ಬೆಳಗಾವಿ: ಹಾಡಹಗಲೇ ಬಾಲಕಿ ಅಪಹರಣ ಯತ್ನ -ಜನರಲ್ಲಿ ಆತಂಕ
ಆರೋಪಿಯ ಸುಳಿವು ಸಿಕ್ಕಿದ್ದು, ಆತನ ಬಂಧನಕ್ಕಾಗಿ ಮಾಹಿತಿ ಪಡೆದುಕೊಂಡಿದ್ದಾರೆ.
Team Udayavani, Jul 13, 2023, 6:33 PM IST
ಬೆಳಗಾವಿ: ಟ್ಯೂಷನ್‌ಗೆ ಹೊರಟಿದ್ದ 10 ವರ್ಷದ ಬಾಲಕಿಯನ್ನು ಅಪಹರಿಸಲು ಯತ್ನಿಸಿದ ಘಟನೆ ನಗರದ ಹಿಂದವಾಡಿಯ ಮಹಾವೀರ ಗಾರ್ಡನ್ ಬಳಿ ಮಂಗಳವಾರ ನಡೆದಿದ್ದು, ಅಪಹರಣಕಾರ ಹೆಗಲ ಮೇಲೆ ಎತ್ತಿಕೊಂಡು ಹೋಗುವಾಗ ಬಾಲಕಿ ತಪ್ಪಿಸಿಕೊಂಡಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದ ಅಪಹರಣಕಾರ ನಿನ್ನನ್ನು ಮನೆಗೆ ಬಿಟ್ಟು ಬರುತ್ತೇನೆ ಬಾ ಎಂದು ಹೆಗಲ ಮೇಲೆ ಎತ್ತಿಕೊಂಡಿದ್ದಾನೆ. ಬಾಲಕಿ ಜೋರಾಗಿ ಕಿರುಚಾಡಿದ್ದಾಳೆ. ಅಪರಿಚಿತ ವ್ಯಕ್ತಿ ಬಾಲಕಿಯನ್ನು ಎತ್ತಿಕೊಂಡು ಸುಮಾರು 50 ಮೀಟರ್ ವರೆಗೆ ಒಯ್ದಿದ್ದಾನೆ. ಬಾಲಕಿ ಕಾಲು ಬಡಿದು ಕೆಳಗೆ ಜಿಗಿದಿದ್ದಾಳೆ. ಬಾಲಕಿಯ ಕಿರುಚಾಟ ಕೇಳಿ ಸುತ್ತಲಿನ ಜನರು ಓಡಿ ಬರುವಷ್ಟರಲ್ಲಿ ಆತ ಅಲ್ಲಿಂದ ಓಡಿ ಹೋಗಿದ್ದಾನೆ.
ಹಾಡಹಗಲೇ ಬಾಲಕಿಯನ್ನು ಅಪಹರಿಸುತ್ತಿರುವುದು ಪಾಲಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಸ್ಥಳೀಯರು
ಬಂದಿದ್ದರಿಂದ ಬಾಲಕಿ ಬಾಚಾವ್ ಆಗಿದ್ದಾಳೆ. ಈ ಎಲ್ಲ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಕೂಡಲೇ ಟಿಳಕವಾಡಿ ಪೊಲೀಸ್ ಠಾಣೆ ದೂರು ದಾಖಲಾಗಿದೆ. ಈ ಬಗ್ಗೆ ಪಾಲಕರು ಹಾಗೂ ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿ, ಅಪರಿಚಿತ ವ್ಯಕ್ತಿಯನ್ನು ಬಂಧಿ ಸುವಂತೆ ಆಗ್ರಹಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದ ಪೊಲೀಸರು ಆರೋಪಿ ಬಂಧನಕ್ಕೆ ಜಾಲ ಬೀಸಿದ್ದಾರೆ. ಆರೋಪಿಯ ಶೋಧಕ್ಕೆ ಎರಡು ತಂಡಗಳನ್ನು ರಚಿಸಲಾಗಿದೆ. ಆರೋಪಿಯ ಸುಳಿವು ಸಿಕ್ಕಿದ್ದು, ಆತನ ಬಂಧನಕ್ಕಾಗಿ ಮಾಹಿತಿ
ಪಡೆದುಕೊಂಡಿದ್ದಾರೆ.
ಈ ಬಗ್ಗೆ ಉದಯವಾಣಿಯೊಂದಿಗೆ ಮಾತನಾಡಿದ ಅಪರಾಧ ಮತ್ತು ಸಂಚಾರ ವಿಭಾಗ ಡಿಸಿಪಿ ಪಿ.ವಿ. ಸ್ನೇಹ, ಹಿಂದವಾಡಿಯಲ್ಲಿ ಬಾಲಕಿಯನ್ನು ಎತ್ತಿಕೊಂಡು ಹೋಗುತ್ತಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಬುಧವಾರ ದೂರು ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಪಾಲಕರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಹಾಡಹಗಲೇ ಬೆಳಗಾವಿ ನಗರದ ಹೃದಯಭಾಗದಲ್ಲಿ ಇಂಥ ಘಟನೆ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ. ಮಕ್ಕಳ ಅಪಹರಣಕಾರರು ನಗರದಲ್ಲಿ ಬಾಲ ಬಿಚ್ಚಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಪೊಲೀಸರು ಇಂಥ ಚಟುವಟಿಕೆಗಳ ಮೇಲೆ ನಿಗಾ ಇಟ್ಟು ಸಂಶಯಾಸ್ಪದವಾಗಿ ಓಡಾಡುವವರನ್ನು ಬಂ ಧಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.