ಬೆಳಗಾವಿ ಕಂಟೋನ್ಮೆಂಟ್ ಆಸ್ಪತ್ರೆ ಕೋವಿಡ್ ವಾರಿಯರ್ಸ್ ಗೆ ಮೀಸಲು: ಡಿಸಿ ಎಂ.ಜಿ.ಹಿರೇಮಠ
Team Udayavani, Jul 19, 2020, 3:42 PM IST
ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಿರುವ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ನಗರದ ಇಎಸ್ಐ ಆಸ್ಪತ್ರೆ, ಮಿಲಿಟರಿ ಆಸ್ಪತ್ರೆ ಹಾಗೂ ಕಂಟೋನ್ಮೆಂಟ್ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಲಭ್ಯವಿರುವ ಹಾಸಿಗೆಗಳು ಹಾಗೂ ಇತರೆ ಮೂಲಸೌಕರ್ಯಗಳನ್ನು ಖುದ್ದಾಗಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸಂಬಂಧಿಸಿದ ಆಸ್ಪತ್ರೆಗಳ ಅಧಿಕಾರಿಗಳು ಮತ್ತು ವೈದ್ಯರ ಜತೆ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿಗಳು, ಸರ್ಕಾರದ ಮಾರ್ಗಸೂಚಿ ಪ್ರಕಾರ ಸೋಂಕಿತರಿಗೆ ಅಗತ್ಯವಿರುವ ಆರೈಕೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.
ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ನಾಲ್ಕೈದು ತಿಂಗಳುಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ವೈದ್ಯರು, ನರ್ಸ್ ಮತ್ತಿತರ ವೈದ್ಯಕೀಯ ಸಿಬ್ಬಂದಿಗೂ ಸೋಂಕು ತಗುಲುತ್ತಿರುವುದರಿಂದ ಅವರಿಗಾಗಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ಹೇಳಿದರು.
ಸುಮಾರು 40 ಹಾಸಿಗೆ ಸೌಲಭ್ಯ ಹೊಂದಿರುವ ನಗರದ ಕಂಟೋನ್ಮೆಂಟ್ ಆಸ್ಪತ್ರೆಯನ್ನು ಸೋಂಕಿತ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಮೀಸಲಿಡಲಾಗುವುದು ಎಂದು ಹೇಳಿದರು.
ಉಳಿದಂತೆ 25 ಹಾಸಿಗೆಗಳ ಇ.ಎಸ್.ಐ. ಮತ್ತು 50 ಹಾಸಿಗೆಗಳ ವ್ಯವಸ್ಥೆ ಹೊಂದಿರುವ ಮಿಲಿಟರಿ ಆಸ್ಪತ್ರೆಗಳನ್ನು ಇತರೆ ಸೋಂಕಿತರ ಚಿಕಿತ್ಸೆಗೆ ಒದಗಿಸಲಾಗುತ್ತದೆ ಎಂದರು.
ಮಿಲಿಟರಿ ಆಸ್ಪತ್ರೆಯ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿದ ಬಳಿಕ ಸೋಂಕಿತರನ್ನು ಇಲ್ಲಿ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನರ ಪಾಲಿಕೆ ಆಯುಕ್ತರಾದ ಜಗದೀಶ್ ಕೆ.ಎಚ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಕ್ಕಾರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ
Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.