![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Sep 18, 2024, 9:10 AM IST
ಬೆಳಗಾವಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಂಗಳವಾರ ತಡರಾತ್ರಿ(ಸೆ 17) ರಾಣಿ ಚನ್ನಮ್ಮ ವೃತ್ತದಲ್ಲಿ ಯುವಕರ ಮಧ್ಯೆ ದಾಂಧಲೆ ಆಗಿದ್ದು, ಮೂವರು ಯುವಕರ ಮೇಲೆ ಚಾಕು ಇರಿತ ನಡೆಸಲಾಗಿದೆ.
ದರ್ಶನ್ ಪಾಟೀಲ, ಪ್ರವೀಣ ಗುಂಡ್ಯಾಗೋಳ, ಸತೀಶ ಪೂಜಾರಿ ಎಂಬ ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿದಿದ್ದರಿಂದ ತೀವ್ರ ಅಸ್ವಸ್ಥರಾದ ಯುವಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಭಾರೀ ಜನಸಂದಣಿಯಲ್ಲಿ ಡಾನ್ಸ್ ಮಾಡುತ್ತಿದ್ದ ವೇಳೆ ಕಾಲು ತಗುಲಿತು ಎಂಬ ಕ್ಷುಲ್ಲಕ ಕಾರಣಕ್ಕೆ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.
ಚಾಕುವಿನಿಂದ ದಾಳಿ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ತತ್ ಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದುಷ್ಕೃತ್ಯ ಎಸಗಿದವರು ಗಾಂಜಾ ಮತ್ತಿನಲ್ಲಿ ಇದ್ದರು ಎಂದು ಹೇಳಲಾಗುತ್ತಿದೆ. ಜಿಲ್ಲಾಸ್ಪತ್ರೆಗೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.