಂದಿ, ಕೃಷ್ಣಾ ಕೆಂಪಸತ್ತಿ, ಸಂಜಯ ಮೋಕಾಶಿ, ಶಿವಾನಂದ ಗಾಡವಿ, ಮಲ್ಲು ಕುರಬಗಟ್ಟಿ, ರವಿ ಪತ್ತಾರ, ಮೇತ್ರಿ ಬಹುಮಾನ ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.