Belagavi: ವಿದ್ಯಾರ್ಥಿ ಜೀವನದಲ್ಲಿ ಶ್ರಮಪಟ್ಟು ಯಶಸ್ಸು ಸಾಧಿಸಿ
Team Udayavani, Sep 13, 2023, 3:30 PM IST
ಬೈಲಹೊಂಗಲ: ವಿದ್ಯಾರ್ಥಿಗಳು ಶೈಕ್ಷಣಿಕ ಜೀವನದಲ್ಲಿ ವ್ಯರ್ಥ ಸಮಯ ಕಳೆಯದೆ ನಿರಂತರ ಪರಿಶ್ರಮಪಟ್ಟು ಬದುಕಿನಲ್ಲಿ
ಯಶಸ್ಸು ಕಾಣಬೇಕು. ತಂದೆ-ತಾಯಿ ಮತ್ತು ಗುರುಗಳ ಮಾರ್ಗದರ್ಶನದಲ್ಲಿ ಸಂಸ್ಕಾರ ಮತ್ತು ಸರಳತೆಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
ತಾಲೂಕಿನ ದೊಡವಾಡ ಗ್ರಾಮದಲ್ಲಿ ಶ್ರೀ ಗ್ರಾಮ ದೇವತೆ ದೇವಸ್ಥಾನ ಟ್ರಸ್ಟ್ ಮತ್ತು ಸೇವಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಿ ಅವರು ಮಾತನಾಡಿದರು.
ಸಮಾಜದಲ್ಲಿನ ಉತ್ತಮ ವ್ಯಕ್ತಿಗಳನ್ನು ಮತ್ತು ಪ್ರತಿಭಾನ್ವಿತರನ್ನು ಗುರುತಿಸಿ ಗೌರವಿಸುವುದು ಶ್ರೇಷ್ಠ ಕೆಲಸ. ಹೀಗಾಗಿ ಶ್ರಾವಣ ಮಾಸದ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸುತ್ತಿರುವ ಗ್ರಾಮದೇವತೆ ಗುಡಿಯ ಸೇವಾ ಸಮಿತಿ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಸಾನ್ನಿಧ್ಯ ವಹಿಸಿದ್ದ ನವಲಗುಂದ ಗವಿಮಠದ ಶ್ರೀ ಅಭಿನವ ಬಸವಲಿಂಗ ಸ್ವಾಮಿಗಳು ಮಾತನಾಡಿ, ಶಿಕ್ಷಣ ಪ್ರೇಮಿಗಳಾಗಿರುವ ಶಾಸಕ ಮಹಾಂತೇಶ ಕೌಜಲಗಿಯವರಿಂದ ದೊಡವಾಡ ಗ್ರಾಮ ಸಮಗ್ರ ಅಭಿವೃದ್ಧಿ ಕಾಣಲಿ ಎಂದರು.
ಸರಕಾರಿ ವೈದ್ಯಕೀಯ ಸೀಟು ಪಡೆದ ಶಿವಾನಂದ ಚೌಡನ್ನವರ, ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ
ಐಶ್ವರ್ಯ ಉಪ್ಪಿನ ಹಾಗೂ ಸ್ಥಳೀಯ ಶಾಲೆಗಳ ಎಸ್‌ಎಸ್‌ಎಲ್‌ಸಿ, ಪಿಯುಸಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಸಮಿತಿಯವರು ಶಾಸಕರು ಹಾಗೂ ನವಲಗುಂದ ಶ್ರೀಗಳನ್ನು ಸನ್ಮಾನಿಸಿ, ಗೌರವಿಸಿದರು. ಸಮಿತಿ ಅಧ್ಯಕ್ಷ ವಿಠuಲ ಗಾಬಿ, ಗ್ರಾಮದ ಮುಖಂಡರಾದ ನಿಂಗಪ್ಪ ಚೌಡಣ್ಣವರ, ವೀರೇಂದ್ರ ಸಂಗೊಳ್ಳಿ, ಬಸವರಾಜ ಅಂದಾನಶೆಟ್ಟಿ, ನಾನೇಶ ನಾನನ್ನವರ, ಮಹಾದೇವಪ್ಪ ಶೆಟ್ಟರ, ಆನಂದ ಹೆಬ್ಬಳ್ಳಿ, ಪೀರಪ್ಪ ಕಾಟೆನ್ನವರ, ಮುಖ್ಯ ಶಿಕ್ಷಕಿ
ಬಿ.ಆರ್. ಹುತಮಲ್ಲನವರ, ಶ್ರೀ ಗ್ರಾಮದೇವತೆ ದೇವಸ್ಥಾನ ಟ್ರಸ್ಟ್ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದ್ದರು. ಗಾಯಕಿ ಸುಧಾ ಹಿರೇಮಠ ಪ್ರಾರ್ಥಿಸಿದರು. ಪತ್ರಕರ್ತ ಮಾಧವಾನಂದ ಬೆಳವಡಿ ಸ್ವಾಗತಿಸಿ, ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.