Belagavi: ಬಿಜೆಪಿಯಲ್ಲಿ ಭಿನ್ನಮತವಿಲ್ಲ, ವಿಜಯೇಂದ್ರ ನಮ್ಮ ಅಧ್ಯಕ್ಷರು: ಪ್ರತಾಪ್ ಸಿಂಹ
Team Udayavani, Dec 1, 2024, 1:24 PM IST
ಬೆಳಗಾವಿ: ವಿಜಯೇಂದ್ರ ನಮ್ಮ ರಾಜ್ಯಾಧ್ಯಕ್ಷರು. ನಮ್ಮ ಹೋರಾಟ ವಕ್ಫ್ ಬೋರ್ಡ್ ಭೂಕಬಳಿಕೆಯ ನೀತಿ ವಿರುದ್ಧ. ಯಾವುದೇ ವ್ಯಕ್ತಿ ವಿರುದ್ಧದ ಹೋರಾಟ ಅಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ಬೆಳಗಾವಿಯಲ್ಲಿ ರವಿವಾರ (ಡಿ.01) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಅಧ್ಯಕ್ಷರು ನವೆಂಬರ್ 22ಕ್ಕೆ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟಕ್ಕೆ ಕರೆ ಕೊಟ್ಟಿದ್ದಾಗ ನಾನೂ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದೆ. ಎಲ್ಲಾ ಕಡೆಯೂ ಕಾರ್ಯಕ್ರಮ ಯಶಸ್ವಿಯಾಗಿದೆ. ವಿಜಯಪುರದಲ್ಲಿ ಯತ್ನಾಳ್ ಅಹೋರಾತ್ರಿ ಧರಣಿ ನಡೆಸಿದ್ದರು. ಜಂಟಿ ಸಂಸದೀಯ ಸಮಿತಿ ಅಧ್ಯಕ್ಷರು ಭೇಟಿ ನೀಡಿದ್ದರು. ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಕೂಡ ಸ್ಥಳಕ್ಕೆ ಭೇಟಿ ನೀಡಿ ಹೋರಾಟದಲ್ಲಿ ಭಾಗಿಯಾಗಿದ್ದರು. ನಮ್ಮ ಹೋರಾಟ ಬಿಜೆಪಿ ಹೋರಾಟ, ಯಾವುದೇ ವ್ಯಕ್ತಿ ವಿರುದ್ಧದ ಹೋರಾಟ ಅಲ್ಲ ಎಂದರು.
ವಿಜಯೇಂದ್ರ, ಯತ್ನಾಳ್, ರಮೇಶ್ ಜಾರಕಿಹೊಳಿ ಸೇರಿ ನಮ್ಮ ಕಾರ್ಯಕರ್ತರ ಗುರಿ ಒಂದೇ. ವಕ್ಫ್ ಭೂಕಬಳಿಕೆಗೆ ತಡೆ ಹಾಕಿ ನಮ್ಮ ರೈತರ ಭೂಮಿ ರಕ್ಷಿಸುವುದಾಗಿದೆ. ಇಲ್ಲಿ ಅಪಸ್ವರ, ಭಿನ್ನಾಭಿಪ್ರಾಯವಿಲ್ಲ. ಅದಕ್ಕೆ ಅವಕಾಶವೂ ಇಲ್ಲ ಎಂದು ಪ್ರತಾಪ್ ಸಿಂಹ ಹೇಳಿದರು.
ಯತ್ನಾಳ್ ರನ್ನು ಉಚ್ಛಾಟನೆ ಮಾಡಿ ಎಂಬ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅಪ್ರಸ್ತುತ, ಜನರಿಂದ ತಿರಸ್ಕಾರಗೊಂಡು ಮೂಲೆ ಗುಂಪಾಗಿರುವ ವ್ಯಕ್ತಿಗಳ ಮಾತಿಗೆ ಉತ್ತರ ಕೊಡುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.
ನಮ್ಮ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ, ಜಿಲ್ಲಾ ನಾಯಕರ ಸಮ್ಮುಖದಲ್ಲಿ ಹೋರಾಟ ನಡೆಯುತ್ತಿದೆ. ನಮ್ಮ ಒಟ್ಟಾರೆ ಹೋರಾಟ ವಕ್ಫ್ ಬೋರ್ಡ್ ವಿರುದ್ಧ, ಸಿದ್ದರಾಮಯ್ಯನವರ ಹಿಂದೂ ವಿರೋಧಿ ಧೋರಣೆ ವಿರುದ್ಧ. ವೈಯಕ್ತಿಕ ಮೇಲಾಟ, ಈ ರೀತಿಯ ಅಪಸ್ವರದ ಮಾತುಗಳಿಗೆ ಎಲ್ಲಿ ಜಾಗವಿದೆ? ಯತ್ನಾಳ್ ಅವರು ರಾಜ್ಯ ಬಿಜೆಪಿಯ ಅತಿದೊಡ್ಡ ನೇತಾರರು, 1994 ರಲ್ಲಿ ಯತ್ನಾಳ್ ಸಂಸದರಾಗಿ ಚುನಾಯಿತ ಪ್ರತಿನಿಧಿಯಾದವರು. ವಾಜಪೇಯಿ ಸರ್ಕಾರದಲ್ಲಿ ಯತ್ನಾಳ್ ಕೇಂದ್ರ ಸಚಿವರಾಗಿದ್ದರು. ಈ ಭಾಗದಲ್ಲಿ ದೊಡ್ಡ ಅಭಿಮಾನಿ ವರ್ಗವನ್ನು ಯತ್ನಾಳ್ ಹೊಂದಿದ್ದಾರೆ ಎಂದರು.
ನಮ್ಮ ಹೋರಾಟ ವಿಜಯೇಂದ್ರ ವಿರುದ್ಧ ಅಲ್ಲ, ವಕ್ಫ್ ಬೋರ್ಡ್ ಭೂಕಬಳಿಕೆ ವಿರುದ್ಧ. ನಾವು ಒಳ್ಳೆಯ ಕೆಲಸ ಮಾಡುತ್ತಿದ್ದೇವೆ. ಇದು ಹೈಕಮಾಂಡ್ ಗಮನಕ್ಕಿದೆ. ಬಿಜೆಪಿ ಮನೆ ಮೂರು ಬಾಗಿಲಾಗಿಲ್ಲ. ಬದಲಾಗಿ ಕಾಂಗ್ರೆಸ್‌ನಲ್ಲಿ ಎಲ್ಲರೂ ಒಂದೊಂದು ಬಾಗಿಲು, ಒಂದೊಂದು ಅಂಗಡಿ ತೆರೆದಿದ್ದಾರೆ. ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಸಮಾವೇಶ ಮಾಡುತ್ತಿದ್ದಾರೆ. ಸಿಎಂ ಚೇರ್ ಮೇಲೆ ಕುಳಿತುಕೊಳ್ಳಲು ಡಿಕೆಶಿ ಕಾಯುತ್ತಿದ್ದಾರೆ. ಈ ಮಧ್ಯೆ ನಾನು ಸಿಎಂ ಆಗಬೇಕು, ಅಧ್ಯಕ್ಷನಾಗಬೇಕೆಂದು ಸತೀಶ್ ಜಾರಕಿಹೊಳಿ ಬಯಸುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ, ಪರಮೇಶ್ವರ ಕೂಡ ಸಿಎಂ ಖುರ್ಚಿಗೆ ಪ್ರಯತ್ನಿಸುತ್ತಿದ್ದಾರೆ. ಊರ ತುಂಬ ಬಾಗಿಲು ಇರುವುದು ಕಾಂಗ್ರೆಸ್‌ನಲ್ಲಿ ನಮ್ಮಲ್ಲಿ ಒಂದೇ ಬಾಗಿಲು, ಒಂದೇ ಹೋರಾಟ ಎಂದು ಪ್ರತಾಪ್ ಸಿಂಹ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಕ್ಫ್ ಹೋರಾಟ ಮಾಡುವುದು ತಪ್ಪಾ..: ವಿಜಯೇಂದ್ರ ದೂರಿನ ಬಗ್ಗೆ ಯತ್ನಾಳ್ ಮಾತು
Bellary; ಕರ್ನಾಟಕ- ಆಂಧ್ರ ಗಡಿಯಲ್ಲಿ ಭೀಕರ ಅಪಘಾತ: ವೈದ್ಯರು ಸೇರಿ ಮೂವರು ಸಾವು
BYV ಬಣಕ್ಕೆ ಸೆಡ್ಡು: ದಾವಣಗೆರೆಯಲ್ಲಿ ಯತ್ನಾಳ್ ತಂಡದಿಂದಲೂ ಬೃಹತ್ ಸಮಾವೇಶ ಯೋಜನೆ
ಪದ್ಮನಾಭ ತೀರ್ಥರ ಆರಾಧನೆ; ಮಂತ್ರಾಲಯ ಶ್ರೀ ಹೇಳಿಕೆಗೆ ಉತ್ತರಾದಿ ಮಠ ಆಕ್ಷೇಪ
Tourist places; ರಾಜ್ಯದ 2 ತಾಣಗಳ ಅಭಿವೃದ್ಧಿಗೆ ಕೇಂದ್ರ ಸರಕಾರದ ಯೋಜನೆ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Kalaburagi: ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ
Wedding Story: ಕಂಕಣ ಕಾಲ-4: ಲಗ್ನಪತ್ರಿಕೆ ಹೋಯ್ತು, ವಾಟ್ಸಾಪ್‌ನಲ್ಲೇ ಕರೆ ಬಂತು!
Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ
Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಭಾಗ.. ಓರ್ವ ಕಾರ್ಮಿಕ ಮೃತ್ಯು
Bangla; ಭಾರತೀಯ ಬಸ್ ಮೇಲೆ ಬಾಂಗ್ಲಾದಲ್ಲಿ ದಾಳಿ; ಭಾರತ ವಿರೋಧಿ ಘೋಷಣೆ ಕೂಗಿದ ಸ್ಥಳೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.