ಬೆಳಗಾವಿ: ಕನ್ನಡಕ್ಕಾಗಿ ಬದುಕು ತೇಯ್ದ ಡಾ| ಕರ್ಕಿ

ನಮ್ಮ ಎದೆಯ ಮಂದಿರದಲ್ಲಿ ಕರ್ಕಿಯವರು ಕನ್ನಡದ ದೀಪ ಹಚ್ಚಿ ಹೋಗಿದ್ದಾರೆ

Team Udayavani, Jan 16, 2023, 3:32 PM IST

ಬೆಳಗಾವಿ: ಕನ್ನಡಕ್ಕಾಗಿ ಬದುಕು ತೇಯ್ದ ಡಾ| ಕರ್ಕಿ

ಬೆಳಗಾವಿ: ನಾಡಿನ ಖ್ಯಾತ ಸಾಹಿತಿ ಡಾ. ಡಿ. ಎಸ್‌. ಕರ್ಕಿಯವರಿಗೆ ಇದುವರೆಗೆ ಯಾವ ಪ್ರಶಸ್ತಿಯನ್ನೂ ನೀಡಿಲ್ಲ, ಈಗ ಮರಣೋತ್ತರವಾದರೂ ಅವರಿಗೆ ಪಂಪ ಪ್ರಶಸ್ತಿ ನೀಡಬೇಕು ಎಂದು ಜಾನಪದ ವಿದ್ವಾಂಸರಾದ ಡಾ| ಬಸವರಾಜ ಜಗಜಂಪಿ ಆಗ್ರಹಿಸಿದರು.

ಎಸ್‌. ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಸಭಾಗೃಹದಲ್ಲಿ ರವಿವಾರ ಡಾ. ಡಿ. ಎಸ್‌. ಕರ್ಕಿ ಪ್ರತಿ‚ಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ಡಾ. ಡಿ. ಎಸ್‌. ಕರ್ಕಿಯವರ 115ನೇ ಜನ್ಮ ದಿನೋತ್ಸವ ಹಾಗೂ ರಾಜ್ಯ ಮಟ್ಟದ ಕಾವ್ಯ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು ಕರ್ಕಿ, ಇಂಚಲ, ತುರಮರಿ ಅವರು ತಮ್ಮ ಇಡೀ ಬದುಕನ್ನು ಕನ್ನಡಕ್ಕಾಗಿ ತೇಯ್ದ ನಿಜ ಕನ್ನಡಿಗರು. ಇವರನ್ನು ನಾವು ಸ್ಮರಿಸಬೇಕು ಎಂದರು.

ಮುಂಬೈ ವಿಶ್ವವಿದ್ಯಾಲಯದಿಂದ ಪಿಎಚ್‌ ಡಿ ಪದವಿ ಪಡೆದು, ಗಿಲಗಂಚಿ ಅರಟಾಳ ಶಾಲೆಯ ಶಿಕ್ಷಕರಾಗಿ ಸೇವೆ ಆರಂಭಿಸಿ, ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಡೀನ್‌ ಆಗಿ ನಿವೃತ್ತಿಯಾಗಿದ್ದರು. ಡಾ. ಡಿ. ಎಸ್‌. ಕರ್ಕಿ ಅವರು ಭಾವಜೀವಿ, ಮೃದು ಸ್ವಭಾವದವರು. ಎಲ್ಲ ಪ್ರಚಾರದಿಂದ ದೂರ ಉಳಿದ ಶ್ರೇಷ್ಠ ಕವಿಗಳು ಮತ್ತು ಶಿಕ್ಷಕರಾಗಿದ್ದರು. ರಾಷ್ಟ್ರ, ನಾಡು, ನಿಸರ್ಗ ಪ್ರೇಮದ ಬಗ್ಗೆ ಅದ್ಭುತವಾದ ಕವನಗಳನ್ನು ರಚಿಸಿದ್ದರು. ಅಧಿಕೃತವಾಗಿ ರಾಷ್ಟ್ರಕವಿ ಕುವೆಂಪು ಅವರ ಕವಿತೆ ನಾಡಗೀತೆಯಾಗಿದ್ದರೂ, ಕನ್ನಡ ಕಾರ್ಯಕ್ರಮದ ಆರಂಭದಲ್ಲಿ ಕರ್ಕಿಯವರ ಹಚ್ಚೇವು ಕನ್ನಡ ಗೀತೆ ಕೇಳುವುದು ತುಂಬಾ ಹೆಮ್ಮೆ ಎನಿಸುತ್ತದೆ ಎಂದು
ಹೇಳಿದರು.

ಡಾ| ಲಲಿತಾ ಕೆ. ಹೊಸಪ್ಯಾಟಿ ಅವರ “ಅವಳ ಪಾದದ ಗುರುತು” ಕೃತಿಗೆ ರಾಜ್ಯ ಮಟ್ಟದ ಕಾವ್ಯ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ. ಕೆ. ರಾಮೇಗೌಡ ಅವರು, ಗದುಗಿನ ಲಿಂ. ಸಿದ್ಧಲಿಂಗ ಸ್ವಾಮೀಜಿ ಕನ್ನಡ ಸ್ವಾಮೀಜಿ ಆಗಿದ್ದರು. ಗೋಕಾಕ ವರದಿಗೆ ಮೊದಲು ಕರೆ ಕೊಟ್ಟಿದ್ದು ಕೂಡ ಇವರೇ ಎಂದು ಸ್ಮರಿಸಿಕೊಂಡರು. ಸ್ವಾತಂತ್ರ್ಯ ಹೋರಾಟ, ಕರ್ನಾಟಕ ಏಕೀಕರಣ ಸಂದರ್ಭದಲ್ಲಿ ದೊಡ್ಡ ಶಕ್ತಿಯಾಗಿ ಅಮೂಲ್ಯ ಸೇವೆ ಸಲ್ಲಿಸಿದ್ದು ನಾಗನೂರು ರುದ್ರಾಕ್ಷಿ ಮಠ. ಹೀಗಾಗಿ ನಾಗನೂರು ರುದ್ರಾಕ್ಷಿ ಮಠವನ್ನು ಕನ್ನಡಿಗರು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ಕನ್ನಡಿಗರ ಸಾಮರ್ಥ್ಯ ಎಂತಹುದು ಎಂಬುದನ್ನು ತೋರಿಸಲು ಕರ್ಕಿಯವರ ಹಚ್ಚೇವು ಕನ್ನಡದ ದೀಪ ಒಂದೇ ಒಂದು ಕವನ ಸಾಕು. ನರ ನರಗಳನೆಲ್ಲ ಹುರಿಗೊಳಿಸಿ ಹೊಸೆದು ಹಚ್ಚೇವು ಕನ್ನಡದ ದೀಪ ಪ್ರಪಂಚದ ಯಾವುದೇ ಮೂಲೆಯಲ್ಲಿ ಕನ್ನಡದ ಕಾರ್ಯಕ್ರಮ ನಡೆದರೆ ಅಲ್ಲಿ ಇದು ಮೊಳಗಲೇಬೇಕು. ಅಷ್ಟೊಂದು ಶಕ್ತಿ ಅದಕ್ಕಿದೆ. ಈ ಕವನದ ಮೂಲಕ ಕರ್ಕಿಯವರು, ವಿಶ್ವದ ಕನ್ನಡಿಗರ ಮನದಲ್ಲಿ ವಾಸವಾಗಿದ್ದಾರೆ ಎಂದು ಸಿ. ಕೆ. ರಾಮೇಗೌಡ ಶ್ಲಾಘಿಸಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಲಲಿತಾ ಕೆ. ಹೊಸಪ್ಯಾಟಿ, ನಮ್ಮ ಎದೆಯ ಮಂದಿರದಲ್ಲಿ ಕರ್ಕಿಯವರು ಕನ್ನಡದ ದೀಪ ಹಚ್ಚಿ ಹೋಗಿದ್ದಾರೆ. ಇದು ಎಂದೂ ಆರದ ದೀಪ. ಅವರ ಹೆಸರಿನಲ್ಲಿ ನನಗೆ ಸಿಕ್ಕಿರುವ ಈ ಪ್ರಶಸ್ತಿ ನನ್ನ ಜೀವ ಹೋದರೂ ಶಾಶ್ವತವಾಗಿಇರುವಂತಹ ಶ್ರೇಷ್ಠ ಪ್ರಶಸ್ತಿ ಎಂದರು.

ಇದೇ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಎಲ್‌. ಎಸ್‌. ಶಾಸ್ತ್ರೀ, ಪ್ರೊ. ಎಂ. ಎಸ್‌. ಇಂಚಲ ಅವರನ್ನು ಸತ್ಕರಿಸಿ ಗೌರವಿಸಲಾಯಿತು. ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಹಿರಿಯ ಸಾಹಿತಿ ಪ್ರೊ. ಬಿ. ಎಸ್‌. ಗವಿಮಠ ಅಧ್ಯಕ್ಷತೆ ವಹಿಸಿದ್ದರು.

ಸಾಹಿತಿಗಳಾದ ಸಿದ್ರಾಮಪ್ಪ ಹೊನ್ನಳ್ಳಿ, ಸುನೀಲ ಸಾಣಿಕೊಪ್ಪ, ಮಲ್ಲೇಶ ಕೋಮಾರಶೆಟ್ಟಿ, ಶೆ„ಲಾ ಭಟ್ಟ, ಉಮಾ ಅಂಗಡಿ, ಡಾ. ಅಡಿವೆಪ್ಪ ಇಟಗಿ ಕವಿಗೋಷ್ಠಿಯಲ್ಲಿ ಕವನ ವಾಚಿಸಿದರು. ಟ್ರಸ್ಟ್‌ ಅಧ್ಯಕ್ಷ ಶಿವಪುತ್ರ ಕರ್ಕಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಟ್ರಸ್ಟ್‌ ಉಪಾಧ್ಯಕ್ಷ ರವೀಂದ್ರ ಕರ್ಕಿ, ಟ್ರಸ್ಟಿಗಳಾದ ವಿಜಯಾದೇವಿ ಕರ್ಕಿ, ರಾಜಶೇಖರ ಕರ್ಕಿ, ರಾಜಶೇಖರ ಕರ್ಕಿ, ಶಿವಲೀಲಾ ಹೂಲಿ, ಮನೋಹರ ಕರ್ಕಿ, ಮಲ್ಲಿಕಾರ್ಜುನ ಬೆಲ್ಲದ, ಶೋಭಾ ಉಳ್ಳಾಗಡ್ಡಿ, ಜ್ಯೋತಿಲಕ್ಷಿ¾ ಗೊಂದಿ, ರಾಜೇಶ್ವರಿ ಕರ್ಕಿ,ಹಿರಿಯ ಸಾಹಿತಿ ಯ. ರು. ಪಾಟೀಲ ಉಪಸ್ಥಿತರಿದ್ದರು. ಗೌರಮ್ಮ ಕರ್ಕಿ ನಿರೂಪಿಸಿದರು. ಟ್ರಸ್ಟ ಪ್ರಧಾನ ಕಾರ್ಯದರ್ಶಿ ಬಸವರಾಜ ಗಾರ್ಗಿ ಸ್ವಾಗತಿಸಿದರು. ಖಜಾಂಚಿ ಆನಂದ ಕರ್ಕಿ ವಂದಿಸಿದರು. ನಯನಾ ಗಿರಿಗೌಡರ ಹಾಗೂ ಸಂಗೀತ ಬಳಗ ವಚನ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್‌

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.