ಚಿದಂಬರ ನಗರ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಪಾಟೀಲ
Team Udayavani, Jan 27, 2019, 11:04 AM IST
ಬೆಳಗಾವಿ: ಚಿದಂಬರ ನಗರದಲ್ಲಿನ ಸಮಸ್ಯೆಗಳಿಗೆ ಶೀಘ್ರದಲ್ಲಿಯೇ ಹಂತ ಹಂತವಾಗಿ ಪರಿಹಾರ ನೀಡಲಾಗುವುದು ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹೇಳಿದರು.
ಮಹಾನಗರ ಪಾಲಿಕೆಯ ನೂತನ ವಾರ್ಡ್ 43 ರ ಚಿದಂಬರ ನಗರದ ಚಿದಂಬರೇಶ್ವರ ದೇವಸ್ಥಾನದಲ್ಲಿ ಶನಿವಾರ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಗುಣಮಟ್ಟದ ರಸ್ತೆ, ವಿದ್ಯುತ್, ಕಸ ವಿಲೇವಾರಿ, ಹಿರಿಯರ ಸೇವಾ ಕೇಂದ್ರ, ಓಪನ್ ಜಿಮ್ ಸೇರಿದಂತೆ ಹಲವು ವಿಷಯಗಳ ಕುರಿತಂತೆ ಜನರು ಪ್ರಸ್ತಾಪ ಮಾಡಿದ್ದಾರೆ. ಈ ಎಲ್ಲವೂ ನನ್ನ ಗಮನಕ್ಕೆ ಬಂದಿದ್ದು, ಅವುಗಳನ್ನು ಹಂತ, ಹಂತವಾಗಿ ಆದ್ಯತೆ ಮೇರೆಗೆ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.
ನಾನು ಕೇವಲ ಭರವಸೆ ಕೊಟ್ಟು ಹೋಗುವ ವ್ಯಕ್ತಿಯಲ್ಲ. ಇಲ್ಲಿನ ಸಮಸ್ಯೆಗಳ ಕುರಿತು ನಾನೇ ಖುದ್ದಾಗಿ ಹೆಸ್ಕಾಂ, ನಗರ ನೀರು ಸರಬರಾಜು ಮಂಡಳಿ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಸಭೆ ನಡೆಸುವೆ. ಸಮಸ್ಯೆಗಳನ್ನು ಆಲಿಸಲು ಅವರನ್ನೇ ವಾರ್ಡಿಗೆ ಕಳಿಸುವುದಾಗಿ ಹೇಳಿದರು.
ನನ್ನ ಕ್ಷೇತ್ರದಲ್ಲಿ ಯಾರಾದರೂ ಕಳಪೆ ಕಾಮಗಾರಿ ಬಗ್ಗೆ ದೂರು ನೀಡಿದರೆ ನಾನೇ ಖುದ್ದು ಪರಿಶೀಲನೆಗೆ ಹೋಗುತ್ತೇನೆ. ನಂತರ ಈ ಕಾಮಗಾರಿ ಗುಣಮಟ್ಟವಾಗುವ ತನಕ ಸಂಬಂಧಿಸಿದ ಗುತ್ತಿಗೆದಾರನಿಗೆ ಹಣ ಪಾವತಿ ಮಾಡದಂತೆ ಅಧಿಕಾರಿಗಳಿಗೆ ಲಿಖಿತ ಪತ್ರ ನೀಡುತ್ತೇನೆ ಎಂದರು.
ಬೆಳಗಾವಿ ಜನರ ತೆರಿಗೆ ಮಹಾನಗರ ಪಾಲಿಕೆಗೆ ಸಂದಾಯವಾಗುತ್ತದೆ. ಹೀಗಾಗಿ ಇಲ್ಲಿ ನಗರ ಸೇವಕರ ಪಾತ್ರ ಹೆಚ್ಚಿಗಿದೆ. ಆದರೆ ಬಹುತೇಕ ಕಡೆಗೆ ನಗರ ಸೇವಕರು ತಮ್ಮ ವಾರ್ಡ್ ಭೇಟಿ ಕಾರ್ಯಕ್ರಮವನ್ನೇ ಮರೆತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ವಾರ್ಡ್ ಸಮಸ್ಯೆಗೆ ಸ್ಪಂದಿಸುವ ನಗರ ಸೇವಕರನ್ನು ಆಯ್ಕೆ ಮಾಡುವ ಗುರುತರ ಜವಾಬ್ದಾರಿ ನಿಮ್ಮೆಲ್ಲರ ಮೇಲಿದೆ ಎಂದರು.
ಹಿರಿಯ ವಕೀಲ ಎಸ್.ಎಂ. ಕುಲಕರ್ಣಿ, ಬಿಜೆಪಿ ಮುಖಂಡ ಆರ್.ಎಸ್. ಮುತಾಲಿಕ ದೇಸಾಯಿ, ವಿ.ಎನ್. ಜೋಶಿ, ಅರವಿಂದ ಹುನಗುಂದ, ಸಂಜೀವ ಕುಲಕರ್ಣಿ, ಮಹೇಶ್ ಮುಳಗುಂದ, ಪ್ರಶಾಂತ ಕುಲಕರ್ಣಿ, ಅನಂತರಾಮ ಕಲ್ಲೂರಾಯ, ಸ್ನೇಹಾ ಜೋಶಿ, ಅರುಣ ಉಪಸ್ಥಿತರಿದ್ದರು. ಸಂಘಟಕಿ ವಾಣಿ ವಿಲಾಸ ಜೋಶಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಆನಂದ ಪಾಟೀಲ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.