ಸೂರು ನಿರ್ಮಿಸಿ ಸೌಕರ್ಯ ಕಲ್ಪಿಸಿ

ಮಾ.31ರೊಳಗೆ ಯೋಜನೆ ರೂಪಿಸಿ16,660 ಮನೆಗಳಿಗೆ ಅನುಮೋದನೆ

Team Udayavani, Feb 16, 2020, 3:13 PM IST

16-February-17

ಬೆಳಗಾವಿ: ಒಂದು ಮನೆ ಎಂದರೆ ನಾಲ್ಕು ಗೋಡೆಗಳನ್ನು ಕಟ್ಟಿ ನಿರ್ಮಾಣ ಮಾಡುವುದಲ್ಲ. ಅದಕ್ಕೆ ಅಗತ್ಯ ಇರುವ ಶುದ್ಧ ಕುಡಿಯುವ ನೀರು, ವಿದ್ಯುತ್‌ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಬೇಕು. ದೇಶದ ಪ್ರತಿ ಕುಟುಂಬಕ್ಕೂ 2022ರ ವೇಳೆಗೆ ಮನೆ ಒದಗಿಸುವ ಕೆಲಸ ಆಗಬೇಕು ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ಸೂಚನೆ ನೀಡಿದರು.

ಇಲ್ಲಿಯ ಸುವರ್ಣ ವಿಧಾನಸೌಧ ಸಭಾಂಗಣದಲ್ಲಿ ಶನಿವಾರ ನಡೆದ 2019-20ನೇ ಸಾಲಿನ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ)ಯ ತ್ತೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪ್ರತಿಯೊಂದು ಕುಟುಂಬಕ್ಕೆ ಸೂರು ಕಲ್ಪಿಸುವ ಗುರಿ ಪ್ರಧಾನಿ ಮೋದಿ ಹೊಂದಿದ್ದಾರೆ. ಈ ಕನಸು ನನಸಾಗಿಸಲು ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು ಎಂದರು.

ಯಾವುದೇ ಯೋಜನೆಗಳಿರಲಿ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮಾತ್ರ ಪರಿಣಾಮಕಾರಿ ಅನುಷ್ಠಾನ ಸಾಧ್ಯವಾಗಲಿದೆ. ಜಿಲ್ಲೆಯಲ್ಲಿ ವಸತಿ ಹಾಗೂ ಕುಡಿಯುವ ನೀರು ಯೋಜನೆ ಅನುಷ್ಠಾನಗೊಳಿಸಲು ಸಂಬಂಧಿಸಿದಂತೆ
ಸಮಗ್ರ ಯೋಜನೆಯನ್ನು ಮಾ.31ರೊಳಗೆ ರೂಪಿಸಬೇಕು ಎಂದು ಹೇಳಿದರು.

ನಗರ ವಸತಿ ಯೋಜನೆಯಡಿ ಜಿಲ್ಲೆಯಲ್ಲಿ 16,660 ಮನೆಗಳು ಅನುಮೋದನೆಗೊಂಡಿದ್ದು, 2,624 ಮನೆಗಳು ಪ್ರಗತಿ ಹಂತದಲ್ಲಿವೆ. ಮಾರ್ಚ್‌ ಅಂತ್ಯಕ್ಕೆ ಶೇ.100 ಗುರಿ ಸಾಧಿ ಸಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ 3.50 ಲಕ್ಷ ಹಾಗೂ ಸಾಮಾನ್ಯ ವರ್ಗದವರಿಗೆ ಮನೆ ನಿರ್ಮಿಸಿಕೊಡಲು 2.70 ಲಕ್ಷ ನೆರವು ನೀಡಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.

ಜಿಲ್ಲಾಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ ಮಾತನಾಡಿ, ಜಿಲ್ಲೆಯಲ್ಲಿ 16 ಸಾವಿರ ಜನ ಅರ್ಜಿ
ಸಲ್ಲಿಸಿದ್ದು, ಈಗಾಗಲೇ ಇವುಗಳನ್ನು ಪರಿಶೀಲಿಸಿ ಮೂರು ಸಮಗ್ರ ಯೋಜನೆಗಳನ್ನು ಅನುಮೋದನೆಗಾಗಿ ಕಳುಹಿಸಲಾಗಿದೆ. ಬೆಳಗಾವಿಯಲ್ಲಿ ನಿವೇಶನ ಹೊಂದಿಲ್ಲದೇ ಇರುವ 19,656 ಜನರು ಮನೆಗಳಿಗೆ ಬೇಡಿಕೆ ಸಲ್ಲಿಸಿದ್ದಾರೆ. ಇದರಲ್ಲಿ 1,808 ಜನರ ಅರ್ಜಿ ಪರಿಶೀಲಿಸಿ ಅನುಮೋದಿಸಲಾಗಿದೆ ಎಂದರು.

ಆಗ ಸಚಿವ ಸುರೇಶ ಅಂಗಡಿ ಮಾತನಾಡಿ, ಯೋಜನೆಗಳ ಅನುಷ್ಠಾನ ಸುಗಮವಾಗಿ
ನಡೆಸುವ ಉದ್ದೇಶದಿಂದ ಸಭೆ ನಡೆಸಲಾಗುತ್ತಿದೆ. ಯೋಜನೆಗೆ ಸಂಬಂಧಿಸಿದಂತೆ ಏನಾದರೂ ತಾಂತ್ರಿಕ ತೊಂದರೆಗಳಿದ್ದರೆ ಜನಪ್ರತಿನಿ ಧಿಗಳ ಗಮನಕ್ಕೆ ತರಬೇಕು. ಕೇಂದ್ರ ಸರ್ಕಾರದ 33 ಯೋಜನೆಗಳ ಅನುಷ್ಠಾನಕ್ಕೆ ಸಂಬಂ ಧಿಸಿದಂತೆ ದಿಶಾ ಸಮಿತಿ ಸಭೆಯಲ್ಲಿ ಚರ್ಚಿಸಿ, ಸೂಕ್ತ ಕ್ರಮ ವಹಿಸಲಾಗುವುದು ಎಂದರು.

ಜಿಪಂ ಉಪ ಕಾರ್ಯದರ್ಶಿ ಎಸ್‌.ಬಿ. ಮುಳ್ಳಳ್ಳಿ ಮಾತನಾಡಿ, ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 2.20 ಲಕ್ಷ ಮನೆಗಳ ನಿರ್ಮಾಣ ಅಗತ್ಯವಿದೆ. ಉದ್ಯೋಗ ಖಾತ್ರಿ ಯೋಜನೆಯಡಿ 71.46 ಲಕ್ಷ ಮಾನವ ದಿನಗಳ ಗುರಿ ಸಾಧನೆ ಮಾಡಲಾಗಿದ್ದು, ಪ್ರವಾಹದಿಂದ 45 ಲಕ್ಷ ಮಾನವ ದಿನಗಳ ಸೃಷ್ಟಿ ಸಾಧ್ಯವಾಗಿಲ್ಲ. ಇನ್ನೊಂದು ತಿಂಗಳಲ್ಲಿ ಒಂದು ಕೋಟಿ ಮಾನವ ದಿನಗಳನ್ನು ಸೃಷ್ಟಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಸಂಸದ ಅಣ್ಣಾಸಾಹೇಬ್‌ ಜೊಲ್ಲೆ ಮಾತನಾಡಿ, ವೇತನ ಹಾಗೂ ಯಂತ್ರೋಪಕರಣಗಳ ಹಣ ಪಾವತಿ ವಿಳಂಬಕ್ಕೆ ಏನು ಕಾರಣ ಎಂದು ಪ್ರಶ್ನಿಸಿದರಲ್ಲದೇ ಅನುದಾನ ಲಭ್ಯವಿದ್ದರೆ ತಕ್ಷಣ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಜಿಪಂ ಅಧ್ಯಕ್ಷೆ ಆಶಾ ಐಹೊಳೆ ಮಾತನಾಡಿ, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಂದ ವೈಯಕ್ತಿಕವಾಗಿ ವ್ಯಾಪಾರ-ವಹಿವಾಟು ಆರಂಭಿಸುವ ಬದಲು ಸಾಮೂಹಿಕವಾಗಿ ತೊಡಗಿಕೊಂಡರೆ ದೊಡ್ಡ ಪ್ರಮಾಣ ವ್ಯವಹಾರ ಸಾಧ್ಯವಾಗಲಿದ್ದು, ಇದರಿಂದ ಇನ್ನೂ ಹೆಚ್ಚಿನ ಉದ್ಯೋಗಾವಕಾಶ ಮತ್ತು ಸ್ವಾವಲಂಬನೆ ಸಾಧ್ಯವಾಗಲಿದೆ ಎಂದು ಸಲಹೆ ನೀಡಿದರು.

ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ರಸ್ತೆಗಳನ್ನು ಆಯ್ಕೆ ಮಾಡುವಾಗ ಸಂಬಂಧಪಟ್ಟ ಕ್ಷೇತ್ರದ ಸಂಸದರ ಸಲಹೆ ಪಡೆದುಕೊಳ್ಳಬೇಕು ಎಂದು ಸಚಿವ ಅಂಗಡಿ ಸೂಚನೆ ನೀಡಿದರು. ಈ ಯೋಜನೆಯಡಿ ಪ್ರತಿ ತಾಲೂಕಿನಲ್ಲಿ 30 ಕಿ.ಮೀ. ರಸ್ತೆ ನಿರ್ಮಿಸಲಾಗುತ್ತಿದ್ದು, ಕೆಲವು ತಾಲೂಕುಗಳಲ್ಲಿ 45 ಕಿ.ಮೀ. ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟಾರೆ 330 ಕಿ.ಮೀ. ರಸ್ತೆ ನಿರ್ಮಿಸಲಾಗುವುದು. ಪ್ರತಿ ಕಿ.ಮೀ. 60 ರಿಂದ 70 ಸಾವಿರ ರೂಪಾಯಿ ಅನುದಾನ ಲಭ್ಯವಾಗಲಿದೆ ಎಂದು ಅಧಿ ಕಾರಿಗಳು ವಿವರಿಸಿದರು.

ಸ್ಮಾರ್ಟ್‌ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಮಾತನಾಡಿ, ಸ್ಮಾರ್ಟ್‌ಸಿಟಿ
ಯೋಜನೆಯಡಿ ಬೆಳಗಾವಿ ನಗರದಲ್ಲಿ 959 ಕೋಟಿ ರೂ. ವೆಚ್ಚದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕಾಲಮಿತಿಯಲ್ಲಿ ಎಲ್ಲ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಕೋಟೆ(ಕಿಲ್ಲಾ) ಪ್ರದೇಶವನ್ನು ಸ್ಮಾರ್ಟ್‌ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲು ಅನುಮತಿ
ನೀಡಲು ಹಿರಿಯ ಸೇನಾಧಿ ಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದಷ್ಟು ಬೇಗ ಪ್ರತ್ಯೇಕ ಸಭೆ ಕರೆದು ಈ ಬಗ್ಗೆ ಚರ್ಚಿಸಲಾಗುವುದು ಎಂದು ಸಚಿವ ಅಂಗಡಿ ತಿಳಿಸಿದರು.
ಉತ್ತರ ಶಾಸಕ ಅನಿಲ ಬೆನಕೆ ಮಾತನಾಡಿ, ನಗರದಲ್ಲಿ ವಸತಿ ಹಾಗೂ ಕುಡಿಯುವ ನೀರು ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸ್ವತ್ಛ ಭಾರತ ಯೋಜನೆ, ಕೊಳವೆ ಬಾವಿಗಳಿಗೆ ವಿದ್ಯುತ್‌ ಸಂಪರ್ಕ, ಕೃಷಿ ಸಿಂಚಾಯಿ ಯೋಜನೆ, ಮಳೆನೀರು ಕೊಯ್ಲು, ಡಿಜಿಟಲ್‌ ಇಂಡಿಯಾ, ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್‌ ಸಂಪರ್ಕ ಕಲ್ಪಿಸುವುದು, ಬೆಳೆ ವಿಮೆ ಯೋಜನೆ, ಸ್ಮಾರ್ಟ್‌ಸಿಟಿ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಕುರಿತು ಚರ್ಚಿಸಲಾಯಿತು. ಬುಡಾ ಅಧ್ಯಕ್ಷ ಗೂಳಪ್ಪ ಹೊಸಮನಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖಾ¤ರ ಪಠಾಣ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

PUNJAB

Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

puttige-6-

Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.