Belagavi: ಮತ್ತೆ ಪ್ರತ್ಯೇಕ ರಾಜ್ಯದ ಎಚ್ಚರಿಕೆ ನೀಡಿದ ಆಡಿ ಹಂದಿಗುಂದದ ಸ್ವಾಮೀಜಿ
Team Udayavani, Dec 7, 2024, 3:46 PM IST
ಬೆಳಗಾವಿ: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 30 ಸಾವಿರ ಕೋಟಿ ರೂ ಅನುದಾನ ಪ್ರತ್ಯೇಕವಾಗಿ ಮೀಸಲಿಡಬೇಕು ಎಂದು ಆಡಿ ಹಂದಿಗುಂದದ ಶಿವಾನಂದ ಸ್ವಾಮೀಜಿ ಆಗ್ರಹಿಸಿದರು.
ನಾಗನೂರು ರುದ್ರಾಕ್ಷಿಮಠದ ಲಿಂ.ಶಿವಬಸವ ಸ್ವಾಮೀಜಿ 135ನೇ ಜಯಂತಿ ಮಹೋತ್ಸವ ಪ್ರಯುಕ್ತ ಸಮಗ್ರ ಉತ್ತರ ಕರ್ನಾಟಕ ಅಭಿವೃದ್ಧಿಯಾಗಲಿ ಎಂಬ ಧ್ಯೇಯವಾಕ್ಯದೊಂದಿಗೆ ಶನಿವಾರ ನಡೆದ ಜಾಗೃತಿ ಜಾಥಾ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸ್ವಾಮೀಜಿ, ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ, ಉತ್ತರ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಹೆಸರಿಗೆ ಮಾತ್ರ ಇಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣವಾಯಿತು. ಆದರೆ, ಜನರ ಬದುಕು ಮಾತ್ರ ಬಂಗಾರವಾಗಲಿಲ್ಲ. ಬಹಳ ವರ್ಷಗಳಿಂದಲೂ ಉತ್ತರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಮುಂದುವರಿದಿದೆ. ಇದಕ್ಕೆ ಕಡಿವಾಣ ಬೀಳದಿದ್ದರೆ, ಪ್ರತ್ಯೇಕ ರಾಜ್ಯದ ಬೇಡಿಕೆಗೆ ಮತ್ತೆ ಧ್ವನಿ ಬರಲಿದೆ ಎಂದು ಎಚ್ಚರಿಕೆ ಕೊಟ್ಟರು.
ಇಂದು ನಾವು ನಡೆಸುತ್ತಿರುವ ಹೋರಾಟ ಆರಂಭ ಮಾತ್ರ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ, ಉತ್ತರ ಕರ್ನಾಟಕದ ಹಳ್ಳಿ–ಹಳ್ಳಿಗಳಿಂದ ಜನರು ಹೋರಾಟಕ್ಕೆ ಧುಮುಕುತ್ತಾರೆ. ಅದಕ್ಕಿಂತ ಮುನ್ನವೇ ಈ ಭಾಗಕ್ಕೆ ಅನ್ಯಾಯ ಸರಿಪಡಿಸಬೇಕು ಎಂದು ಸ್ವಾಮೀಜಿ ಆಗ್ರಹಿಸಿದರು.
ಬೆಳಗಾವಿಯಲ್ಲಿ ಕಾಟಾಚಾರಕ್ಕೆ, 10 ದಿನಗಳ ಅಧಿವೇಶನ ನಡೆಸಿದರೆ ಸಾಲದು. ಬದಲಿಗೆ 30 ದಿನಗಳವರೆಗೆ ಪೂರ್ಣ ಪ್ರಮಾಣದ ಅಧಿವೇಶನ ನಡೆಸಬೇಕು. ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದ ರಾಜ್ಯಮಟ್ಟದ ಎಲ್ಲ ಇಲಾಖೆಗಳ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕು. ಈ ವಿಚಾರವಾಗಿ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರ ಗಟ್ಟಿಯಾದ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
MUST WATCH
ಹೊಸ ಸೇರ್ಪಡೆ
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.