ಬೆಳಗಾವಿಯನ್ನು ಸಂಕಟಕ್ಕೆ ನೂಕಿದ ಬರ
|14 ತಾಲೂಕು ಬರಪೀಡಿತ |ಬರ ಪರಿಹಾರವಿಲ್ಲ-ಟ್ಯಾಂಕರ್ ನೀರು ಸಾಲುತ್ತಿಲ್ಲ |ಗೋಶಾಲೆ ಬದಲು ಮೇವು ಬ್ಯಾಂಕ್
Team Udayavani, May 17, 2019, 2:57 PM IST
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ನರೇಗಾ ಯೋಜನೆಯಡಿ ನಡೆದಿರುವ ಕಾಮಗಾರಿ.
ಬೆಳಗಾವಿ: ಸತತವಾಗಿ ಕಾಡುತ್ತಿರುವ ಭೀಕರ ಬರಗಾಲ ಗಡಿನಾಡು ಬೆಳಗಾವಿ ಜಿಲ್ಲೆಯನ್ನು ಸಂಕಟದಿಂದ ನರಳುವಂತೆ ಮಾಡಿದೆ.
ಜಿಲ್ಲೆಯಲ್ಲಿ ಐದಾರು ನದಿ, ಸಮೃದ್ಧ ಅರಣ್ಯ ಪ್ರದೇಶವಿದ್ದರೂ ಎಲ್ಲ ಕಡೆ ಜನ ಹಾಗೂ ಜಾನುವಾರು ಕುಡಿಯುವ ನೀರಿಗೆ ಪರದಾಡಬೇಕಾಗಿದೆ. ಜಾನುವಾರುಗಳಿಗೆ ಮೇವಿನ ಅಭಾವ ಅಷ್ಟಾಗಿ ಕಂಡುಬರದೇ ಇದ್ದರೂ ಕೆಲ ಭಾಗಗಳಲ್ಲಿ ಸಮರ್ಪಕವಾಗಿ ಮೇವು ಲಭ್ಯವಾಗುತ್ತಿಲ್ಲ ಎಂಬ ದೂರುಗಳು ಸಹ ರೈತರಿಂದ ಕೇಳಿಬಂದಿವೆ.
ಮುಂಗಾರು ಹಾಗೂ ಹಿಂಗಾರು ಮಳೆಯ ವೈಫಲ್ಯದಿಂದ ಜಿಲ್ಲೆಯ ಎಲ್ಲ 14 ತಾಲೂಕುಗಳನ್ನು ಬರ ಪೀಡಿತವೆಂದು ಘೋಷಣೆ ಮಾಡಲಾಗಿದೆ. ಕೇಂದ್ರ ಬರ ಅಧ್ಯಯನ ತಂಡಗಳು ಸಹ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಬೆಳೆಹಾನಿ, ಮೇವಿನ ಲಭ್ಯತೆ, ಕುಡಿಯುವ ನೀರಿನ ತೊಂದರೆಯ ಬಗ್ಗೆ ಮಾಹಿತಿ ಪಡೆದುಕೊಂಡಿವೆ. ಆದರೆ ನಿರೀಕ್ಷೆ ಮಾಡಿದಂತೆ ಬರ ಪರಿಹಾರ ಬರುತ್ತಿಲ್ಲ. ಟ್ಯಾಂಕರ್‌ಗಳಿಂದ ಕೊಡುತ್ತಿರುವ ನೀರು ಸಾಕಾಗುತ್ತಿಲ್ಲ ಎಂಬ ಅಸಮಾಧಾನ ಅಲ್ಲಲ್ಲಿ ವ್ಯಕ್ತವಾಗುತ್ತಲೇ ಇದೆ.
ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದೆ. ಆದರೆ ಜಿಲ್ಲಾಡಳಿತ ನೀಡುವ ಮಾಹಿತಿ ಪ್ರಕಾರ ಯಾವುದೇ ತಾಲೂಕಿನಲ್ಲಿ ಮೇವಿನ ಅಭಾವ ಇಲ್ಲ. ಜಿಲ್ಲೆಯಲ್ಲಿ ಒಟ್ಟು 14.22 ಲಕ್ಷ ಜಾನುವಾರುಗಳಿದ್ದು ಇನ್ನೂ ಏಳು ವಾರಗಳಿಗೆ ಸಾಕಾಗುವಷ್ಟು ಮೇವಿನ ಲಭ್ಯತೆ ಜಿಲ್ಲೆಯಲ್ಲಿದೆ. ರೈತರ ಬೇಡಿಕೆಗೆ ಅನುಗುಣವಾಗಿ ಜಾನುವಾರುಗಳಿಗೆ ಮೇವು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಬರ ನಿರ್ವಹಣೆ ಕಾಮಗಾರಿ ಹಾಗೂ ಜನರಿಗೆ ಯಾವುದೇ ಕಾರಣಕ್ಕೂ ಹೊರಗಡೆ ಕೆಲಸಕ್ಕೆ ಹೋಗದಂತೆ ಇಲ್ಲಿಯೇ ಉದ್ಯೋಗ ಸೃಷ್ಟಿ ಮಾಡಲಾಗಿದೆ. ನರೇಗಾ ಯೋಜನೆಯಡಿ ಕಾಮಗಾರಿಗಳು ಸಮರೋಪಾದಿಯಲ್ಲಿ ನಡೆದಿವೆ. ಜಾನುವಾರುಗಳಿಗೆ ಸಹ ಮೇವಿನ ಕೊರತೆಯಾಗದಂತೆ ಹೆಚ್ಚಿನ ಮುಂಜಾಗ್ರತೆ ವಹಿಸಲಾಗಿದೆ ಎಂಬುದು ಜಿಲ್ಲಾಧಿಕಾರಿ ವಿಶಾಲ್ ಆರ್. ಅವರ ಹೇಳಿಕೆ.
6.5 ಕೋಟಿ ಕಾಮಗಾರಿ: ಜಿಲ್ಲೆಯಲ್ಲಿ 6.5 ಕೋಟಿ ರೂ. ವೆಚ್ಚದಲ್ಲಿ ಬರ ಕಾಮಗಾರಿಗಳು ಪ್ರಗತಿಯಲ್ಲಿವೆ. ಎಲ್ಲ ತಾಲೂಕುಗಳಲ್ಲಿ ನರೇಗಾ ಯೋಜನೆಯಡಿ ಉದ್ಯೋಗ ಖಾತ್ರಿ ಕಾಮಗಾರಿ ಆರಂಭಿಸಲಾಗಿದೆ. ಈ ವರ್ಷ ಅಂದರೆ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ 8.96 ಲಕ್ಷ ಮಾನವ ದಿನಗಳನ್ನು ಸೃಷ್ಟಿಮಾಡಿ ಶೇಕಡಾ 70.59 ರಷ್ಟು ಸಾಧನೆ ಮಾಡಲಾಗಿದೆ. ಇದಕ್ಕಾಗಿ 19.38 ಕೋಟಿ ರೂ. ವೆಚ್ಚ ಮಾಡಲಾಗಿದೆ. ಮೇ ತಿಂಗಳ ಅಂತ್ಯದವರೆಗೆ ಒಟ್ಟು 12.69 ಲಕ್ಷ ಮಾನವ ದಿನಗಳ ಸೃಷ್ಟಿ ಗುರಿ ನೀಡಲಾಗಿದೆ.
ಬರ ನಿರ್ವಹಣೆ ಕಾಮಗಾರಿ ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳಲು ಪಂಚಾಯತ್ ರಾಜ್ ಮತ್ತು ಇಂಜನಿಯರಿಂಗ್ ಇಲಾಖೆಯ ಹಿರಿಯ ಹಾಗೂ ಕಿರಿಯ ಇಂಜನಿಯರ್‌ಗಳನ್ನು ನಿಯೋಜನೆ ಮಾಡಲಾಗಿದೆ. ಈ ಅಧಿಕಾರಿಗಳು ಅವರ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡುವರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಂದ್ರ ಕೆ.ವಿ. ಹೇಳಿದ್ದಾರೆ.
ಜಿಲ್ಲೆಯಲ್ಲಿ ಯಾವುದೇ ಗೋಶಾಲೆ ಆರಂಭ ಮಾಡಿಲ್ಲ. ಗೋಶಾಲೆ ಆರಂಭಿಸಿದರೆ ಅದರ ನಿರ್ವಹಣೆ ಬಹಳ ಕಷ್ಟ. ಕುಡಿಯುವ ನೀರಿನ ಸಮಸ್ಯೆ ಸಹ ಗಂಭೀರವಾಗಲಿದೆ. ಅದರ ಬದಲು ಮೇವು ಬ್ಯಾಂಕ್ ಸ್ಥಾಪಿಸುವುದೇ ಉತ್ತಮ ಎಂಬ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಆಯಾ ಕ್ಷೇತ್ರದ ಶಾಸಕರ ಸಭೆ ನಡೆಸಿ ಗೋಶಾಲೆ ಬದಲು ಮೇವು ಬ್ಯಾಂಕ್ ತೆರೆಯಲು
ನಿರ್ಧರಿಸಲಾಗಿದೆ. ಅಥಣಿ ಹಾಗೂ ಚಿಕ್ಕೋಡಿ ತಾಲೂಕಿನಲ್ಲಿ ಮೇವಿನ ಕೊರತೆ ಇದೆ. ಆದ್ದರಿಂದ ಅಗತ್ಯ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಅಥಣಿ ತಾಲೂಕಿನಲ್ಲಿ 24 ಹಾಗೂ ಚಿಕ್ಕೋಡಿ ತಾಲೂಕಿನಲ್ಲಿ ಒಂದು ಮೇವಿನ ಬ್ಯಾಂಕ್ ತೆರೆಯಲಾಗಿದೆ ಎಂದು ಪಶು ವೈದ್ಯಕೀಯ ಹಾಗೂ ಪಶುಪಾಲನಾ ಸೇವೆಗಳ ಇಲಾಖೆ ಉಪನಿರ್ದೇಶಕ ಡಾ. ಡಿ.ಎನ್. ಹವಾಲ್ದಾರ ಹೇಳಿದರು.
ಜಿಲ್ಲೆಯಲ್ಲಿ ಉಂಟಾಗಿರುವ ತೀವ್ರ ಬರದ ಹಿನ್ನಲೆಯಲ್ಲಿ ಅಥಣಿ ಹಾಗೂ ಚಿಕ್ಕೋಡಿಯ ಒಟ್ಟು 25 ಮೇವಿನ ಬ್ಯಾಂಕ್ ಹೊರತುಪಡಿಸಿ 16 ಕಡೆಗಳಲ್ಲಿ ಮೇವಿನ ಬ್ಯಾಂಕ್ ಸ್ಥಾಪಿಸಲು ಸ್ಥಳಗಳನ್ನು ಗುರುತಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಭಾಗದ ರೈತರಿಂದ ಬೇಡಿಕೆ ಬಂದರೆ ಅದಕ್ಕೆ ಅನುಗುಣವಾಗಿ ಮೇವು ಬ್ಯಾಂಕ್ ಸ್ಥಾಪಿಸಲಾಗುವುದು. ಈ ಎಲ್ಲ ಮೇವಿನ ಬ್ಯಾಂಕ್‌ಗಳ ನಿರ್ವಹಣೆಯನ್ನು ಆಯಾ ತಾಲೂಕಿನ ತಹಶೀಲ್ದಾರರು ನೋಡಿಕೊಳ್ಳುತ್ತಿದ್ದಾರೆ ಎಂಬುದು ಅಧಿಕಾರಿಗಳ ಹೇಳಿಕೆ.
ಜಾನುವಾರುಗಳಿಗೆ ಮೇವಿನ ಅಭಾವ ಆಗಬಾರದು ಎಂಬ ಕಾರಣದಿಂದ ಮೇವು ಬ್ಯಾಂಕ್ ಮೂಲಕ ಪ್ರತಿ ಜಾನುವಾರಿಗೆ ಪ್ರತಿ ದಿನಕ್ಕೆ ಐದು ಕೆಜಿ ಮೇವು ವಿತರಿಸಲಾಗುತ್ತಿದ್ದು ಪ್ರತಿ ಕೆಜಿ ಮೇವಿಗೆ ಎರಡು ರೂ. ಶುಲ್ಕ ಪಡೆಯಲಾಗುತ್ತಿದೆ. ಇದಕ್ಕೆ ರೈತರು ಸಹ ಒಪ್ಪಿಗೆ ಸೂಚಿಸಿ ತಮಗೆ ಅಗತ್ಯವಿರುವಷ್ಟು ಮೇವು ಪಡೆದುಕೊಳ್ಳುತ್ತಿದ್ದಾರೆ. ಎಲ್ಲಿಯೂ ಸಮಸ್ಯೆ ಕಂಡುಬಂದಿಲ್ಲ ಎಂದು ಡಾ. ಡಿ.ಎನ್. ಹವಾಲ್ದಾರ ಹೇಳಿದರು.
•ಕೇಶವ ಆದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.