ಬೆಳಗಾವಿ: ನಿತ್ಯ ಜೀವನದಲ್ಲಿ ಹಾಸು ಹೊಕ್ಕಿದೆ ವಿಜ್ಞಾನ- ಡೊಂಗರೆ


Team Udayavani, Mar 13, 2024, 2:27 PM IST

ಬೆಳಗಾವಿ: ನಿತ್ಯ ಜೀವನದಲ್ಲಿ ಹಾಸು ಹೊಕ್ಕಿದೆ ವಿಜ್ಞಾನ- ಡೊಂಗರೆ

ಉದಯವಾಣಿ ಸಮಾಚಾರ
ಬೆಳಗಾವಿ: ವಿಜ್ಞಾನವು ಮನುಷ್ಯ ಜೀವನದ ಅವಿಭಾಜ್ಯ ಅಂಗವಾಗಿದೆ. ವಿಜ್ಞಾನವಿಲ್ಲದೆ ಜಗತ್ತೇ ಇಲ್ಲ. ನಿತ್ಯ ಜೀವನದಲ್ಲಿ ವಿಜ್ಞಾನ ಹಾಸುಹೊಕ್ಕಾಗಿದ್ದು, ಗ್ರಾಮೀಣ ಜನರಿಗೂ ಇದರ ಬಗ್ಗೆ ಅರಿವು ಮೂಡಿಸಬೇಕು ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕರಾದ ಎಸ್‌ ಆರ್‌ ಡೊಂಗರೆ ಅಭಿಪ್ರಾಯಪಟ್ಟರು.

ಮಹಿಳಾ ಕಲ್ಯಾಣ ಸಂಸ್ಥೆ ಹಾಗೂ ಜಯಭಾರತ ಫೌಂಡೇಶನ್‌ ಸಹಯೋಗದಲ್ಲಿ ನಗರದ ಚಂದ್ರಗಿರಿ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಿಗೆ ವೈಜ್ಞಾನಿಕ ಮನೋಭಾವನೆ ಮೂಡಿಸುವ ವಿಜ್ಞಾನ ಒಂದು ಚಿಂತನೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಸಮಾಜದಲ್ಲಿ ಎದುರಾಗುವ ಅನೇಕ ಸಮಸ್ಯೆಗಳಿಗೆ ವಿಜ್ಞಾನದಿಂದ ಪರಿಹಾರ ಕಂಡುಕೊಳ್ಳಬಹುದು. ನಮ್ಮಲ್ಲಿ ಆಗುವ ಪ್ರತಿ ಬೆಳವಣಿಗೆಗೂ ವೈಜ್ಞಾನಿಕ ಕಾರಣವಿರುತ್ತದೆ.ಇದನ್ನು ಅರಿಯದೆ ಅನೇಕರು ಮೂಢನಂಬಿಕೆಗೆ ಬಲಿಯಾಗುತ್ತಿದ್ದು ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಹಾಗೂ ಸಂಶೋಧನೆ ಮೂಲಕ ಅಂಧಕಾರ ತೊಡೆದು ಹಾಕಬೇಕು ಎಂದರು.

ವಿಜಯಪುರ ಜಿಲ್ಲೆಯ ಗಣಿ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಬಿ ಎಸ್‌ ವಜ್ರದ ಮಾತನಾಡಿ,
ವಿಜ್ಞಾನ ಎಂಬುದು ನಾಶ ಮಾಡುವುದಲ್ಲ. ಇದು ಜಗತ್ತನ್ನು ಕಟ್ಟಲು ಬೇಕಾದ ಸಂಶೋಧನೆ, ಮಾನವೀಯ ಮೌಲ್ಯಗಳನ್ನು ಬೆಳೆಸುವ ಸಾಧನ. ಸತ್ಯವನ್ನು ಶೋಧಿಸಲು ವಿಜ್ಞಾನ ಇಂದಿನ ದಿನಮಾನಗಳಲ್ಲಿ ಅತ್ಯಗತ್ಯವಾಗಿದೆ ಎಂದರು.

ಚಂದ್ರಗಿರಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಎ ಎಲ್‌ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಎಸ್‌ ಬಿ ಮುನ್ನೊಳ್ಳಿ, ಅರ್ಜುನ ಶಿಂಧೆ, ಕರ್ನಾಟಕ ಪಬ್ಲಿಕ್‌ ಶಾಲೆಯ ಪ್ರಾಚಾರ್ಯ ಕಿರಣ ಚೌಗಲಾ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಗೌರವ ಕಾರ್ಯದರ್ಶಿ ವೈಜಯಂತಿ ಚೌಗಲಾ ಉಪಸ್ಥಿತರಿದ್ದರು. ಉಪನ್ಯಾಸಕಿ ಗಿರಿಜಾ ಸುಂಕದ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

1-belagavi

Belagavi: ಆಟೋ ಚಾಲಕನ ಮೇಲೆ ಅಪರಿಚಿತ ದುಷ್ಕರ್ಮಿಗಳಿಂದ ಹಲ್ಲೆ

ಅಕ್ರಮ ಆಸ್ತಿ ಸಂಪಾದನೆ ಆರೋಪ: ಬೆಳಗಾವಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಲೋಕಾಯುಕ್ತ ದಾಳಿ

Belagavi: ಅಕ್ರಮ ಆಸ್ತಿ ಸಂಪಾದನೆ ಆರೋಪ… ಬೆಳಗಾವಿ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ದಾಳಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.