ಮಹನೀಯರ ಜೀವನವೇ ಸಂದೇಶ
ಮಹಾತ್ಮರ ಮಾರ್ಗದಲ್ಲಿ ಸಾಗಿಶಿಸ್ತು ರೂಢಿಸಿಕೊಂಡರೆ ಜಗತ್ತೇ ಗೆಲ್ಲಬಹುದು
Team Udayavani, Feb 16, 2020, 5:26 PM IST
ಬೆಳಗಾವಿ: ಮಹನೀಯರ ಜೀವನವೇ ಒಂದು ಸಂದೇಶ. ಅಂಥವರನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೇ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲರೂ ನಡೆಯಬೇಕಿದೆ ಎಂದು ಕೆ.ಎಸ್.ಎಫ್.ಸಿ ನಿವೃತ್ತ ಪ್ರಧಾನ ವ್ಯವಸ್ಥಾಪಕ ಪಿ.ಆರ್. ಜಾಧವ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಶನಿವಾರ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಏರ್ಪಡಿಸಲಾಗಿದ್ದ ಸಂತ ಸೇವಾಲಾಲ ಜಯಂತಿ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ಸಮಾಜದ ಮಹನೀಯರು ಮನುಕುಲದ ಉದ್ಧಾರಕ್ಕಾಗಿ ಒಳ್ಳೆಯ ಸಂದೇಶಗಳನ್ನು ಕೊಟ್ಟು ಹೋಗಿದ್ದಾರೆ. ಅವರ ಸಂದೇಶ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.
ಸೇವಾಲಾಲರು ಕೇವಲ ಬಂಜಾರ ಸಮುದಾಯಕ್ಕೆ ಮಾತ್ರ ಕೆಲಸ ಮಾಡಲಿಲ್ಲ. ಬದಲಾಗಿ ಎಲ್ಲ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಸಮಾಜಕ್ಕೆ ಅವರ ಕೊಡುಗೆ ಅಪಾರ. ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಆಧುನಿಕ ಯುಗದಲ್ಲಿ ಕಲಿಯಬೇಕಾದದ್ದು ತುಂಬಾ ಇದೆ. ಆದ್ದರಿಂದ ಶಿಸ್ತು ರೂಢಿಸಿಕೊಂಡರೆ ಜಗತ್ತನ್ನು ಗೆಲ್ಲಲು ಸಾಧ್ಯ ಎಂದು ಹೇಳಿದರು.
ಸಮಾಜದ ಮುಖಂಡರಾದ ಎಂ. ಟಿ.ರಾಠೊಡ ಮಾತನಾಡಿ, ಸಮಾಜದ ಕಟ್ಟಳೆಗಳನ್ನು ಮುರಿಯದೇ ಸೇವಾಲಾಲರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು ಎಂದು ಹೇಳಿದರು.
ಹೇಮಂತ ಲಮಾಣಿ ಮತ್ತು ತಂಡದವರು ವಚನ ಗಾಯನ ಕಾರ್ಯಕ್ರಮ ನಡಸಿಕೊಟ್ಟರು. ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಗೋಪಾಲ ಲಮಾಣಿ, ಎಂ.ಪಿ.ರಾಠೊಡ, ಆರ್ .ಟಿ. ರಾಠೊಡ, ಎಸ್. ಪಿ.ರಾಠೊಡ, ಶೈಲಜ ಚವಾಣ, ಕೆ.ಸಿ. ಸತೀಶ್, ಮಾಜಿ ನಗರ ಸೇವಕಿ ಜಯಶ್ರೀ ಮಾಳಗಿ, ದಲಿತ ಮುಖಂಡ ಮಲ್ಲೇಶ ಚೌಗಲೆ ಉಪಸ್ಥಿತರಿದ್ದರು.
ಲಂಬಾಣಿ ವೇಷದಲ್ಲಿ ಸಚಿವರು: ಸೇವಾಲಾಲ ಜಯಂತಿಗೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಪಾರಂಪರಿಕ ಲಂಬಾಣಿ ವೇಷದಲ್ಲಿ ಬಂದು ಎಲ್ಲರ ಗಮನಸೆಳೆದರು. ಜಾನಪದ ಕಲಾವಿದರ ಜೊತೆಗೆ ಸೇವಾಲಾಲರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಸಚಿವರು, ಲಂಬಾಣಿ ಸಮುದಾಯದ ವಿಶೇಷ ಉಡುಪು ಧರಿಸಿ ಜಗ್ಗಲಗಿ ಬಾರಿಸುವ ಮೂಲಕ ಮೆರವಣಿಗೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.