Belagavi session ಈ ಬಾರಿಯೂ ಬೆಳಗಾವಿ ಅಧಿವೇಶನ ಪ್ರತಿಭಟನೆಗಳಿಗೆ ಸೀಮಿತವೇ?

ಪ್ರತಿಭಟನೆ ತಗ್ಗಿಸುವ ಕಾಳಜಿ ಮರೆತ ಸರಕಾರ ; ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದರೂ ಸಿಕ್ಕಿಲ್ಲ ಸೂಕ್ತ ಸ್ಪಂದನೆ 

Team Udayavani, Nov 27, 2023, 6:30 AM IST

Belagavi session ಈ ಬಾರಿಯೂ ಬೆಳಗಾವಿ ಅಧಿವೇಶನ ಪ್ರತಿಭಟನೆಗಳಿಗೆ ಸೀಮಿತವೇ?

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ನಡೆಯುವ ಅಧಿವೇಶನ ಪ್ರತಿಭಟನೆಗಳಿಗೆ ಸೀಮಿತ ಎಂಬ ಕಳಂಕವನ್ನು ತಪ್ಪಿಸಲು ಈ ಬಾರಿ ಹೊಸ ಪ್ರಯತ್ನಗಳು ಆರಂಭವಾಗಿವೆ.

ಸ್ವತಃ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರೇ ಸಿಎಂ ಸಿದ್ದರಾಮಯ್ಯ, ಕೃಷಿ ಸಚಿವ ಎನ್‌. ಚೆಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣ ಭೈರೇಗೌಡ ಹಾಗೂ ಶಿಕ್ಷಣ ಸಚಿವ ಎಸ್‌. ಮಧು ಬಂಗಾರಪ್ಪ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದು, ಅಧಿವೇಶನದ ಅತ್ಯಮೂಲ್ಯ ಸಮಯ ಕೇವಲ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳಿಗೆ ವ್ಯರ್ಥವಾಗುತ್ತಿದೆ. ಆದ್ದರಿಂದ ಅಧಿವೇಶನ ಆರಂಭಗೊಳ್ಳುವ ಮುನ್ನವೇ ಸಂಬಂಧಪಟ್ಟ ಸಂಘಟನೆಗಳ ಪ್ರಮುಖರ ಸಭೆ ಕರೆದು ಅವರ ಬೇಡಿಕೆ ಕುರಿತು ಚರ್ಚಿಸಿ ಅವುಗಳ ಪರಿಹಾರಕ್ಕೆ ಮುಂದಾಗಬೇಕು. ಆ ಮೂಲಕ ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಧರಣಿ ಸತ್ಯಾಗ್ರಹ ನಡೆಯದಂತೆ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದ್ದಾರೆ.

ಪ್ರತಿಭಟನೆಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ವಿಧಾನ ಪರಿಷತ್‌ ಸಭಾಪತಿ ಮತ್ತು ವಿಧಾನಸಭಾಧ್ಯಕ್ಷರು ತೋರಿಸಿರುವ ಕಳಕಳಿ ಮತ್ತು ಪ್ರಯತ್ನ ಪ್ರಮುಖ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳಲ್ಲಿ ಕಾಣುತ್ತಿಲ್ಲ. ಅಧಿವೇಶನದ ಸಮಯ ಸಮೀಪಿಸುತ್ತಿದ್ದರೂ ಇದುವರೆಗೆ ಕಂದಾಯ, ಕೃಷಿ, ಶಿಕ್ಷಣ ಸಚಿವರು ವಿವಿಧ ಸಂಘಟನೆಗಳ ಪ್ರಮುಖರ ಜತೆ ಸಭೆ ನಡೆಸಿಲ್ಲ. ಹಾಗೆ ನೋಡಿದರೆ ಪ್ರತಿಭಟನೆಗಳು ಸುವರ್ಣ ವಿಧಾನಸೌಧದಲ್ಲಿ ನಡೆಯುವ ಅಧಿವೇಶನಗಳಿಂದ ಆರಂಭವಾಗಿದ್ದಲ್ಲ. 2006ರಲ್ಲಿ ಮೊದಲ ಅಧಿವೇಶನ ನಡೆದಾಗಲೇ ಪ್ರತಿಭಟನೆಗಳ ಬಿಸಿ ತಟ್ಟಿತ್ತು. ಅಂದಿನಿಂದ ಇವತ್ತಿನವರೆಗೆ ಬೆಳಗಾವಿ ಅಧಿವೇಶನ ಎಂದರೆ ಅದು ಪ್ರತಿಭಟನೆಗಳಿಗೆ ಮಾತ್ರ ಸೀಮಿತ ಎಂಬ ಕಳಂಕ ಅಂಟಿಕೊಂಡಿದೆ.

ವರ್ಷ ಕಳೆದಂತೆ ಪ್ರತಿಭಟನೆಗಳ ಸಂಖ್ಯೆ ಹೆಚ್ಚುತ್ತ ಹೋಗುತ್ತಿದೆಯೇ ಹೊರತು ಕಡಿಮೆ ಯಾಗುತ್ತಿಲ್ಲ. 2006ರಲ್ಲಿ 40ಕ್ಕೂ ಹೆಚ್ಚು ಸಂಘಟನೆಗಳು ಪ್ರತಿಭಟನೆ ಮಾಡಿದ್ದು, ಕಳೆದ ಅಧಿವೇಶನದ ಸಂದರ್ಭದಲ್ಲಿ 100ಕ್ಕೂ ಅಧಿಕ ಸಂಘಟನೆಗಳಿಂದ ಪ್ರತಿಭಟನೆ ನಡೆದಿತ್ತು.

ಉತ್ತರ ಕರ್ನಾಟಕದಲ್ಲಿ ಸಮಸ್ಯೆಗಳು ಬೆಟ್ಟದಷ್ಟಿವೆ. ಈ ಸಮಸ್ಯೆಗಳ ಚರ್ಚೆಗೆ ಒಂದೆರಡು ದಿನಗಳು ಸಾಕಾಗುವುದಿಲ್ಲ. ಇದು ಸರಕಾರ ಹಾಗೂ ವಿಪಕ್ಷಗಳಿಗೂ ಗೊತ್ತಿದೆ. ಆದರೂ ನಿರೀಕ್ಷಿಸದಂತೆ ಚರ್ಚೆಗಳು ನಡೆಯುತ್ತಲೇ ಇಲ್ಲ. ಇನ್ನೊಂದು ಕಡೆ ಹಲವಾರು ಪ್ರತಿಭಟನೆಗಳ ನಡುವೆ ಅಧಿವೇಶನವೇ ಮುಗಿದು ಹೋಗುತ್ತದೆ. ಪ್ರತಿಭಟನೆಯ ಮುಂದೆ ಅಧಿವೇಶನದ ಕಲಾಪ ಗೌಣವಾಗಿ ಕಾಣುತ್ತದೆ. ಅಧಿವೇಶನಕ್ಕೆ ಬರುವ ಶಾಸಕರು ಕಲಾಪದಲ್ಲಿ ಭಾಗವಹಿಸದೆ ಪ್ರತಿಭಟನೆಗಳಲ್ಲಿ ಪಾಲ್ಗೊಳ್ಳುತ್ತಾರೆ. ಹೀಗಾಗಿ ಬೆಳಗಾವಿ ಅಧಿವೇಶನ ಪ್ರತಿಭಟನೆಗಳಿಗೆ ಸೀಮಿತವೇ ಎಂಬ ಅನುಮಾನ ಕಾಡುತ್ತಿದೆ.

ಮುಗಿಯದ ರೈತರ ಗೋಳು
ಬೆಳಗಾವಿಯಲ್ಲಿ ಇದುವರೆಗೆ ನಡೆದಿರುವ ಎಲ್ಲ ಅಧಿವೇಶನಗಳಲ್ಲಿ ರೈತರ ಪ್ರತಿಭಟನೆಗಳೇ ಹೆಚ್ಚು ಗಮನ ಸೆಳೆದಿವೆ. ಸರಕಾರಕ್ಕೆ ಸ್ವಲ್ಪ ಬಿಸಿ ಮುಟ್ಟಿಸಿವೆ. ಆದರೆ ಸಮಸ್ಯೆಗಳು ಮಾತ್ರ ಎಂದಿನಂತೆಯೇ ಮುಂದುವರಿದಿವೆ. 2006 ರಲ್ಲಿ ಆಗಿನ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಮೊದಲ ಅಧಿವೇಶನ ನಡೆದಾಗ ರೈತರು ಬೀದಿಗಿಳಿದಿದ್ದರು. ಕಬ್ಬಿನ ದರ ನಿಗದಿ, ಬಾಕಿ ಹಣ ಪಾವತಿ, ಎಲ್ಲ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ಮತ್ತು ಸಾಲಮನ್ನಾ ಬೇಡಿಕೆಗಳ ಈಡೇರಿಕೆಗೆ ತೀವ್ರ ಸ್ವರೂಪದ ಹೋರಾಟ ಮಾಡಿದರು. ಆದರೆ ಬೇಡಿಕೆ ಈಡೇರಲಿಲ್ಲ. ಆಗ ಆರಂಭವಾದ ರೈತರ ಹೋರಾಟ ಇವತ್ತಿಗೂ ಮುಂದುವರಿದಿದೆ.

ಪ್ರತಿಭಟನೆಗಳಿಗೆ ಸರಕಾರದಿಂದಲೇ ವ್ಯವಸ್ಥೆ!
ಪ್ರತಿಭಟನೆ ನಡೆಸುವ ಸಂಘಟನೆಗಳಿಗೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿಕೊಡುವ ಸರಕಾರದ ನಡೆಯೂ ಚರ್ಚೆಗೆ ಕಾರಣವಾಗಿದೆ. ಇದಕ್ಕಾಗಿಯೇ ಜಿಲ್ಲಾಡಳಿತ ಕೋಟಿಗಟ್ಟಲೆ ರೂ. ಖರ್ಚು ಮಾಡುತ್ತಿದೆ. ಪ್ರತಿಭಟನೆ ಮಾಡುವವರಿಗೆ ಸುಸಜ್ಜಿತ ಹತ್ತರಿಂದ 12 ಬೃಹತ್‌ ಪೆಂಡಾಲ್‌ಗ‌ಳನ್ನು ನಿರ್ಮಿಸಿ ಕೊಡಲಾಗುತ್ತದೆ. ಇದಕ್ಕೆ ರೈತರ ಫಲವತ್ತಾದ ಜಮೀನುಗಳನ್ನು ಬಾಡಿಗೆ ಪಡೆದುಕೊಂಡರೆ ಭದ್ರತೆಗಾಗಿ 300ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಎಲ್ಲಕ್ಕಿಂತ ಅಚ್ಚರಿಯ ಸಂಗತಿ ಎಂದರೆ ಪ್ರತಿಭಟನಕಾರರನ್ನು ನಗರದ ಚನ್ನಮ್ಮ ವೃತ್ತದಿಂದ ಸುವರ್ಣ ವಿಧಾನಸೌಧದವರೆಗೆ ಸರಕಾರದ ಬಸ್‌ಗಳಲ್ಲಿ ಕರೆತಂದು ಪ್ರತಿಭಟನ ಸ್ಥಳಕ್ಕೆ ಬಿಡಲಾಗುತ್ತದೆ. ಇಷ್ಟೆಲ್ಲ ಸೌಲಭ್ಯಗಳಿರುವಾಗ ಪ್ರತಿಭಟನೆಗಳು ಹೇಗೆ ಕಡಿಮೆಯಾಗುತ್ತವೆ ಎಂಬುದು ಜನರ ಪ್ರಶ್ನೆ.

ಪ್ರತಿಭಟನೆ ಮಾಡುವವರಿಗೆ ಬೇಡ ಎನ್ನಲಾಗದು. ಪ್ರತಿಭಟನೆಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ. ಸಂಬಂಧಪಟ್ಟ ಪ್ರಮುಖ ಇಲಾಖೆಗಳ ಸಚಿವರು ಮೊದಲೇ ಅವರ ಅಹವಾಲುಗಳನ್ನು ಸ್ವೀಕರಿಸಿ ಮಾತುಕತೆ ಮಾಡಿದರೆ ಪ್ರತಿಭಟನೆಗಳು ಸ್ವಲ್ಪ ಕಡಿಮೆ ಆಗಬಹುದು.
– ಸತೀಶ ಜಾರಕಿಹೊಳಿ,
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ

ನಾವು ಡಿ.7ರಂದು ಪ್ರತಿಭಟನೆ ಮಾಡುವುದು ನಿಶ್ಚಿತ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲ ಕಡೆ ಸಭೆಗಳನ್ನು ಮಾಡಲಾಗಿದೆ. ಐದು ಸಾವಿರಕ್ಕೂ ಹೆಚ್ಚು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಇದುವರೆಗೆ ಯಾವುದೇ ಇಲಾಖೆಯ ಸಚಿವರು ನಮ್ಮನ್ನು ಸಂಪರ್ಕಿಸಿಲ್ಲ.
– ಚೂನಪ್ಪ ಪೂಜೇರಿ,
ರಾಜ್ಯ ರೈತ ಸಂಘದ ಅಧ್ಯಕ್ಷ

-ಕೇಶವ ಆದಿ

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.