Belagavi: ಪಾರ್ಕಿಂಗ್‌ ಸಮಸ್ಯೆಗೆ ಪರಿಹಾರ

Team Udayavani, Sep 15, 2023, 6:39 PM IST

Belagavi: ಪಾರ್ಕಿಂಗ್‌ ಸಮಸ್ಯೆಗೆ ಪರಿಹಾರ

ಬೆಳಗಾವಿ: ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಬೆಳಗಾವಿ ನಗರದಲ್ಲಿ ವಾಹನ ಸಂಚಾರ ಮತ್ತು ನಿಲುಗಡೆ ಸಮಸ್ಯೆ ಬಿಗಡಾಯಿಸುತ್ತಿದೆ. ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯ ಕಾರಣ ಈ ಸಮಸ್ಯೆಗಳಿಗೆ ಇದುವರೆಗೆ ಶಾಶ್ವತ ಪರಿಹಾರ ಸಿಕ್ಕಿಲ್ಲ. ಯೋಜನೆಗಳ ಜಾರಿಗೆ ಸಹಕಾರಕ್ಕಿಂತ ಅಡೆತಡೆಗಳು ಬಂದಿದ್ದೇ ಹೆಚ್ಚು.

ನಗರದಲ್ಲಿ ವಾಹನ ಸಂಚಾರ ದಟ್ಟಣೆ ಕಡಿಮೆ ಮಾಡಬೇಕು. ವಾಹನಗಳ ನಿಲುಗಡೆಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆ ಮತ್ತು ಮಾಡಿದ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮನಸ್ಸಿಗೆ ಬಂದಂತೆ ಎಲ್ಲೆಂದರೆಲ್ಲಿ ಮಾಡುವ ವಾಹನಗಳ ಪಾರ್ಕಿಂಗ್‌ ಸಾಕಷ್ಟು ಕಿರಿಕಿರಿ ಉಂಟುಮಾಡುತ್ತಿದೆ. ಇಂತಹ ಹತ್ತಾರು ಅಡೆತಡೆಗಳ ನಡುವೆ ವಾಹನಗಳ ನಿಲುಗಡೆ ಸಮಸ್ಯೆಗೆ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಮಹಾನಗರಪಾಲಿಕೆ, ಸ್ಮಾರ್ಟ್‌ಸಿಟಿ ಯೋಜನೆ ಮುಂದಾಗಿವೆ. ನಗರದ ಹೃದಯ ಭಾಗದಲ್ಲಿರುವ ಬಾಪಟ್‌ ಗಲ್ಲಿಯಲ್ಲಿ ಬಹುಮಹಡಿ ಪಾರ್ಕಿಂಗ್‌ ಸಂಕೀರ್ಣ ನಿರ್ಮಿಸಲು ಹಸಿರು ನಿಶಾನೆ ಸಿಕ್ಕಿದ್ದು ಅಂದುಕೊಂಡಂತೆ ಈ ಯೋಜನೆ ತ್ವರಿತವಾಗಿ ಕೈಗೂಡಿದರೆ ಒಂದೂವರೆ ದಶಕಗಳ ಕನಸು ನನಸಾಗಲಿದೆ.

ನಗರದ ಪಾರ್ಕಿಂಗ್‌ ಸಮಸ್ಯೆಗೆ ಒಂದು ಹಂತದಲ್ಲಿ ಪರಿಹಾರ ನೀಡಲು ಸ್ಮಾರ್ಟ್‌ ಸಿಟಿ ಮತ್ತು ಮಹಾನಗರಪಾಲಿಕೆ ಜಂಟಿಯಾಗಿ ಕೈಜೋಡಿಸಿದ್ದು ಬಹುಮಹಡಿ ಪಾರ್ಕಿಂಗ್‌ ಸಂಕೀರ್ಣ ನಿರ್ಮಾಣ ಯೋಜನೆಗೆ ಒಟ್ಟು 9 ಕೋಟಿ ರೂ ನಿಗದಿಪಡಿಸಲಾಗಿದೆ. ಇದರಲ್ಲಿ ಕಾಮಗಾರಿ ಗುತ್ತಿಗೆ ಪಡೆದಿರುವ ಬೆಂಗಳೂರು ಮೂಲದ ಬಿ ವಿ ಐ ಇಂಡಿಯಾ ಲಿಮಿಟೆಡ್‌ ಏಳು ಕೋಟಿ ವೆಚ್ಚಮಾಡುತ್ತಿದ್ದರೆ ಸ್ಮಾರ್ಟ್‌ಸಿಟಿ ಯೋಜನೆಯಿಂದ ಎರಡು ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ.

ದಶಕದ ಯೋಜನೆ: ಈ ಬಹುಮಹಡಿ ಪಾರ್ಕಿಂಗ್‌ ನಿರ್ಮಾಣ ಯೋಜನೆಗೆ ದಶಕದ ಇತಿಹಾಸ ಇದೆ. ನಗರದ ಪಾರ್ಕಿಂಗ್‌ ಸಮಸ್ಯೆಗೆ ಒಂದು ಹಂತದಲ್ಲಿ ಪರಿಹಾರ ನೀಡಲು 2006 ರಲ್ಲೇ ಬಹುಮಹಡಿ ಪಾರ್ಕಿಂಗ್‌ ಸಂಕೀರ್ಣ ಯೋಜನೆ ರೂಪಿಸಲಾಗಿತ್ತು. ಆದರೆ ರಾಜಕೀಯ, ಹಣಕಾಸು ಸೇರಿದಂತೆ ಹಲವಾರು ಕಾರಣಗಳಿಂದ ಈ ಯೋಜನೆ ಪ್ರಗತಿ ಕಾಣಲೇ ಇಲ್ಲ. ಪ್ರತಿ ಬಾರಿ ಮಹಾನಗರಪಾಲಿಕೆ ಸಭೆಗಳಲ್ಲಿ ಇದರ ಬಗ್ಗೆ ಚರ್ಚೆ ನಡೆದರೂ ಯಾವುದೇ ಫಲ ಸಿಕ್ಕಿರಲಿಲ್ಲ.

ಮುಂದೆ 2017 ರಲ್ಲಿ ಆಗಿನ ಸರಕಾರ ಇದಕ್ಕಾಗಿ 100 ಕೋಟಿ ವಿಶೇಷ ಅನುದಾನ ಮೀಸಲಿಟ್ಟು ಮುಂಬೈ ಮೂಲದ ಕಂಪನಿಗೆ ಟೆಂಡರ್‌ ಸಹ ಹಂಚಿಕೆ ಮಾಡಲಾಗಿತ್ತು. ಆದರೆ ಜಿಎಸ್‌ಟಿ ಜಾರಿಗೆ ಬಂದ ನಂತರ ಈ ಕಂಪನಿಯು ನಿರ್ಮಾಣದಿಂದ ಹಿಂದೆ ಸರಿಯಿತು. ಆನಂತರ ಬಹುಮಹಡಿ ಪಾರ್ಕಿಂಗ್‌ ನಿರ್ಮಾಣ ಕಾರ್ಯದಲ್ಲಿ ಯಾವುದೇ ಪ್ರಗತಿ ಕಾಣಲಿಲ್ಲ.

ಈಗ ಕೊನೆಗೂ 2023 ರಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಕ್ಕಿದ್ದು ಶಾಸಕ ಅಸಿಫ್‌ (ರಾಜು) ಸೇಠ ಅವರು ಚಾಲನೆ ಕೊಟ್ಟಿದ್ದಾರೆ. ಒಟ್ಟು 12 ಗುಂಟೆ ಜಾಗದಲ್ಲಿ ನೆಲಮಹಡಿ ಸೇರಿದಂತೆ ಒಟ್ಟು ಐದು ಮಹಡಿಗಳ ಸಂಕೀರ್ಣ ನಿರ್ಮಾಣವಾಗಲಿದೆ. ಇದಕ್ಕಾಗಿ ಎರಡು ವರ್ಷದ ಕಾಲಮಿತಿ ನಿಗದಿಪಡಿಸಲಾಗಿದೆ. ಈ ಪಾರ್ಕಿಂಗ್‌ ಪ್ರದೇಶದಲ್ಲಿ ಏಕಕಾಲಕ್ಕೆ 120 ಕಾರುಗಳನ್ನು
ಪಾರ್ಕಿಂಗ್‌ ಮಾಡಬಹುದು ಎಂಬುದು ಗಮನಿಸಬೇಕಾದ ಸಂಗತಿ. ಸ್ಮಾರ್ಟ್‌ಸಿಟಿ ಯೋಜನೆ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ 12 ಗುಂಟೆ ಜಾಗದಲ್ಲಿ ಈ ಬಹುಮಹಡಿ ಪಾರ್ಕಿಂಗ್‌ ಸಂಕೀರ್ಣ ನಿರ್ಮಾಣವಾಗಲಿದೆ. ಕಾರುಗಳ ಪಾರ್ಕಿಂಗ್‌ ಜೊತೆಗೆ ವಾಣಿಜ್ಯ ಮಳಿಗೆಗಳನ್ನು ಸಹ ನಿರ್ಮಾಣ ಮಾಡಲಾಗುತ್ತದೆ.

ಮೊದಲು ಲೀಸ್‌ ಅವಧಿಯಲ್ಲಿ ಈ ಅಂಗಡಿಗಳನ್ನು ನೀಡಲಾಗುವದು. ನಂತರ ಇದನ್ನು ಮಹಾನಗರಪಾಲಿಕೆಗೆ ಹಸ್ತಾಂತರ ಮಾಡಲು ಯೋಜನೆ ರೂಪಿಸಲಾಗಿದೆ. ನೆಲಮಹಡಿ ಹಾಗೂ ಮೊದಲ ಮಹಡಿಗಳಲ್ಲಿ ವಾಣಿಜ್ಯ ಮಳಿಗೆಗಳಿಗೆ ಅವಕಾಶ ನೀಡಲಾಗಿದೆ. ನಂತರದ ಮಹಡಿಗಳಲ್ಲಿ ತಲಾ 30 ಕಾರುಗಳಂತೆ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ದೊರೆಯಲಿದೆ. ಅಂಗಡಿಗಳನ್ನು ಬಾಡಿಗೆ ಆಧಾರದ ಮೇಲೆ ನೀಡುವದರಿಂದ ಪಾಲಿಕೆಗೆ ಆದಾಯವೂ ಬರುತ್ತದೆ. ಈ ಹಿನ್ನಲೆಯಲ್ಲಿ ಸಾಧ್ಯವಾದಷ್ಟು ಬೇಗ ಕಾಮಗಾರಿ ಕೈಗೊಳ್ಳಲು ಸೂಚಿಸಲಾಗಿದೆ.

ಬಹಳ ವರ್ಷಗಳ ಯೋಜನೆಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದು ಕಾಮಗಾರಿ ಪೂರ್ಣಗೊಂಡರೆ ಬೆಳಗಾವಿ ನಗರದಲ್ಲಿನ ವಾಹನಗಳ ನಿಲುಗಡೆ ಸಮಸ್ಯೆಗೆ ಸ್ವಲ್ಪವಾದರೂ ಪರಿಹಾರ ಸಿಗಲಿದೆ.

ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಯೋಜನೆ ರೂಪಿಸಲಾಗಿದ್ದು ಎರಡು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಲು
ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಮಹಾನಗರಪಾಲಿಕೆಯವರು ಅಲ್ಲಿನ ಜಾಗವನ್ನು ತೆರವುಗೊಳಿಸಿ ಹಸ್ತಾಂತರ ಮಾಡಿದ ತಕ್ಷಣ ಕಾಮಗಾರಿ ಆರಂಭಿಸಲಾಗುವದು. ಬಹುಮಹಡಿ ಪಾರ್ಕಿಂಗ್‌ ನಿರ್ಮಾಣಕ್ಕೆ ಸ್ಮಾರ್ಟ್‌ ಸಿಟಿ ಯೋಜನೆಯಿಂದ ಎರಡು ಕೋಟಿ
ವೆಚ್ಚ ಮಾಡಲಾಗುತ್ತಿದೆ.
ಸಯೀದಾ ಅಫ್ರಿನ್‌ ಬಳ್ಳಾರಿ, ಸ್ಮಾರ್ಟ್‌ಸಿಟಿ ಎಂ ಡಿ

*ಕೇಶವ ಆದಿ

ಟಾಪ್ ನ್ಯೂಸ್

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.