Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್
ಲಕ್ಷ್ಮೀ ಹೆಬ್ಬಾಳಕರ್ ಪಾತ್ರವಿಲ್ಲವೆಂದು ಅವರೇ ಹೇಳಿದ್ದಾರೆ...
Team Udayavani, Nov 6, 2024, 3:22 PM IST
ಬೆಳಗಾವಿ: ಬೆಳಗಾವಿಯ ತಹಸೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವಣ್ಣವರ ಸಾವಿನ ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ಆಗಲಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ನಗರದಲ್ಲಿ ಬುಧವಾರ(ನ6) ಮಾಧ್ಯಮಗಳೊಂದಿಗೆ ಮಾತನಾಡಿ, ಅವರು, ರುದ್ರಣ್ಣ ಯಡವಣ್ಣವರ ಸಾವಿನ ವಿಷಯ ಅತ್ಯಂತ ದುಃಖ ತರುವಂತಹದು. ಇದೊಂದು ದುರದೃಷ್ಟಕರ ಘಟನೆ. ಇಂತಹ ಘಟನೆಗಳು ನಡೆಯಬಾರದು. ರುದ್ರಣ್ಣವರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಹೇಳಿದರು.
ರುದ್ರಣ್ಣ ಸಾವಿನ ಘಟನೆ ಬಗ್ಗೆ ಮಾಧ್ಯಮಗಳಿಂದ ನಾನು ತಿಳಿದಿದ್ದೇನೆ. ಈ ಬಗ್ಗೆ ನನಗೂ ಹೆಚ್ಚೇನು ಮಾಹಿತಿ ಇಲ್ಲ. ಈ ಸಾವಿನ ಹಿಂದೆ ಲಕ್ಷ್ಮೀ ಹೆಬ್ಬಾಳಕರ್ ಪಾತ್ರವಿಲ್ಲವೆಂದು ಅವರೇ ಹೇಳಿದ್ದಾರೆ. ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಏನೂ ಗೊತ್ತಿಲ್ಲ ಎಂದಿರುವ ವಿಡಿಯೋವನ್ನು ಮಾಧ್ಯಮಗಳ ಮೂಲಕ ಗಮನಿಸಿದ್ದೇನೆ. ಈ ಬಗ್ಗೆ ಸತ್ಯಾಸತ್ಯತೆ ಜನರಿಗೆ ತಿಳಿಯಬೇಕು. ಆ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದರು.
ರುದ್ರಣ್ಣವರ ಸಾವಿನ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಪ್ರತಿಭಟನೆ ಮಾಡುತ್ತಿದ್ದಾರೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ಪ್ರತಿಭಟನೆ ಮಾಡಬೇಡಿ ಎಂದು ಹೇಳಲು ಆಗುವುದಿಲ್ಲ. ಆದರೆ ಈ ವಿಷಯವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಬಾರದು. ಸ್ವತಃ ರುದ್ರಣ್ಣನವರೇ ಹೇಳಿದ್ದಾರೆ ಈ ಬಗ್ಗೆ ಮೇಡಂ ಅವರ ಪಾತ್ರವಿಲ್ಲವೆಂದು. ಆದರೂ ವ್ಯರ್ಥ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದರು
ಈ ಹಿಂದಿನ ಈಶ್ವರಪ್ಪನವರ ಪ್ರಕರಣಕ್ಕೂ ಮತ್ತು ಈ ಪ್ರಕರಣಕ್ಕೂ ಬಹಳ ವ್ಯತ್ಯಾಸವಿದೆ. ಈ ಸಾವಿನ ಪ್ರಕರಣ ಆದಷ್ಟು ಬೇಗ ತನಿಖೆಯಾಗಲಿ. ನಿಷ್ಪಕ್ಷಪಾತವಾದ ತನಿಖೆ ಆಗಬೇಕೆಂದು ಪೊಲೀಸ್ ತನಿಖಾಧಿಕಾರಿಗಳಿಗೂ ಮನವಿ ಮಾಡುತ್ತೇನೆ. ಸಾವಿಗೀಡಾದ ನೌಕರನ ಕುಟುಂಬಕ್ಕೆ ನ್ಯಾಯ ದೊರಕಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.