28ರಿಂದ ಬೆಳವಡಿ ಮಲ್ಲಮ್ಮ ಉತ್ಸವ


Team Udayavani, Feb 24, 2020, 1:12 PM IST

bg-tdy-3

ಬೈಲಹೊಂಗಲ: ತಾಲೂಕಿನ ಬೆಳವಡಿ ಗ್ರಾಮದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಫೆ.28, 29ರಂದು ಬೆಳವಡಿ ಮಲ್ಲಮ್ಮನ ಉತ್ಸವ-2020 ಅದ್ಧೂರಿಯಾಗಿ ನಡೆಯಲಿದೆ.

ಫೆ.28 ರಂದು ಬೆಳಗ್ಗೆ 10ಕ್ಕೆ ವೀರರಾಣಿ ಬೆಳವಡಿ ಮಲ್ಲಮ್ಮನ ವೃತ್ತದಲ್ಲಿ ಬೆಳವಡಿ ಸಂಸ್ಥಾನದ ಧ್ವಜಾರೋಹಣ ಹಾಗೂ ಬೆಳವಡಿ ಮಲ್ಲಮ್ಮನ ವಿಜಯಜ್ಯೋತಿಯನ್ನು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಬರಮಾಡಿಕೊಳ್ಳುವರು. 10.15ಕ್ಕೆ ನಡೆಯುವ ಜಾನಪದ ಕಲಾವಾಹಿನಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಶಶಿಕಲಾ ಜೊಲ್ಲೆ ಉದ್ಘಾಟಿಸುವರು. 10.30ಕ್ಕೆ ವಸ್ತು ಪ್ರದರ್ಶನವನ್ನು ರಾಜ್ಯ ರೇಲ್ವೆ ಸಚಿವ ಸುರೇಶ ಅಂಗಡಿ ಉದ್ಘಾಟಿಸುವರು. ಫೆ.28ರಂದು ಸಂಜೆ 7ಕ್ಕೆ ಬೆಳವಡಿ ಮಲ್ಲಮ್ಮನ ವೇದಿಕೆಯಲ್ಲಿ ಬೆಳವಡಿ ಮಲ್ಲಮ್ಮನ ಉತ್ಸವ-2020 ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬೆಳವಡಿ ಸಂಸ್ಥಾನದ ರಾಜಗುರು, ಹೂಲಿ ಹಿರೇಮಠದ ಶಿವಮಹಾಂತ ಶಿವಾಚಾರ್ಯ ಸ್ವಾಮಿಗಳು ಸಾನಿಧ್ಯ ವಹಿಸುವರು. ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಉತ್ಸವ ಕಾರ್ಯಕ್ರಮ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ರಾಜ್ಯ ರೇಲ್ವೆ ಸಚಿವ ಸುರೇಶ ಅಂಗಡಿ, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಶಶಿಕಲಾ ಜೊಲ್ಲೆ, ಜಲ ಸಂಪನ್ಮೂಲ (ಭಾರಿ ಮತ್ತು ಮಧ್ಯಮ ನೀರಾವರಿ) ಸಚಿವ ರಮೇಶ ಜಾರಕಿಹೊಳಿ, ಜವಳಿ ಸಚಿವ ಶ್ರೀಮಂತ ಪಾಟೀಲ, ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಸಿ.ಟಿ.ರವಿ ಆಗಮಿಸುವರು. ಶಾಸಕ ಮಹಾಂತೇಶ ಕೌಜಲಗಿ ಅಧ್ಯಕ್ಷತೆ ವಹಿಸುವರು.

ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಶಾಸಕ ಪಿ.ರಾಜೀವ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಲೋಕಸಭಾ ಸದಸ್ಯರಾದ ಅನಂತಕುಮಾರ ಹೆಗಡೆ, ಅಣ್ಣಾಸಾಹೇಬ ಜೊಲ್ಲೆ ವಿಶೇಷ ಆಮಂತ್ರಿತರಾಗಿ ಆಗಮಿಸುವರು. ಜಿಲ್ಲೆಯ ಶಾಸಕರು, ತಾಪಂ ಅಧ್ಯಕ್ಷೆ ನೀಲವ್ವ ಫಕ್ಕೀರನ್ನವರ, ಜಿಪಂ ಸದಸ್ಯ ಈರಣ್ಣ ಕರೀಕಟ್ಟಿ, ತಾಪಂ ಸದಸ್ಯ ಅಮೃತಾ ಕಕ್ಕಯ್ಯನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರಕಾರದ ಕಾರ್ಯದರ್ಶಿ ಆರ್‌.ಆರ್‌. ಜನ್ನು, ಪಂ.ರಾ.ಇಂ. ಇಲಾಖೆ, ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್‌.ಕೆ.ಅತೀಕ, ಬೆಳಗಾವಿ ಉತ್ತರ ವಲಯ ಪೊಲೀಸ್‌ ಮಹಾ ನಿರೀಕ್ಷಕ ಎಚ್‌.ಜಿ. ರಾಘವೇಂದ್ರ ಸುಹಾಸ, ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತ ಅಮ್ಲಾನ್‌ ಅದಿತ್ಯ ಬಿಸ್ವಾಸ್‌ ಅತಿಥಿಗಳಾಗಿ ಆಗಮಿಸುವರು.

ಇದೇ ವೇಳೆ ರಾಣಿ ಮಲ್ಲಮ್ಮ ಪ್ರಶಸ್ತಿಯನ್ನು ಬೆಂಗಳೂರಿನ ಖ್ಯಾತ ಅಂಕಣಕಾರರಾದ ಡಾ|ವಿಜಯಲಕ್ಷ್ಮೀ ಬಾಳೇಕುಂದ್ರಿ, ರಾಜಾ ಈಶಪ್ರಭು ಪ್ರಶಸ್ತಿಯನ್ನು ಬೆಳವಡಿಯ ಈಶಪ್ರಭು ಶಿಕ್ಷಣ ಸಂಸ್ಥೆಯ ನಿವೃತ್ತ ಪ್ರಾಂಶುಪಾಲ ಎಂ.ಎಂ. ಕಾಡೇಶನವರ ಅವರಿಗೆ ನೀಡಲಾಗುವುದು. ಫೆ.29ರಂದು ವೀರರಾಣಿ ಬೆಳವಡಿ ಮಲ್ಲಮ್ಮ ಶ್ರೇಷ್ಠ ಭವನದಲ್ಲಿ ಬೆಳಗ್ಗೆ 10ಕ್ಕೆ ವಿಚಾರ ಸಂಕಿರಣ ನಡೆಯಲಿದೆ.

ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಪ್ರಸಾರಾಂಗ ಸಲಹಾ ಸಮಿತಿ ಸದಸ್ಯ ಯ.ರು.ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಮೈಸೂರಿನ ಹಿರಿಯ ವಿದ್ವಾಂಸ ಡಾ| ಡಿ.ಎ.ಉಪಾಧ್ಯೆ ಅಧ್ಯಕ್ಷತೆ ವಹಿಸುವರು. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥೆ ಪ್ರೊ|ಶೈಲಜಾ ಹಿರೇಮಠ ಅವರು ಬೆಳವಡಿ ರಾಣಿ ಮಲ್ಲಮ್ಮನನ್ನು ಅನುಲಕ್ಷಿಸಿ ವಿಷಯ ಕುರಿತು ಉಪನ್ಯಾಸ ನೀಡುವರು. ಬೆಳವಡಿಯ ಈಶಪ್ರಭು ಶಿಕ್ಷಣ ಸಂಸ್ಥೆಯ ನಿವೃತ್ತ ಪ್ರಾಂಶುಪಾಲ ಎಂ.ಎಂ. ಕಾಡೇಶನವರ ಬೆಳವಡಿ ಸಂಸ್ಥಾನದ ವಂಶಸ್ಥರು ವಿಷಯ ಕುರಿತು ಉಪನ್ಯಾಸ ನೀಡುವರು. ಬೆಂಗಳೂರಿನ ಖ್ಯಾತ ಅಂಕಣಕಾರರಾದ ಡಾ| ವಿಜಯಲಕ್ಷ್ಮೀ ಬಾಳೇಕುಂದ್ರಿ ಬೆಳವಡಿ ರಾಣಿ ಮಲ್ಲಮ್ಮಳ ಬಾಲ್ಯ, ಶಿಕ್ಷಣ, ಸಾಹಸ ವಿಷಯ ಕುರಿತು ಉಪನ್ಯಾಸ ನೀಡುವರು. ಫೆ.28 ರಂದು ಸಂಜೆ 5 ರಿಂದಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ.

ಫೆ.29 ರಂದು ಸಂಜೆ 5ರಿಂದ ಆನಂದ ಮೆಲೋಡಿಸ್‌ ತಂಡದಿಂದ ಭಾವಗೀತೆ ಗಾನ, ಮಡಿವಾಳಪ್ಪ ಕಿತ್ತೂರ ತಂಡದಿಂದ ಭಜನೆ, ಬಸಪ್ಪ ಅಮರಾವತಿ ತಂಡದಿಂದ ಶಹನಾಯಿ ವಾದನ, ಪಂಚಾಕ್ಷರಿ ಹಿರೇಮಠ ತಂಡದಿಂದ ವಚನ ಸಂಗೀತ, ಮಹಾದೇವ ಸತ್ತಿಗೇರಿ ತಂಡದಿಂದ ನಗೆಹೊನಲು,

ಬೆಳಗಾವಿಯ ಫೈಯರ್‌ ಫಿಟ್ಸ್‌ ಡ್ಯಾನ್ಸ್‌ ಗ್ರೂಪ್‌ ನಿಂದ ನೃತ್ಯ ರೂಪಕ, ಬೆಳವಡಿಯ ಬಾಬು ಖಂಡೋಜಿ ತಂಡದಿಂದ ಗಾಣಸುಧೆ, ಬಸಯ್ಯ ಗುತ್ತೆದಾರ ಸುಗಮ ಸಂಗೀತ, ಮಂಗಳೂರಿನ ಸತೀಶ ಎಂ ಅವರಿಂದ ಜಾದೂ ಪ್ರದರ್ಶನ, ಡಿ.ಆರ್‌.ನದಾಫ ಅವರ ಕೊಳಲು ವಾದನ, ಪ್ರೇರಣಾ ಶಿಂಧೆ ತಂಡದಿಂದ ನೃತ್ಯ ವೈವಿಧ್ಯ, ಬೆಂಗಳೂರಿನ ಬಿಗಬಾಸ್‌ ಖ್ಯಾತಿಯ ಚಲನಚಿತ್ರಗಳ ಖ್ಯಾತ ಹಿನ್ನೆಲೆ ಗಾಯಕರಿಂದ ರಸಮಂಜರಿಕಾರ್ಯಕ್ರಮ, ಹುಬ್ಬಳ್ಳಿಯ ಕಲಾಬಳಗದ ಜಿ.ವಿ.ಹಿರೇಮಠ ಅವರ ಹಾಸ್ಯಭರಿತ ನಾಟಕ, ಆನಿಗೋಳದ ರಾಮಲಿಂಗೇಶ್ವರ ನಾಟ್ಯ ಸಂಘದ ಗೋವಿಂದ ಪರಂಡಿ ಅವರ ನಿಜಗುಣ ಶಿವಯೋಗಿ ಸಣ್ಣಾಟ ನಡೆಯಲಿದೆ.

ಫೆ.29ರಂದು ಬೆಳಗ್ಗೆ 11ಕ್ಕೆ ಈಶಪ್ರಭು ಶಿಕ್ಷಣ ಸಂಸ್ಥೆಯ ಪ್ರೌಢಶಾಲೆ ಆವರಣದಲ್ಲಿ ಕ್ರೀಡಾ ಕಾರ್ಯಕ್ರಮಗಳು ಜರುಗಲಿವೆ. ಮಹಿಳಾ ಮತ್ತು ಪುರುಷ ವಾಲಿಬಾಲ್‌ ಪಂದ್ಯಾವಳಿಯನ್ನು ಜಿಪಂ ಸದಸ್ಯ ಈರಣ್ಣ ಕರೀಕಟ್ಟಿ ಉದ್ಘಾಟಿಸುವರು. ಮಧ್ಯಾಹ್ನ 3ಕ್ಕೆ ಮಹಿಳಾ ಮತ್ತು ಪುರುಷ ಜಂಗಿ ಕುಸ್ತಿಗಳನ್ನು ಶಾಸಕ ಮಹಾಂತೇಶ ಕೌಜಲಗಿ ಉದ್ಘಾಟಿಸುವರು.

ಜಿಲ್ಲಾಧಿಕಾರಿ ಡಾ| ಎಸ್‌.ಬಿ.ಬೊಮ್ಮನಹಳ್ಳಿ, ಜಿಪಂ ಸಿಇಒ ಡಾ| ಕೆ.ವಿ.ರಾಜೇಂದ್ರ, ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಲಕ್ಷ್ಮಣ ನಿಂಬರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಉಪವಿಭಾಗಾಕಾರಿ ಶಿವಾನಂದ ಭಜಂತ್ರಿ ಉಪಸ್ಥಿತರಿರುವರೆಂದು ತಹಶೀಲ್ದಾರ್‌ ಡಾ|ದೊಡ್ಡಪ್ಪ ಹೂಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.