ರಂಗೇರುತ್ತಿದೆ ಉಪಕದನ ; ಜೋರಾದ ವಾಗ್ಬಾಣ


Team Udayavani, Apr 3, 2021, 7:34 PM IST

gfhfgdf

ಬೈಲಹೊಂಗಲ: ರಾಜ್ಯದಲ್ಲಿ ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಹಾಗೂ ನೂತನ ಯೋಜನೆಗಳಿಗೆ 57 ಸಾವಿರ ಕೋಟಿ ಅನುದಾನ ಬಿಡುಗಡೆಗೊಳಿಸಿ ಅವುಗಳ ಅನುಷ್ಠಾನಕ್ಕೆ ದಿ. ಸುರೇಶ ಅಂಗಡಿ ಅವರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು.

ಶುಕ್ರವಾರ ಪಟ್ಟಣದ ಪೃಥ್ವಿ ಗಾರ್ಡನ್‌ದಲ್ಲಿ ನಡೆದ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಪ್ರಚಾರ ಸಭೆಯಲ್ಲಿ ಮಾತನಾಡಿ, 900 ಕೋಟಿ ರೂ. ವೆಚ್ಚದ ಬೆಳಗಾವಿ-ಧಾರವಾಡ ರೈಲ್ವೆ ಯೋಜನೆಗೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗಿದೆ. ರಾಜ್ಯ ಸರಕಾರ ಭೂಸ್ವಾ ಧೀನ ಪ್ರಕ್ರಿಯೆ ನಡೆಸಿದೆ. ಪ್ರಯಾಣಿಕರ ಬೇಡಿಕೆಯನುಗುಣವಾಗಿ ಬೆಳಗಾವಿ- ಬೆಂಗಳೂರು ನೇರ ರೈಲ್ವೆ ಕೊಡುಗೆ ಅಂಗಡಿ ಅವರದು. ಕರೊನಾ ಸಂಕಷ್ಟ ಸಮಯದಲ್ಲಿ ತಮ್ಮ ಆರೋಗ್ಯ ಲೆಕ್ಕಿಸದೆ ಜನರ ಸಂಕಷ್ಟಕ್ಕೆ ಸ್ಪಂದಿಸಿದ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಉಪಚುನಾವಣೆ ಎದುರಾಗಿದ್ದು ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಬಿಜೆಪಿ ಅಭ್ಯರ್ಥಿಯನ್ನು ಅತ್ಯಂತ ಬಹುಮತದಿಂದ ಆಯ್ಕೆ ಮಾಡಲು ಶ್ರಮಿಸಬೇಕೆಂದರು.

ಅಧೋಗತಿಗೆ ಹೋಗುತ್ತಿರುವ ಕಾಂಗ್ರೆಸ್‌ ಪಕ್ಷದಿಂದ ದೇಶದ ಬದಲಾವಣೆ ಕಾಣಲಾಗದು. ಪ್ರಬುದ್ಧತೆಯಿಲ್ಲದ ರಾಹುಲ್‌ ಗಾಂಧಿ  ದಿನದ 24 ಗಂಟೆ ಜನಸೇವೆ ಮಾಡುತ್ತಿರುವ ಮೋದಿಜಿಯವರಿಗೆ ಎಲ್ಲಿಯ ಹೋಲಿಕೆ? ಒಳ ಜಗಳದ ಕಾಂಗ್ರೆಸ್ಸಿಗರು ಟೀಕೆ ಬಿಟ್ಟು ಕೇಂದ್ರದ ಸಾಧನೆ ತಿಳಿದುಕೊಳ್ಳಲಿ ಎಂದು ಕಾಂಗ್ರೆಸ್‌ ನಾಯಕರನ್ನು ತರಾಟೆಗೆ ತೆಗೆದುಕೊಂಡರು.

ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ ಭಾರತಕ್ಕೆ ಶಾಪವಾಗಿ ಪರಿಣಮಿಸಿದೆ. ಅವರ ದುರಾಡಳಿತ, ಸ್ವಾರ್ಥದಿಂದ ದೇಶ ಅಧೋಗತಿಗೆ ತಲುಪಿತ್ತು. ಬಿಜೆಪಿ ಅಧಿ ಕಾರಕ್ಕೆ ಬಂದ ನಂತರ ಬದಲಾವಣೆ ದೇಶದ ಮೂಲೆ-ಮೂಲೆಗಳಲ್ಲಿ ಕಾಣಸಿಗುತ್ತಿದೆ. ಕಾಂಗ್ರೆಸ್‌ ಕುಟುಂಬ ರಾಜಕಾರಣವನ್ನು ಮುಂದಿಟ್ಟುಕೊಂಡು ನೆಹರು, ಇಂದಿರಾ ಗಾಂಧಿ , ರಾಜೀವ್‌ ಗಾಂಧಿ ಪ್ರಧಾನಿಗಳಾಗಿ ಈಗ ರಾಹುಲ್‌ ಗಾಂಧಿ ಯನ್ನು ಪ್ರಧಾನಿ ಮಾಡಲು ಹೊರಟಿರುವ ಕಾಂಗ್ರೆಸ್‌ ನೀತಿ ದುರಾದೃಷ್ಟಕರ ಎಂದರು. ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ್‌, ವಿಧಾನಸಭೆ ಉಪಸಭಾಪತಿ ಆನಂದ್‌ ಮಾಮನಿ, ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮಾತನಾಡಿ, ಸುರೇಶ್‌ ಅಂಗಡಿ ಅವರ ಅಭಿವೃದ್ಧಿಪರ ಕಾರ್ಯವನ್ನು ಮುಂದುವರಿಸಲು ಮಂಗಲಾ ಅಂಗಡಿ ಅವರ ಆಯ್ಕೆ ಮಾಡಲೇಬೇಕು ಎಂದರು.

ಸಚಿವರಾದ ಉಮೇಶ್‌ ಕತ್ತಿ, ಶಾಸಕರಾದ ಮಹಾದೇವಪ್ಪ ಯಾದವಾಡ, ಅಭಯ್‌ ಪಾಟೀಲ್‌, ಕಾಡಾ ಅಧ್ಯಕ್ಷ ಡಾ.ವಿಶ್ವನಾಥ್‌ ಪಾಟೀಲ್‌, ಲೋಕಸಭಾ ಅಭ್ಯರ್ಥಿ ಮಂಗಲ ಸುರೇಶ್‌ ಅಂಗಡಿ ಮಾತನಾಡಿದರು. ಸಂಸದರಾದ ಈರಣ್ಣ ಕಡಾಡಿ, ಅಣ್ಣಾ ಸಾಹೇಬ್‌ ಜೊಲ್ಲೆ, ಶಾಸಕರಾದ ಮಹಾಂತೇಶ ದೊಡ್ಡಗೌಡರ್‌, ವಿಧಾನಪರಿ?‌ತ್‌ ಸದಸ್ಯರಾದ ಮಹಾಂತೇಶ್‌ ಕವಟಗಿಮಠ, ಮಾಜಿ ಸಚಿವ ಶಶಿಕಾಂತ್‌ ನಾಯಕ್‌, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್‌ ಟೆಂಗಿನಕಾಯಿ ರಾಜ್ಯ ವಕ್ತಾರ ಎಂ.ಬಿ. ಜಿರಲಿ, ಮುಕ್ತಾರ ಪಠಾಣ, ಮಲ್ಲಿಕಾರ್ಜುನ ತುಬಾಕಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುಭಾಷ ಪಾಟೀಲ್‌, ಸಂದೀಪ್‌ ದೇಶಪಾಂಡೆ, ಗೂಳಪ್ಪ ಹೊಸಮನಿ, ಜಿಲ್ಲಾ ಖಜಾಂಚಿ ಮಲ್ಲಿಕಾರ್ಜುನ್‌ ಮಾಧಮ್ಮನವರ ಜಿಲ್ಲಾ ಮಧ್ಯಮ ಸಂಚಾಲಕ ಎಫ್‌.ಎಸ್‌. ಸಿದ್ದನಗೌಡರ, ಗುರು ಮೆಟಗುಡ್‌, ರತ್ನಾ ಗೋಧಿ , ರುದ್ರಣ್ಣ ಚಂದರಗಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ್‌ ನೇಸರಗಿ, ಮಲ್ಲಿಕಾರ್ಜುನ ದೇಸಾಯಿ, ಲಕ್ಕಪ್ಪ ಕಾರಗಿ,ಇನ್ನಿತರರು ಇದ್ದರು ಬೆ„ಲಹೊಂಗಲ ಮಂಡಲ ಅಧ್ಯಕ್ಷ ಮಡಿವಾಳಪ್ಪ ಚಳಕೊಪ್ಪ ಸ್ವಾಗತಿಸಿದರು. ಮಲ್ಲಿಕಾರ್ಜುನ ಗೌಡತಿ ನಿರೂಪಿಸಿದರು. ವೀರೇಶ್‌ ಹಲಕ್ಕಿ ವಂದಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.