ಮೆಗಾ ಲಸಿಕಾ ಮೇಳದಲ್ಲಿ ದೇಶಕ್ಕೆ ಬೆಳಗಾವಿ ದ್ವಿತೀಯ ಸ್ಥಾನ
Team Udayavani, Sep 18, 2021, 11:41 AM IST
Representative Image Used
ಬೆಳಗಾವಿ: ದೇಶದಲ್ಲಿ ಸೆ. 17ರಂದು ನಡೆದ ಮೆಗಾ ಲಸಿಕಾ ಮೇಳದಲ್ಲಿ ಇಡೀ ದೇಶದಲ್ಲಿಯೇ ಬೆಳಗಾವಿ ಜಿಲ್ಲೆ ಎರಡನೇ ಸ್ಥಾನ ಗಳಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು 4,09,977 ಲಸಿಕೆ ನೀಡುವ ಮೂಲಕ ಪ್ರಥಮ ಸ್ಥಾನ ಪಡೆದಿದೆ.
ಬೆಳಗಾವಿ ಜಿಲ್ಲೆಯಲ್ಲಿ ಸೆ.17 ರಂದು ಒಂದೇ ದಿನದಲ್ಲಿ 2,57,604 ಲಸಿಕೆ ನೀಡುವ ಮೂಲಕ ದ್ವಿತೀಯ ಸ್ಥಾನದಲ್ಲಿದೆ.
ಬೆಳಗಾವಿ ಜಿಲ್ಲೆಯು ಮೂರು ಲಕ್ಷ ಲಸಿಕೆಯ ಗುರಿಯನ್ನು ಹೊಂದಿತ್ತು. ನಿರೀಕ್ಷಿತ ಗುರಿಸಾಧನೆಯಾಗದಿದ್ದರೂ ಒಟ್ಟಾರೆ ಲಸಿಕೆ ಪ್ರಮಾಣದಲ್ಲಿ ಇಡೀ ದೇಶದಲ್ಲಿಯೇ ಅತೀ ಹೆಚ್ಚು ಲಸಿಕೆ ನೀಡುವುದರಲ್ಲಿ ದ್ವಿತೀಯ ಸ್ಥಾನ ಗಳಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದ್ದಾರೆ.
ಇದನ್ನೂ ಓದಿ:ತಿಗರಪಾಳ್ಯ ಘಟನೆ: 5 ದಿನ ಶವಗಳ ಮುಂದೆ ಕಣ್ಣೀರಿಟ್ಟು ಬದುಕಿದ ಎರಡೂವರೆ ವರ್ಷದ ಪ್ರೇಕ್ಷಾ!
ಈ ಸಾಧನೆಗೆ ಶ್ರಮಿಸಿದ ಕಂದಾಯ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ನಗರ ಸ್ಥಳೀಯ ಸಂಸ್ಥೆಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಮೆಗಾ ಲಸಿಕಾಮೇಳ ಯಶಸ್ವಿಯಾಗಲು ಸಹಕರಿಸಿದ ಎಲ್ಲ ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೆ ಅವರು ಧನ್ಯವಾದ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
Belagavi: ಎಂಇಎಸ್ ಕಾರ್ಯಕರ್ತರ ಪುಂಡಾಟ
Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ
Belagavi; ಎಂಇಎಸ್ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್ ಜಾರಕಿಹೊಳಿ
ಬೆಳಗಾವಿ: ಆರ್ಥಿಕ ಮುಗ್ಗಟ್ಟು ಮಧ್ಯೆಯೇ ದುಂದುವೆಚ್ಚ: ಪಾಲಿಕೆಯಿಂದ ಲಕ್ಷ, ಲಕ್ಷ ವೆಚ್ಚ!
MUST WATCH
ಹೊಸ ಸೇರ್ಪಡೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.