Belagavi: ಎಸ್ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Team Udayavani, Nov 14, 2024, 6:17 PM IST
ಬೆಳಗಾವಿ: ತಹಶೀಲ್ದಾರ್ ಕಚೇರಿಯಲ್ಲಿ ಎಸ್ಡಿಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರೂ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆಪ್ತ ಸಹಾಯಕ ಸೋಮು ದೊಡವಾಡಿ, ತಹಶೀಲ್ದಾರ್ ಬಸವರಾಜ ನಾಗರಾಳ, ತಹಶೀಲ್ದಾರ್ ಕಚೇರಿಯ ಎಫ್ಡಿಎ ಅಶೋಕ ಕಬ್ಬಲಿಗೇರಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಬೆಳಗಾವಿ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ತಹಶೀಲ್ದಾರ್ ಬಸವರಾಜ ನಾಗರಾಳ ಪರ ನ್ಯಾಯವಾದಿ ರವಿರಾಜ ಪಾಟೀಲ ವಕಾಲತ್ತು ವಹಿಸಿದ್ದರು. ಎಫ್ ಡಿಎ ಅಶೋಕ ಕಬ್ಬಲಿಗೇರ ಪರ ವಕೀಲ ಆರ್.ಜಿ. ಪಾಟೀಲ, ಸೋಮು ದೊಡವಾಡಿ ಪರ ವಕೀಲೆ ಪದ್ಮಾ ವಕಾಲತ್ತು ವಹಿಸಿದ್ದರು.
ನ.5ರಂದು ತಹಶಿಲ್ದಾರ್ ಕಚೇರಿಯ ಕೊಠಡಿಯಲ್ಲಿಯೇ ನೇಣು ಬಿಗಿದುಕೊಂಡು ಎಸ್ಡಿಎ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಯುವ ಮುನ್ನ ಮೂವರ ಹೆಸರು ವಾಟ್ಸಪ್ ಮೂಲಕ ಸಂದೇಶ ಕಳುಹಿಸಿದ್ದರು. ಈ ಬಗ್ಗೆ ಮೂವರ ವಿರುದ್ಧ ಖಡೇಬಜಾರ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.